ಧರ್ಮಸ್ಥಳ ಪ್ರಕರಣ | ಪಾಯಿಂಟ್ 13ರಲ್ಲಿ ಜಿಪಿಆರ್ ಕಾರ್ಯಾಚರಣೆ ಆರಂಭ

ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದಲ್ಲಿ ಅನಾಮಿಕ ಸಾಕ್ಷಿದಾರ ಗುರುತಿಸಿರುವ 13ನೇ ಸ್ಥಳದಲ್ಲಿ ಜಿಪಿಆರ್ ಕಾರ್ಯಾಚರಣೆ ಆರಂಭವಾಗಿದೆ.
ಕ್ಲಿಷ್ಟಕರವಾದ 13ನೇ ಸ್ಥಳದಲ್ಲಿ ಶೋಧ ಕಾರ್ಯಾಚರಣೆ ಕಳೆದ ಕೆಲವು ದಿನಗಳಿಂದ ಮುಂದೂಡಲ್ಪಡುತ್ತಿತ್ತು. ಇದೀಗ ಮಂಗಳವಾರ ಮಧ್ಯಾಹ್ನದ ವೇಳೆ ಇಲ್ಲಿ ಅಧಿಕೃತವಾಗಿ ಪರಿಶೀಲನಾ ಕಾರ್ಯ ಆರಂಭಿಸಿದ್ದಾರೆ.
ನೇತ್ರಾವತಿ-ಅಜೆಕುರಿ ರಸ್ತೆಯಲ್ಲಿ ನೇತ್ರಾವತಿ ನದಿ ಪಕ್ಕದ ಕಿಂಡಿ ಅಣೆಕಟ್ಟಿನ ಸಮೀಪದ 13ನೇ ಸ್ಥಳದಲ್ಲಿ ಸೋಮವಾರ ಮಧ್ಯಾಹ್ನ 3 ರಿಂದ 3:30ರ ವರೆಗೆ ಪ್ರಾಯೋಗಿಕ ಕಾರ್ಯಾಚರಣೆ ನಡೆದಿತ್ತು.
ಇಂದು ಎಸ್.ಐ.ಟಿ ತಂಡದ ಅಧಿಕಾರಿಗಳು 12.45 ರ ಸುಮಾರಿಗೆ ಸ್ಥಳಕ್ಕೆ ಆಗಮಿಸಿದ್ದಾರೆ. ಯಂತ್ರಗಳು ಸಿದ್ದವಾಗಿದೆ.
ಸ್ಥಳದಲ್ಲಿ ಬಿಗಿ ಬಂದೋಬಸ್ತ್ :
ಕಾರ್ಯಾಚರಣೆ ನಡೆಯಲಿರುವ ನೇತ್ರಾವತಿ ಅಜಿಕುರಿ ರಸ್ತೆಯನ್ನು ಸಂಪೂರ್ಣ ಮುಚ್ಚಲಾಗಿದೆ. ರಸ್ತೆಯ ಎರಡೂ ಬದಿಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ. ಸ್ಥಳದಲ್ಲಿಯೂ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ.
Next Story





