Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಧರ್ಮಸ್ಥಳ ಪ್ರಕರಣ: ದೂರುದಾರ ಚಿನ್ನಯ್ಯನೇ...

ಧರ್ಮಸ್ಥಳ ಪ್ರಕರಣ: ದೂರುದಾರ ಚಿನ್ನಯ್ಯನೇ ಮೊದಲ ಆರೋಪಿ!

ವಾರ್ತಾಭಾರತಿವಾರ್ತಾಭಾರತಿ28 Aug 2025 12:39 PM IST
share
ಧರ್ಮಸ್ಥಳ ಪ್ರಕರಣ: ದೂರುದಾರ ಚಿನ್ನಯ್ಯನೇ ಮೊದಲ ಆರೋಪಿ!

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಡಲಾಗಿದೆ ಎಂಬ ಆರೋಪದ ಪ್ರಕರಣವು ದಿನಕ್ಕೊಂದು ತಿರುವು ಪಡೆಯುತ್ತಿದೆ. ಅನಾಮಿಕ ದೂರುದಾರನಾಗಿ ಗುರುತಿಸಿಕೊಂಡಿದ್ದ ಚಿನ್ನಯ್ಯ ಎಂಬ ವ್ಯಕ್ತಿಯನ್ನೇ ವಿಶೇಷ ತನಿಖಾ ದಳ (ಎಸ್‌ಐಟಿ) ಪ್ರಥಮ ಆರೋಪಿ (A-1) ಯನ್ನಾಗಿ ಮಾಡಿ, ಹತ್ತು ಹೊಸ ಭಾರತೀಯ ನ್ಯಾಯ ಸಂಹಿತೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದೆ ಎಂದು ಎಸ್ ಐಟಿ ಮೂಲಗಳಿಂದ ತಿಳಿದು ಬಂದಿದೆ.

ಈತ ನ್ಯಾಯಾಲಯಕ್ಕೆ ತಂದಿರುವ ತಲೆಬುರುಡೆಯ ವಿಚಾರದಲ್ಲಿ ಈ ಎಲ್ಲ ಬೆಳವಣಿಗೆಗಳು ನಡೆಯುತ್ತಿವೆ. ತಲೆಬುರುಡೆಯನ್ನು ತೆಗೆದ ಜಾಗದ ಮಹಜರು ಪ್ರಕ್ರಿಯೆ ಇನ್ನೂ ಮಾಡಲು ಸಾಧ್ಯವಾಗಿಲ್ಲ. ಈತ ನ್ಯಾಯಾಲಯಕ್ಕೆ ಸುಳ್ಳು ಮಾಹಿತಿ ನೀಡಿ ಇಡೀ ವ್ಯವಸ್ಥೆಯನ್ನು ಗೊಂದಲಕ್ಕೆ ಸಿಲುಕಿಸಿದ್ದಾನೆ ಎಂದು ಆರೋಪಿಸಲಾಗಿದೆ.

ಈತ ನ್ಯಾಯಾಧೀಶರ ಮುಂದೆ ಸೆಕ್ಷನ್ 164 ಅಡಿಯಲ್ಲಿ ಹೇಳಿಕೆಯನ್ನು ದಾಖಲಿಸಿದ್ದು, ಈ ಹೇಳಿಕೆಯ ವೇಳೆ ನೀಡಿದ್ದ ಹೇಳಿಕೆಗೆ ವ್ಯತಿರಿಕ್ತವಾಗಿ ಆತ ಇದೀಗ ಎಸ್.ಐ.ಟಿಗೆ ಹೇಳಿಕೆ ನೀಡಿದ್ದಾನೆ. ಅಲ್ಲದೆ ಈತನ ಹೊಸ ಹೇಳಿಕೆಯನ್ನು ನ್ಯಾಯಾಧೀಶರ ಮುಂದೆ ದಾಖಲಿಸಲಾಗಿದ್ದು ಅದರ ಆಧಾರದ ಮೇಲೆ ತನಿಖೆ ನಡೆಯುತ್ತಿದೆ ಎಂದು ತಿಳಿದು ಬಂದಿದೆ.

ಇದೀಗ ಪ್ರಕರಣದಲ್ಲಿ ಈ ಹಿಂದೆ ದಾಖಲಾಗಿದ್ದ ಪ್ರಕರಣ 39/25ರಲ್ಲಿ ಹೊಸದಾಗಿ ಹಲವು ಸೆಕ್ಷನ್ ಗಳನ್ನು ಸೇರಿಸಲಾಗಿದೆ. ಈಗ ದಾಖಲಾಗಿರುವ ಹೊಸ ಪ್ರಕರಣಗಳ ಬಗ್ಗೆ ನ್ಯಾಯಾಲಯದಿಂದ ಮಾಹಿತಿಗಳು ಲಭ್ಯವಾಗುತ್ತಿಲ್ಲವಾದರೂ ಲಭ್ಯ ಮಾಹಿತಿಗಳಂತೆ ಇದೀಗ ಸಾಕ್ಷಿ ದೂರುದಾರನಾಗಿ ಬಂದ ಚಿನ್ನಯ್ಯನ ವಿರುದ್ದ BNS 336 (ಸುಳ್ಳು ಮಾಹಿತಿ ನೀಡಿ ಸಾರ್ವಜನಿಕರನ್ನು ಭಯಭೀತಗೊಳಿಸುವುದು), 230 (ಸಾರ್ವಜನಿಕ ಸೇವಕರಿಗೆ ತಪ್ಪು ಮಾಹಿತಿ ನೀಡುವುದು), 231 (ನ್ಯಾಯಾಲಯದ ಕಾರ್ಯಕ್ಕೆ ಅಡ್ಡಿಪಡಿಸುವುದು), 229 (ಸುಳ್ಳು ಸಾಕ್ಷ್ಯ ನೀಡುವುದು), 227 (ಸಾರ್ವಜನಿಕ ಶಾಂತಿ ಕದಡುವುದು), 228 (ನ್ಯಾಯಾಲಯಕ್ಕೆ ಅಪಮಾನ ಮಾಡುವುದು), 240 (ತಪ್ಪು ಮಾಹಿತಿ ನೀಡಿ ತನಿಖೆ ದಿಕ್ಕು ತಪ್ಪಿಸುವುದು), 236 (ಪಿತೂರಿ), 233 (ತಪ್ಪಾಗಿ ಜನರನ್ನು ಪ್ರೇರೇಪಿಸುವುದು) ಮತ್ತು 248 (ಸುಳ್ಳು ದೂರು ನೀಡಿ ಸಮಯ ಹಾಳುಮಾಡುವುದು) ಸೆಕ್ಷನ್ ಅಡಿಯಲ್ಲಿ ದೂರು ದಾಖಲಿಸಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.

ಇದೀಗ ಮಹೇಶ್ ಶೆಟ್ಟಿ ಮನೆಯಲ್ಲಿದ್ದ ಚಿನ್ನಯ್ಯನಿಗೆ ಸೇರಿದ ವಸ್ತುಗಳನ್ನು ವಶಪಡಿಸಿಕೊಂಡು ಮಹಜರು ಮಾಡುವ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಾಗಿದೆ.

ಚಿನ್ನಯ್ಯನ ವಿರುದ್ದ ದಾಖಲಾಗಿರುವ ಪ್ರಕರಣಗಳ ಬಗ್ಗೆ ಹಾಗೂ ಈತ ಹೊಸದಾಗಿ ನಿಡಿರುವ ಹೇಳಿಕೆಗಳನ್ನು ನ್ಯಾಯಾಲಯ ಗೌಪ್ಯವಾಗಿ ಇರಿಸಿದೆ. ಈತನ ವಿರುದ್ದ ಪ್ರಕರಣ ದಾಖಲಾಗಿದ್ದರೂ ಈತನಿಗೆ ನೀಡಲಾಗಿರುವ ಸಾಕ್ಷಿ ಸಂರಕ್ಷಣೆ ಇನ್ನು ಮುಂದುವರಿದಿದ್ದು, ಈ ಕಾರಣದಿಂದಾಗಿ ಮಾಹಿತಿಗಳನ್ನು ಬಹಿರಂಗ ಪಡಿಸಲಾಗುತ್ತಿಲ್ಲ ಎಂದು ತಿಳಿದು ಬಂದಿದೆ.

ಎಸ್.ಐ.ಟಿ‌ ಅಧಿಕಾರಿಗಳು ನ್ಯಾಯಾಲಯದ ಮುಂದೆ ಈ ಪ್ರಕರಣದ ಮಾಹಿತಿಗಳನ್ನು ಗೌಪ್ಯವಾಗಿಡುವಂತೆ ಮನವಿ ಮಾಡಿದ್ದು, ನ್ಯಾಯಾಲಯ ಇದಕ್ಕೆ ಒಪ್ಪಿ ಗೆ ನೀಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X