ಧರ್ಮಸ್ಥಳ ಪ್ರಕರಣ| ಬೆಳ್ತಂಗಡಿ ನ್ಯಾಯಾಲಯದಲ್ಲಿ ಹೇಳಿಕೆ ನೀಡಿದ ಆರೋಪಿ ಚಿನ್ನಯ್ಯ

ಬೆಳ್ತಂಗಡಿ : ಬುರುಡೆ ಪ್ರಕರಣ ಸಂಬಂಧ ಆರೋಪಿ ಚಿನ್ನಯ್ಯ ಬೆಳ್ತಂಗಡಿ ನ್ಯಾಯಾಲಯದಲ್ಲಿ BNSS 183 ಹೇಳಿಕೆ ನೀಡಲು ಸೆ.23 ರಂದು ಶಿವಮೊಗ್ಗ ಜೈಲಿನಿಂದ ಪೊಲೀಸರು ಬೆಳ್ತಂಗಡಿ ಕೋರ್ಟ್ ಗೆ ಕರೆದುಕೊಂಡು ಬಂದು ಹಾಜರುಪಡಿಸಿದ್ದಾರೆ.
ಪ್ರಕರಣದ ಬಗ್ಗೆ ಚಿನ್ನಯ್ಯ ಕೋರ್ಟ್ ನಲ್ಲಿ ನ್ಯಾಯಾಧೀಶರ ಮುಂದೆ ಹೇಳಿಕೆ ನೀಡಿದ್ದಾನೆ ಎಂದು ತಿಳಿದುಬಂದಿದೆ.
ಆರೋಪಿ ಚಿನ್ನಯ್ಯ 3 ಗಂಟೆಗೆ ಬೆಳ್ತಂಗಡಿ ಹೆಚ್ಚುವರಿ ನ್ಯಾಯಾಲಯದ ನ್ಯಾಯಾಧೀಶರಾದ ವಿಜಯೇಂದ್ರ ಎಚ್.ಟಿ ಮುಂದೆ ಹಜರುಪಡಿಸಿ ಹೇಳಿಕೆ ದಾಖಲಿಸುವ ಕಾರ್ಯ ಆರಂಭಿಸಲಾಗಿತ್ತು. ಸಂಜೆ 6:30 ಗಂಟೆಗೆ ನ್ಯಾಯಾಲಯದ ಪ್ರಕ್ರಿಯೆಗಳನ್ನು ಮುಗಿಸಿ ಆತನನ್ನು ವಾಪಸ್ ಶಿವಮೊಗ್ಗ ಜೈಲಿಗೆ ಪೊಲೀಸರು ಕರೆದುಕೊಂಡು ಹೋಗಿದ್ದಾರೆ.
Next Story





