Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ದ.ಕ. ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ...

ದ.ಕ. ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ಸ್ಪೀಕರ್ ಯು.ಟಿ. ಖಾದರ್, ಸಚಿವರು, ಅಧಿಕಾರಿಗಳ ಸಭೆ

ಮೀನುಗಾರರ ಸಮಸ್ಯೆಗಳ ಬಗ್ಗೆ ವಿಸ್ತೃತ ಚರ್ಚೆ

ವಾರ್ತಾಭಾರತಿವಾರ್ತಾಭಾರತಿ1 Sept 2023 10:25 PM IST
share
ದ.ಕ. ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ಸ್ಪೀಕರ್ ಯು.ಟಿ. ಖಾದರ್, ಸಚಿವರು, ಅಧಿಕಾರಿಗಳ ಸಭೆ

ಮಂಗಳೂರು, ಸೆ.1: ದ.ಕ. ಜಿಲ್ಲೆಯ ವಿವಿಧ ಅಭಿವೃದ್ಧಿ ಕಾರ್ಯಗಳು ಹಾಗೂ ಮೀನುಗಾರರ ಸಮಸ್ಯೆಗಳ ಬಗ್ಗೆ ವಿಧಾನ ಸಭಾಧ್ಯಕ್ಷ ಯು.ಟಿ. ಖಾದರ್, ದ.ಕ.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಶುಕ್ರವಾರ ರಾಜ್ಯ ವಿಧಾನ ಸೌಧದಲ್ಲಿ ಉನ್ನತ ಮಟ್ಟದ ಸಭೆ ನಡೆದು ವಿಸ್ತೃತ ಚರ್ಚಿಸಲಾಯಿತು.

ಜಿಲ್ಲೆಯಲ್ಲಿ 3,406 ದೋಣಿಗಳ ಪೈಕಿ 1,660 ಮೋಟಾರೀಕೃತ ದೋಣಿಗಳು, 1,432 ಯಾಂತ್ರೀಕೃತ ದೋಣಿಗಳು, 314 ನಾಡ ದೋಣಿಗಳು ನೋಂದಣಿಯಾಗಿ ಕಾರ್ಯಚರಿಸುತ್ತಿವೆ. ಯಾಂತ್ರೀಕೃತ ದೋಣಿಗಳಿಗೆ ಈವರೆಗೆ ವಾರ್ಷಿಕ ಮಿತಿ 1.50 ಲಕ್ಷ ಕಿಲೋ ಲೀಟರ್ ಕರ ರಹಿತ ಡೀಸಲ್ ವಿತರಿಸಲಾಗುತ್ತಿತ್ತು. ಪ್ರಸಕ್ತ ಸಾಲಿನಿಂದ ಯಾಂತ್ರೀಕೃತ ದೋಣಿಗಳಿಗೆ ವಾರ್ಷಿಕ ಮಿತಿ 1.50 ಲಕ್ಷ ಕಿಲೋ ಲೀಟರ್‌ನಿಂದ 2.00 ಲಕ್ಷ ಕಿಲೋ ಲೀಟರ್‌ವರೆಗೆ ಹೆಚ್ಚಿಸಿ ಕರ ಡೀಸಲ್‌ನ್ನು ವಿತರಿಸಲು ಆದೇಶಿಸಲಾಗಿದೆ.

ಕೇಂದ್ರ ಸರಕಾರದಿಂದ ಪಡಿತರ ದರದ ಸೀಮೆಎಣ್ಣೆಯು ಅಗತ್ಯ ಪ್ರಮಾಣ ಮತ್ತು ಅವಶ್ಯಕತೆಯಿರುವಾಗ ಬಿಡುಗಡೆ ಯಾಗುತ್ತಿಲ್ಲ. ಹಾಗಾಗಿ ರಾಜ್ಯ ಸರಕಾರವು ನಾಡದೋಣಿ ಮಾಲಕರಿಗೆ ನಿರಂತರವಾಗಿ ರಾಜ್ಯದ ಅನುದಾನದಲ್ಲಿ ಸೀಮೆಎಣ್ಣೆ ಪೂರೈಸಲು ತೀರ್ಮಾನಿಸಿದೆ. ಈ ಹಿನ್ನೆಲೆಯಲ್ಲಿ ಕೈಗಾರಿಕಾ ಸೀಮೆಎಣ್ಣೆಯನ್ನು ಖರೀದಿಸಿ ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮ(ನಿ)ದ ಮೂಲಕ ನಾಡದೋಣಿ ಮಾಲಕರಿಗೆ ಸರಬರಾಜು ಮಾಡಲು ಹೊಸ ವ್ಯವಸ್ಥೆ ಯನ್ನು ಜಾರಿಗೆ ತರಲು ಸೂಚಿಸಲಾಗಿದೆ. ಕೈಗಾರಿಕಾ ಸೀಮೆಎಣ್ಣೆಯನ್ನು ಖರೀದಿಸುವ ನಾಡದೋಣಿ ಮಾಲಕರಿಗೆ ಪ್ರತಿ ಲೀಟರ್‌ಗೆ 35ರೂ.ನಂತೆ ರಿಯಾಯಿತಿ ನೀಡಲಾಗುವುದು ಎಂದು ಉಸ್ತುವಾರಿ ಸಚಿವರು ತಿಳಿಸಿದ್ದಾರೆ.

ಮಂಗಳೂರು ಮೀನುಗಾರಿಕೆ ಬಂದರಿನ 3ನೇ ಹಂತದ ಅಭಿವೃದ್ಧಿ ಕಾಮಗಾರಿಗೆ ಸಂಬಂಧಿಸಿದಂತೆ 49.50 ಕೋ.ರೂ.ವೆಚ್ಚದ ಅಂದಾಜು ಪಟ್ಟಿಯನ್ನು ತಯಾರಿಸಿ ಪ್ರಸ್ತಾವನೆಯನ್ನು ಸಲ್ಲಿಸಲಾಗಿದ್ದು, ಸಂಪುಟ ಸಭೆಯ ಅನುಮೋದನೆ ಪಡೆಯಬೇಕಾಗಿರುತ್ತದೆ.

ಮಂಗಳೂರು ಮೀನುಗಾರಿಕೆ ಬಂದರಿನ ವಾರ್ಫ್ ಮತ್ತು ಅಳಿವೆ ಬಾಗಿಲಿನಲ್ಲಿ ಹೂಳೆತ್ತುವ ಕಾಮಗಾರಿಗೆ 2.50 ಕೋ.ರೂ. ಅನುದಾನ ಒದಗಿಸಲಾಗಿದ್ದು, ಈ ತಿಂಗಳಲ್ಲಿ ಹೂಳೆತ್ತುವ ಕಾಮಗಾರಿ ಪ್ರಾರಂಭಿಸಲಾಗುತ್ತದೆ. ಬಂದರು ಇಲಾಖೆಯು 29 ಕೋ.ರೂ. ಅನುದಾನದಿಂದ ಹೂಳತ್ತುವ ಕಾಮಗಾರಿ ಕೈಗೆತ್ತಿಕೊಂಡಿದ್ದು ಟೆಂಡರ್ ಪ್ರಕ್ರಿಯೆ ಮುಗಿದಿದೆ. ಕಾರ್ಯಾದೇಶ ನೀಡಲು ಬಾಕಿ ಇರುತ್ತದೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

ಉಳ್ಳಾಲ ಕೋಡಿಯಲ್ಲಿ ನಾಡದೋಣಿಗಳಿಗೆ ಜಟ್ಟಿ ನಿರ್ಮಿಸಲು 6.50 ಕೋ.ರೂ. ಅನುದಾನದಲ್ಲಿ ಅಂದಾಜು ಪಟ್ಟಿ ತಯಾರಿಸಲಾಗಿದ್ದು, ಎನ್‌ಸಿಆರ್ ಎಂಪಿ ಯೋಜನೆಯಡಿ ಅನುದಾನ ಒದಗಿಸಲು ಪ್ರಸ್ತಾವನೆ ಸಲ್ಲಿಸಲಾಗಿದೆ.

ಜಿಲ್ಲೆಯಲ್ಲಿರುವ 14 ಕೊಂಡಿ ರಸ್ತೆಗಳು ಸಂಪೂರ್ಣ ಹಾಳಾಗಿದೆ. ಇದರ ದುರಸ್ತಿಗಾಗಿ 15 ಕೋ.ರೂ. ಅಗತ್ಯವಿದೆ. ಬಂದರುಗಳಲ್ಲಿ ಕಾರ್ಯನಿರ್ವಹಿಸುವ ಕಾರ್ಮಿಕರಿಗೆ ಆರ್ಥಿಕ ಬಲ ನೀಡುವ ಸಲುವಾಗಿ ದೋಣಿ ಮಾಲಕರ ಜೊತೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಬೇಕಾಗಿರುತ್ತದೆ ಎಂದು ಅಧಿಕಾರಿಗಳು ಸಭೆಯ ಗಮನ ಸೆಳೆದರು.

ಬೈಕಂಪಾಡಿ ಕೈಗಾರಿಕಾ ಪ್ರದೇಶದಿಂದ ಶುದ್ಧೀಕರಿಸಿದ ತ್ಯಾಜ್ಯ ನೀರನ್ನು ನದಿ ಮತ್ತು ಸಮುದ್ರಕ್ಕೆ ಬಿಡುವುದರಿಂದ ಮೀನಿನ ತಳಿ ನಶಿಸುತ್ತಿದೆ. ಈ ಬಗ್ಗೆ ಮೀನುಗಾರಿಕೆ ಇಲಾಖೆಯಿಂದ ಮೀನು ಸಂತತಿಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಜಿಲ್ಲೆಯ ನೇತ್ರಾವತಿ ನದಿ ಹಿನ್ನೀರಿನಲ್ಲಿ 6,129, ಫಲ್ಗುಣಿ ನದಿ ಹಿನ್ನೀರಿನಲ್ಲಿ 5000, ಶಾಂಭವಿ ನದಿ ಹಿನ್ನೀರಿನಲ್ಲಿ 5000 ಸಮುದ್ರ ಆಧಾರಿತ ತಳಿಯ ಮೀನುಮರಿಗಳನ್ನು ಬಿತ್ತನೆ ಮಾಡಲಾಗಿದೆ.

ಮೀನುಗಾರಿಕಾ ದೋಣಿಗಳಲ್ಲಿನ ಸೀಮೆಎಣ್ಣೆ ಇಂಜಿನ್‌ಗಳನ್ನು ಪೆಟ್ರೋಲ್/ಡೀಸಲ್ ಇಂಜಿನ್‌ಗಳಾಗಿ ಬದಲಾಯಿಸಲು ತಲಾ 50,000 ರೂ. ಸಹಾಯಧನ ನೀಡಲಾಗುವುದು. 2023-24ನೇ ಸಾಲಿನಲ್ಲಿ 4000 ಸೀಮೆಎಣ್ಣೆ ಇಂಜಿನ್‌ಗಳ ಬದಲಾವಣೆಗೆ 20 ಕೋ.ರೂ. ಸಹಾಯಧನ ಒದಗಿಸಲಾಗಿರುತ್ತದೆ.

ಮೀನುಗಾರ ಮಹಿಳೆಯರ ಆರ್ಥಿಕ ಸ್ವಾವಲಂಬನೆ ಹಾಗೂ ವಹಿವಾಟು ವಿಸ್ತರಣೆಗೆ ನೆರವಾಗಲು ಬ್ಯಾಂಕುಗಳಲ್ಲಿ ಬಡ್ಡಿರಹಿತವಾಗಿ ನೀಡುವ ಸಾಲದ ಮಿತಿಯನ್ನು 2023-24ನೇ ಸಾಲಿನಿಂದ 50,000 ರೂ.ಗಳಿಂದ 3 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗಿದೆ.

ಕುಳಾಯಿ ಮೀನುಗಾರಿಕೆ ಬಂದರಿನ ನಿರ್ಮಾಣವನ್ನು ಎನ್‌ಎಂಪಿಟಿ ಮೂಲಕ ಕೈಗೊಂಡಿದ್ದು, ಕೇಂದ್ರ ಮತ್ತು ರಾಜ್ಯ ಸರಕಾರದ ಅನುದಾನದ ಶೇ.50ರಷ್ಟು ಮೊತ್ತವನ್ನು ಎನ್‌ಎಂಪಿಟಿಗೆ ಬಿಡುಗಡೆ ಮಾಡಲಾಗಿದ್ದು, ಪ್ರಸ್ತುತ ಕಾಮಗಾರಿ ಪ್ರಗತಿಯಲ್ಲಿದೆ.

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಟಿಡಿಆರ್ ಬಳಕೆಯಲ್ಲಿ ಎದುರಾಗುತ್ತಿರುವ ಸಮಸ್ಯೆಗಳ ಕುರಿತೂ ಸಭೆಯಲ್ಲಿ ಚರ್ಚಿಸಲಾಯಿತು.

ಸಭೆಯಲ್ಲಿ ನಗರಾಭಿವೃದ್ದಿ ಸಚಿವ ಬೈರತಿ ಸುರೇಶ್, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಹಣಕಾಸು ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್, ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಮತ್ತಿತರರು ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X