ಧರ್ಮಸ್ಥಳ ಪ್ರಕರಣ| ಎಸ್.ಐ.ಟಿ ಅಧಿಕಾರಿಗಳಿಂದ ಬಂಗ್ಲೆಗುಡ್ಡೆಯಲ್ಲಿ ಮತ್ತೆ ಪರಿಶೀಲನೆ

ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣ ಸಂಬಂಧ ಎಸ್.ಐ.ಟಿ ಅಧಿಕಾರಿಗಳು ಬಂಗ್ಲೆಗುಡ್ಡೆ ಪ್ರದೇಶಕ್ಕೆ ಮಂಗಳವಾರ ಆಗಮಿಸಿ ಪರಿಶೀಲನೆ ನಡೆಸಿದ್ದು, ಎಸ್.ಐ.ಟಿ ಅಧಿಕಾರಿಗಳ ಆಗಮನ ಕುತೂಹಲಕ್ಕೆ ಕಾರಣವಾಗಿದೆ.
ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ನೇತ್ರಾವತಿಯ ಬಂಗ್ಲೆಗುಡ್ಡೆ ಪ್ರದೇಶಕ್ಕೆ ಎಸ್.ಐ.ಟಿ ಅಧಿಕಾರಿಗಳು PWD ಇಂಜಿನಿಯರ್ ಜೊತೆಯಲ್ಲಿ ಸೆ.30 ರಂದು ಸಂಜೆ 4ಕ್ಕೆ ಆಗಮಿಸಿ ಪರಿಸರದ ಅರಣ್ಯದಲ್ಲಿ ಪರಿಶೀಲನೆ ನಡೆಸಿದ್ದಾರೆ.
ಇಲ್ಲಿ ಈ ಹಿಂದೆ ಪರಿಶೀಲನೆ ನಡೆಸಿದ ವೇಳೆ ಏಳು ಮೃತದೇಹಗಳ ಅವಶೇಷಗಳು ಪತ್ತೆಯಾಗಿದ್ದವು. ಈ ಹಿನ್ನಲೆಯಲ್ಲಿ ಸ್ಥಳದ ಮ್ಯಾಪ್ ತಯಾರಿಸಲು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳೊಂದಿಗೆ ಎಸ್.ಐ.ಟಿ ಅಧಿಕಾರಿಗಳು ಸ್ಥಳಕ್ಕೆ ತೆರಳಿರುವುದಾಗಿ ತಿಳಿದು ಬಂದಿದೆ. ಅರ್ಧ ಗಂಟೆಯ ಬಳಿಕ ಅಧಿಕಾರಿಗಳು ತಮ್ಮ ಕಾರ್ಯ ಮುಗಿಸಿ ಹಿಂತಿರುಗಿದ್ದಾರೆ ಎಂದು ತಿಳಿದುಬಂದಿದೆ.
Next Story





