ಧರ್ಮಸ್ಥಳ| ಕೆಎಸ್ಸಾರ್ಟಿಸಿ ಬಸ್‌ಗೆ ಕಲ್ಲೆಸೆತ; ಪ್ರಕರಣ ದಾಖಲು

ಬೆಳ್ತಂಗಡಿ; ಧರ್ಮಸ್ಥಳದಿಂದ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ಸಿಗೆ ದುಷ್ಕರ್ಮಿಗಳು ಧರ್ಮಸ್ಥಳ ಗ್ರಾಮದ ಪುದುವೆಟ್ಟು ಕ್ರಾಸ್ ಬಳಿ ಕಲ್ಲು ಹೊಡೆದು ಬಸ್ಸಿಗೆ ಹಾನಿಯುಂಟುಮಾಡಿದ ಘಟನೆ ಮಂಗಳವಾರ ಸಂಭವಿಸಿದ್ದು ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಈ ಬಗ್ಗೆ ಧರ್ಮಸ್ಥಳ ಡಿಪ್ಪೋದ ಸಂಚಾರ ನಿಯಂತ್ರಕ ಪಿ ದಾವೂದ್ ಎಂಬವರು ಪೊಲೀಸರಿಗೆ ದೂರು ನೀಡಿದ್ದಾರೆ.
ಕೆ.ಎ 21 ಎಫ್ 0103 ನಂಬರ್ ನ ಬಸ್ಸನ್ನು ಚಾಲಕ ಧರ್ಮಸ್ಥಳ ದಿಂದ ಸುಬ್ರಹ್ಮಣ್ಯದ ಕಡೆಗೆ ಚಲಾಯಿಸುತ್ತಿದ್ದ ವೇಳೆ ಧರ್ಮಸ್ಥಳ ಗ್ರಾಮದ ಪುದುವೆಟ್ಟು ಕ್ರಾಸ್ ಸಮೀಪ ಎದುರಿನಿಂದ ದ್ವಿಚಕ್ರ ವಾಹನದಲ್ಲಿ ಬಂದ ಸವಾರನೋರ್ವ ಬಸ್ಸಿನ ಮುಂಭಾಗದ ಗಾಜಿಗೆ ಕಲ್ಲು ಹೊಡೆದಿದ್ದು ಗ್ಲಾಸ್ ಓಡೆದು ಹೋಗಿದೆ. ಇದರಿಂದ ಸುಮಾರು 15ಸಾವಿ ರೂ ನಷ್ಟ ಸಂಭವಿಸಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
Next Story





