ಧರ್ಮಸ್ಥಳ ಪ್ರಕರಣ: ಬಂಟ್ವಾಳದ ಪ್ರದೀಪ್ ನನ್ನು ಕೋರ್ಟ್‌ಗೆ ಹಾಜರುಪಡಿಸಿದ ಎಸ್.ಐ.ಟಿ

ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿತೆ ಸಾಕ್ಷಿ ದೂರುದಾರ ಚಿನ್ನಯ್ಯ ತಂದಿದ್ದ ಬುರುಡೆಯ ಬಗ್ಗೆ ವಿಚಾರಣೆ ನಡೆಸುತ್ತಿರುವ ಎಸ್.ಐ.ಟಿ ಅಧಿಕಾರಿಗಳು ಬಂಟ್ವಾಳದ ಪ್ರದೀಪ್ ಎಂಬಾತನನ್ನು ಬೆಳ್ತಂಗಡಿ ಕೋರ್ಟ್‌ಗೆ ಹಾಜರುಪಡಿಸಿದ್ದಾರೆ.
ಬೆಳ್ತಂಗಡಿ ಪ್ರಧಾನ ವ್ಯವಹಾರಿಕ ನ್ಯಾಯಾಧೀಶರಾದ ಸಂದೇಶ್ ಅವರ ಮುಂದೆ ಸೆ.12ರಂದು 3 ಗಂಟೆಗೆ ಬುರುಡೆ ಪ್ರಕರಣದಲ್ಲಿ ಸೌಜನ್ಯ ಮಾವ ವಿಠಲ್ ಗೌಡನ ಜೊತೆ ಸಹಾಯಕನಾಗಿದ್ದ ಎಂದು ಬಂಟ್ವಾಳ ನಿವಾಸಿ ಪ್ರದೀಪ್ ಎಂಬಾತನನ್ನು ಸಾಕ್ಷಿ ಹೇಳಿಸಲು ಎಸ್.ಐ.ಟಿ ಅಧಿಕಾರಿಗಳು ಹಾಜರುಪಡಿಸಿದ್ದಾರೆ. ನ್ಯಾಯಾಧೀಶರ ಮುಂದೆ ಈತ ಹೇಳಿಕೆ ನೀಡಲಿದ್ದಾನೆ ಎಂದು ತಿಳಿದು ಬಂದಿದೆ.
Next Story





