Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಧರ್ಮಸ್ಥಳ 'ಏಕ ಬಳಕೆಯ ಪ್ಲಾಸ್ಟಿಕ್ ಮುಕ್ತ...

ಧರ್ಮಸ್ಥಳ 'ಏಕ ಬಳಕೆಯ ಪ್ಲಾಸ್ಟಿಕ್ ಮುಕ್ತ ನಗರ': ಸಚಿವ ಈಶ್ವರ್ ಖಂಡ್ರೆ ಘೋಷಣೆ

ವಾರ್ತಾಭಾರತಿವಾರ್ತಾಭಾರತಿ5 Feb 2024 2:36 PM IST
share
ಧರ್ಮಸ್ಥಳ ಏಕ ಬಳಕೆಯ ಪ್ಲಾಸ್ಟಿಕ್ ಮುಕ್ತ ನಗರ: ಸಚಿವ ಈಶ್ವರ್ ಖಂಡ್ರೆ ಘೋಷಣೆ

ಬೆಳ್ತಂಗಡಿ, ಫೆ.5: ಪ್ಲಾಸ್ಟಿಕ್ ಅತ್ಯಂತ ಅಪಾಯಕಾರಿ ತ್ಯಾಜ್ಯವಾಗಿದ್ದು, ಅದರಿಂದ ಪರಿಸರವನ್ನು ರಕ್ಷಿಸುವ ಅಗತ್ಯವಿದೆ. ಅದಕ್ಕಾಗಿ ರಾಜ್ಯದಲ್ಲಿ ಧರ್ಮಸ್ಥಳ ಸಹಿತ ಐದು ನಗರಗಳನ್ನು ಏಕ ಬಳಕೆಯ ಪ್ಲಾಸ್ಟಿಕ್ ಮುಕ್ತ ನಗರಗಳೆಂದು ರಾಜ್ಯ ಸರಕಾರ ಗುರುತಿಸಿದೆ. ಈ ನಗರಗಳನ್ನು ಪ್ಲಾಸ್ಟಿಕ್ ಮುಕ್ತವಾಗಿಸಲು ಸರಕಾರ ಸ್ಥಳೀಯಾಡಳಿತಗಳು ಹಾಗೂ ಜನರು ಒಟ್ಟಾಗಿ ಪ್ರಯತ್ನಿಸುವ ಅಗತ್ಯವಿದೆ ಎಂದು ಅರಣ್ಯ ಹಾಗೂ ಪರಿಸರ ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ.

ಅವರು ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಸೋಮವಾರ ಧರ್ಮಸ್ಥಳವನ್ನು 'ಏಕಬಳಕೆಯ ಪ್ಲಾಸ್ಟಿಕ್ ಮುಕ್ತ ನಗರ' ಎಂದು ಘೋಷಿಸಿ ಮಾತನಾಡುತ್ತಿದ್ದರು.

ಲಕ್ಷಾಂತರ ಭಕ್ತರು ಆಗಮಿಸುವ ಶ್ರೀ ಕ್ಷೇತ್ರ ಧರ್ಮಸ್ಥಳವು ಪವಿತ್ರ ನಗರವಾಗಿ ಉಳಿಯಬೇಕು ಎಂಬ ಗುರಿಯೊಂದಿಗೆ ಧರ್ಮಸ್ಥಳವನ್ನು ಏಕ ಬಳಕೆಯ ಪ್ಲಾಸ್ಟಿಕ್ ಮುಕ್ತ ನಗರವೆಂದು ಘೋಷಿಸಲಾಗಿದೆ. ಸರಕಾರಗಳು ಕಾನೂನುಗಳನ್ನು ಮಾಡಬಹುದು. ಆದರೆ ಜನರು ಜಾಗೃತರಾಗದ ಹೊರತು ಅವು ಸಮರ್ಪಕ ಅನುಷ್ಠಾನವಾಗಲು ಸಾಧ್ಯವಿಲ್ಲ. ಆದ್ದರಿಂದ ಧರ್ಮಸ್ಥಳ ತ್ಯಾಜ್ಯಮುಕ್ತ ಕ್ಷೇತ್ರವನ್ನಾಗಿ ರೂಪಿಸಲು ಭಕ್ತರು ಕೈಜೋಡಿಸಬೇಕು ಎಂದು ಅವರು ಕರೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಧರ್ಮಸ್ಥಳ ಕ್ಷೇತ್ರದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ, ಶ್ರೀ ಕ್ಷೇತ್ರ ಧರ್ಮಸ್ಥಳವನ್ನು ಸ್ವಚ್ಛವಾಗಿರಿಸಲು ಕ್ಷೇತ್ರದ ವತಿಯಿಂದ, ಸ್ಥಳೀಯ ಗ್ರಾಮ ಪಂಚಾಯತ್ ವತಿಯಿಂದ ನಿರಂತರ ಪ್ರಯತ್ನಗಳು ನಡೆಯುತ್ತಿವೆ. ಇದರಿಂದಾಗಿಯೇ ಕ್ಷೇತ್ರಕ್ಕೆ ಅತ್ಯಂತ ಸ್ವಚ್ಛ ದಾರ್ಮಿಕ ನಗರ ಎಂಬ ಪ್ರಶಸ್ತಿಯೂ ಲಭಿಸಿದೆ. ಇದೀಗ ಪ್ಲಾಸ್ಟಿಕ್ ಮುಕ್ತ ನಗರವೆಂದು ರಾಜ್ಯ ಸರಕಾರ ಘೋಷಿಸಿರುವುದು ಉತ್ತಮ ಬೆಳವಣಿಗೆಯಾಗಿದೆ. ಕ್ಷೇತ್ರದಲ್ಲಿನ ತ್ಯಾಜ್ಯಗಳನ್ನು ಮರುಬಳಕೆ ಮಾಡುವ ದೃಷ್ಟಿಯಿಂದ ವಿಶೇಷ ಯಂತ್ರಗಳನ್ನು ತರಿಸಲಾಗುತ್ತಿದ್ದು, ಪ್ಲಾಸ್ಟಿಕ್ ಸೇರಿದಂತೆ ಎಲ್ಲ ತ್ಯಾಜ್ಯಗಳನ್ನು ಇಲ್ಲಿ ಯಾವುದಾದರೂ ರೂಪದಲ್ಲಿ ಮರುಬಳಕೆ ಮಾಡಲಾಗುವುದು ಎಂದರು.

ಧರ್ಮಸ್ಥಳ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಶ್ರೀನಿವಾಸರಾವ್ ಮಾತನಾಡಿ, ಧರ್ಮಸ್ಥಳವನ್ನು ಏಕಬಳಕೆಯ ಪ್ಲಾಸ್ಟಿಕ್ ಮುಕ್ತವಾಗಿಸುವ ನಿಟ್ಟಿನಲ್ಲಿ ಧರ್ಮಸ್ಥಳ ಗ್ರಾಪಂನಿಂದ ಕೈಗೊಂಡಿರುವ ಕ್ರಮಗಳ ಬಗ್ಗೆ ವಿವರಿಸಿದರು.

ವೇದಿಕೆಯಲ್ಲಿ ಗ್ರಾಪಂ ಅಧ್ಯಕ್ಷೆ ವಿಮಲಾ, ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಂ, ಜಿಪಂ ಉಪ ಕಾರ್ಯದರ್ಶಿ ಡಾ,ರಘು ಹಾಗೂ ಇತರರು ಉಪಸ್ಥಿತರಿದ್ದರು.

ದೇವಿಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು.

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿದ ಸಚಿವರನ್ನು ಕ್ಷೇತ್ರದ ಪರವಾಗಿ ಸ್ವಾಗತಿಸಲಾಯಿತು. ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪ್ರಜೆ ಸಲ್ಲಿಸಿದ ಸಚಿವರು, ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X