Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಧರ್ಮಸ್ಥಳ| ದೂರುದಾರ ಗುರುತಿಸಿದ...

ಧರ್ಮಸ್ಥಳ| ದೂರುದಾರ ಗುರುತಿಸಿದ ಸ್ಥಳದಲ್ಲಿ ಹರಿದ ಕೆಂಪು ಬ್ಲೌಸ್, ಪಾನ್ ಕಾರ್ಡ್, ಎಟಿಎಂ ಕಾರ್ಡ್ ಪತ್ತೆ; ಸುಜಾತಾ ಭಟ್ ಪರ ವಕೀಲರು

ಎಸ್ಐಟಿಯಿಂದ ಶ್ಲಾಘನೀಯ ಕಾರ್ಯಾಚರಣೆ ಎಂದ ಸುಜಾತಾ ಭಟ್ ಪರ ವಕೀಲರು

ವಾರ್ತಾಭಾರತಿವಾರ್ತಾಭಾರತಿ30 July 2025 4:36 PM IST
share
ಧರ್ಮಸ್ಥಳ| ದೂರುದಾರ ಗುರುತಿಸಿದ ಸ್ಥಳದಲ್ಲಿ ಹರಿದ ಕೆಂಪು ಬ್ಲೌಸ್, ಪಾನ್ ಕಾರ್ಡ್, ಎಟಿಎಂ ಕಾರ್ಡ್ ಪತ್ತೆ; ಸುಜಾತಾ ಭಟ್ ಪರ ವಕೀಲರು

ಮಂಗಳೂರು: ಧರ್ಮಸ್ಥಳ ದೂರಿಗೆ ಸಂಬಂಧಿಸಿದಂತೆ ಸಾಕ್ಷಿ ದೂರುದಾರ ಗುರುತು ಪಡಿಸಿದ ಸ್ಥಳಗಳ ಪೈಕಿ ಮೊದಲನೇ ಗುರುತಿನ ಸ್ಥಳವನ್ನು ಅಗೆಯುವ ವೇಳೆ ಸೈಟ್ ಸಂಖ್ಯೆ 1ರಲ್ಲಿ ವಿಶೇಷ ತನಿಖಾ ತಂಡ(ಎಸ್‌ಐಟಿ)ವು ಮಹತ್ವದ ಸಾಕ್ಷ್ಯಗಳನ್ನು ಪತ್ತೆ ಹಚ್ಚಿದೆ ಎಂದು ಧರ್ಮಸ್ಥಳದಲ್ಲಿ ಕಾಣೆಯಾಗಿದ್ದಾರೆ ಎನ್ನಲಾದ ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ಅವರ ತಾಯಿ ಸುಜಾತಾ ಭಟ್ ಅವರ ಪರ ವಕೀಲ ಮಂಜುನಾಥ್ ಎನ್ ಅವರು ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟನೆ ನೀಡಿರುವ ಅವರು, ಎಸ್ಐಟಿಯ ಕಾರ್ಯಾಚರಣೆಯು ಪ್ರಕರಣದಲ್ಲಿ ಹೊಸ ಬೆಳವಣಿಗೆಗೆ ದಾರಿ ತೆರೆದಿದೆ. ನಿನ್ನೆ ಮಂಗಳವಾರದ ಕಾರ್ಯಚರಣೆಯ ವೇಳೆ ಸುಮಾರು 2.5 ಅಡಿ ಆಳದಲ್ಲಿ ಕೆಂಪು ಬಣ್ಣದ ರವಿಕೆ, PAN ಕಾರ್ಡ್ ಹಾಗೂ ATM ಕಾರ್ಡ್ ಪತ್ತೆಯಾಗಿದೆ ಎಂದು ಮೂಲಗಳು ತಿಳಿಸಿವೆ. ಈ ಬೆಳವಣಿಗೆಯು ತನಿಖೆಗೆ ಹೊಸ ಆಯಾಮ ನೀಡಿದೆ ಎಂದು ಅವರು ಹೇಳಿದ್ದಾರೆ.

ಎಸ್‌ಐಟಿಯು ಈ ಬೆಳವಣಿಗೆಯ ನಂತರ ತಕ್ಷಣ ಸ್ಥಳದ 10 ಅಡಿ ಆಳದವರೆಗೆ ಉತ್ಖನನ ಕಾರ್ಯಾಚರಣೆಯನ್ನು ಮುಂದುವರಿಸುವ ನಿರ್ಧಾರ ತೆಗೆದುಕೊಂಡಿದ್ದು, ಇದು ಅವರ ವೃತ್ತಿಪರ ಬದ್ಧತೆಯನ್ನು ತೋರಿಸುತ್ತದೆ. ಈ ಕಾರ್ಯವು ಶ್ರಮದಾಯಕವಾದರೂ, ಯಾವುದೇ ಸಾಕ್ಷ್ಯವನ್ನು ಕಡೆಗಣಿಸದೆ ಸಮಗ್ರವಾಗಿ ಪರಿಶೀಲಿಸುವ ದೃಢ ಸಂಕಲ್ಪ ಮಾಡಿರುವ ಎಸ್ಐಟಿಯ ಕಾರ್ಯವೈಖರಿಯು ಶ್ಲಾಘನೀಯ ಎಂದು ವಕೀಲ ಮಂಜುನಾಥ್ ಎನ್ ಹೇಳಿದ್ದಾರೆ.

ಪತ್ತೆಯಾಗಿರುವ PAN ಕಾರ್ಡ್ ಮತ್ತು ATM ಕಾರ್ಡ್‌ ಗಳಲ್ಲಿ ಒಂದರ ಮೇಲೆ ಪುರುಷನ ಹೆಸರು ಮತ್ತು ಇನ್ನೊಂದರಲ್ಲಿ 'ಲಕ್ಷ್ಮಿ' ಎಂಬ ಹೆಸರಿರುವುದು ಕಂಡುಬಂದಿದೆ. ಈ ಸುಳಿವುಗಳು ವಿಚಾರಣೆಗೆ ಹೊಸ ದಿಕ್ಕು ನೀಡಬಹುದು. ಎಸ್ ಐ ಟಿ ಅಧಿಕಾರಿಗಳು ಈ ಪ್ರಮುಖ ಸುಳಿವಿನ ಬೆನ್ನತ್ತಿ ಹೋಗುತ್ತಾರೆ ಎಂಬ ಭರವಸೆಯಿದೆ ಎಂದು ಅವರು ಹೇಳಿದ್ದಾರೆ.

ಇದುವರೆಗೆ ಎಸ್ಐಟಿಯು ಪ್ರದರ್ಶಿಸಿರುವ ಗಂಭೀರತೆ, ಶಿಸ್ತು ಮತ್ತು ಕಾರ್ಯದಕ್ಷತೆ ನಮಗೆ ಭರವಸೆಯನ್ನು ಹುಟ್ಟುಹಾಕಿದೆ. ಮುಂದಿನ ಸ್ಥಳಗಳ ಪರಿಶೀಲನೆಯ ವೇಳೆ ನಾವು ಅವರ ಕೆಲಸಗಳಲ್ಲಿ ಸಂಪೂರ್ಣ ನಂಬಿಕೆಯನ್ನು ಇಡುತ್ತೇವೆ ಎಂದು ವಕೀಲ ಮಂಜುನಾಥ್ ಎನ್ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X