ಧರ್ಮಸ್ಥಳ ಪ್ರಕರಣ: ಎಸ್ಐಟಿಯಿಂದ ಮಂಗಳೂರಿನಲ್ಲಿ ಸಭೆ

ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಮೃತದೇಹಗಳನ್ನು ಹೂಳಲಾಗಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿ ತನಿಖೆಗೆ ರಚನೆಯಾಗಿರುವ ಎಸ್ಐಟಿ ಇದೀಗ ಮಂಗಳೂರಿನಲ್ಲಿ ಸಭೆ ನಡೆಸುತ್ತಿದೆ.
ಕದ್ರಿಯಲ್ಲಿರುವ ಐಬಿ ಕಚೇರಿಯಲ್ಲಿ ನಡೆಯುತ್ತಿರುವ ಸಭೆ ಡಿಐಜಿ ಎಂ.ಎನ್.ಅನುಚೇತ್, ತನಿಖಾಧಿಕಾರಿ ಜಿತೇಂದ್ರ ದಯಾಮ್ ಹಾಗೂ ದ.ಕ, ಉಡುಪಿ, ಉ.ಕ ಜಿಲ್ಲೆಗಳಿಂದ ನೇಮಿಸಲ್ಪಟ್ಟ ತನಿಖಾ ತಂಡದ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದಾರೆ. ಇದರಲ್ಲಿ ಧರ್ಮಸ್ಥಳ, ಎಸ್ಐ, ಮೂಲ್ಕಿ, ಬೈಂದೂರು ಇನ್ ಸ್ಪೆಕ್ಟರ್ಗಳು ಭಾಗವಹಿಸಿದ್ದಾರೆ ಎಂದು ತಿಳಿದುಬಂದಿದೆ.
Next Story





