ಧರ್ಮಸ್ಥಳ ಪ್ರಕರಣ| ಬೆಳ್ತಂಗಡಿ ನ್ಯಾಯವಾದಿ ಧನಂಜಯ ಕೆ.ವಿ. ವಿರುದ್ಧ ಎಸ್.ಐ.ಟಿ.ಗೆ ದೂರ

ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನ್ಯಾಯವಾದಿ ಕೆ.ವಿ. ಧನಂಜಯ್ ಹಾಗೂ ಅವರ ತಂಡದ ವಿರುದ್ಧ ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಧರ್ಮಸ್ಥಳ ಗ್ರಾಮಸ್ಥರು ದೂರು ನೀಡಿದ್ದಾರೆ ಎಂದು ತಿಳಿದುಬಂದಿದೆ.
ದೂರುದಾರ ಚಿನ್ನಯ್ಯ ತನ್ನ ಹೇಳಿಕೆಯಲ್ಲಿ ಸುಪ್ರೀಂ ಕೋರ್ಟ್ ನ್ಯಾಯವಾದಿ ಕೆವಿ ಧನಂಜಯ್ ಅವರಿಗೆ ಎಲ್ಲ ದಾಖಲೆಗಳನ್ನು ನೀಡಿರುವುದಾಗಿ ತಿಳಿಸಿದ್ದು, ಈ ಹಿನ್ನಲೆಯಲ್ಲಿ ಕೆ.ವಿ ಧನಂಜಯ್ ಅವರ ಬಳಿ ಇರುವ ದಾಖಲೆಗಳು ಏನು ಎಂಬ ಬಗ್ಗೆ ಪರಿಶೀಲನೆ ನಡೆಸಬೇಕು, ಅವರನ್ನು ವಿಚಾರಣೆಗೆ ಒಳಪಡಿಸಿ ಮಾಹಿತಿಗಳನ್ನು ಹೊರತರಬೇಕು ಎಂದು ದೂರಿನಲ್ಲಿ ಒತ್ತಾಯಿಸಲಾಗಿದೆ.
ದೂರಿನಲ್ಲಿ ಕೆ.ವಿ ಧನಂಜಯ ಅವರ ವಿರುದ್ಧ ಹಾಗೂ ಅವರೊಂದಿಗಿದ್ದ ನ್ಯಾಯವಾದಿಗಳಾದ ಓಜಸ್ವಿ ಗೌಡ, ಸಚಿನ್ ದೇಶಪಾಂಡೆ, ದಿವಿನ್ ಧೀರಜ್, ಮಂಜುನಾಥ್ ಎಂಬವರ ವಿರುದ್ಧವೂ ದೂರು ನೀಡಲಾಗಿದೆ. ದೂರನ್ನು ಸ್ವೀಕರಿಸಿರುವ ಎಸ್.ಐ.ಟಿ ಈ ಬಗ್ಗೆ ತನಿಖೆ ನಡೆಸುವುದಾಗಿ ಹಿಂಬರಹ ನೀಡಿದ್ದಾರೆ ಎಂದು ತಿಳಿದುಬಂದಿದೆ.
Next Story





