Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ದಿನೇಶ್ ಗುಂಡೂರಾವ್ ಅಲ್ಪಸಂಖ್ಯಾತರಲ್ಲಿ...

ದಿನೇಶ್ ಗುಂಡೂರಾವ್ ಅಲ್ಪಸಂಖ್ಯಾತರಲ್ಲಿ ಬಹಿರಂಗ ಕ್ಷಮೆ ಯಾಚಿಸಲಿ: ಮುಸ್ಲಿಂ ಯೂತ್ ಲೀಗ್

ವಾರ್ತಾಭಾರತಿವಾರ್ತಾಭಾರತಿ29 May 2025 2:19 PM IST
share
ದಿನೇಶ್ ಗುಂಡೂರಾವ್ ಅಲ್ಪಸಂಖ್ಯಾತರಲ್ಲಿ ಬಹಿರಂಗ ಕ್ಷಮೆ ಯಾಚಿಸಲಿ: ಮುಸ್ಲಿಂ ಯೂತ್ ಲೀಗ್

ಉಳ್ಳಾಲ: ಬಂಟ್ವಾಳದಲ್ಲಿ ಕೊಲೆಯಾಗಿರುವ ಅಬ್ದುಲ್ ರಹಿಮಾನ್ ಅವರ ಮೇಲೆ ಯಾವುದೇ ಕೇಸುಗಳಿಲ್ಲದಿದ್ದರೂ ಹಳೆಯ ವೈಷಮ್ಯದಿಂದ ಕೊಲೆ ನಡೆದಿದೆ ಎಂದು ಹೇಳಿಕೆ ನೀಡಿರುವ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಅಲ್ಪಸಂಖ್ಯಾತರಲ್ಲಿ ಬಹಿರಂಗ ಕ್ಷಮೆ ಯಾಚಿಸಬೇಕೆಂದು ಮುಸ್ಲಿಂ ಯೂತ್ ಲೀಗ್ ನ ರಾಜ್ಯ ಪ್ರಧಾನ ಕಾರ್ಯದರ್ಶಿ ನೌಶಾದ್ ಮಲಾರ್ ಆಗ್ರಹಿಸಿದರು.

ತೊಕ್ಕೊಟ್ಟಿನ ಪ್ರೆಸ್ ಕ್ಲಬ್ ನಲ್ಲಿ ಗುರುವಾರದಂದು ನಡೆದ ಸುದ್ದಿಗೋಷ್ಟಿಯನ್ನುದ್ದೇಶಿಸಿ ಅವರು ಮಾತನಾಡಿದರು.

ಗೃಹಚಾರ ಹಿಡಿದ ಗೃಹಮಂತ್ರಿ,ಜಿಲ್ಲೆಗೆ ಮದುಮಗನಂತೆ ಬಂದು ಹೋಗುವ ಉಸ್ತುವಾರಿ ಸಚಿವರ ಮೇಲೆ ಅಲ್ಪ ಸಂಖ್ಯಾತರಿಗೆ ಇನ್ನು ಭರವಸೆ ಉಳಿದಿಲ್ಲ.ಜಿಲ್ಲಾಡಳಿತ ,ಪೊಲೀಸ್ ಇಲಾಖೆಯ ವೈಫಲ್ಯ ದಿಂದ ಬಂಟ್ವಾಳದ ಅಮಾಯಕ ಯುವಕ ಅಬ್ದುಲ್ ರಹ್ಮಾನ್ ಕೊಲೆ ನಡೆದಿದೆ.ರಾಜ್ಯ ಕಾಂಗ್ರೆಸ್ ಸರಕಾರದ ಮೇಲೆ ಅಲ್ಪ ಅಂಖ್ಯಾತರು ಭರವಸೆ ಇಟ್ಟರೂ ಸರಕಾರ ಮಾತ್ರ ನಮಗೆ ರಕ್ಷಣೆ ನೀಡುತ್ತಿಲ್ಲ ಎಂದು ಆರೋಪಿಸಿದರು.

ಮಂಗಳೂರಲ್ಲಿ ವಯನಾಡಿನ ಅಶ್ರಪ್ ಎಂಬ ಅಮಾಯಕ ಯುವಕನ ಮೇಲೆ ಗುಂಪೊಂದು ಹಲ್ಲೆಗೈದು ಕೊಲೆ ಮಾಡಿತ್ತು.ಇದೀಗ ಮತ್ತೊಬ್ಬ ಅಮಾಯಕ ಅಲ್ಪ ಸಂಖ್ಯಾತ ಯುವಕನನ್ನು ಕೊಲೆಯಾಗಿದೆ.ಜಿಲ್ಲೆಯಲ್ಲಿ ಪುಂಡಾಟಿಕೆ ನಡೆಸುವವರನ್ನ ನಿಯಂತ್ರಿಸಲು ರಾಜ್ಯದ ಕಾಂಗ್ರೆಸ್ ಸರಕಾರ ವಿಫಲವಾಗಿದೆ.ಮುಸ್ಲಿಮರ ಮಾತುಗಳನ್ನು ಪಡೆದು ಅಧಿಕಾರ ಗಿಟ್ಟಿಸಿದ ಕಾಂಗ್ರೆಸ್ ಸರಕಾರದಿಂದ ಹತ್ತು ಶೇಕಡದಷ್ಟು ಮುಸ್ಲಿಮರನ್ನ ರಕ್ಷಿಸಲು ಸಾಧ್ಯವಾಗಿಲ್ಲ.ರಾಜ್ಯ ಸರಕಾರವು ಅಶ್ರಫ್ ವಯನಾಡು ಮತ್ತು ಅಬ್ದುಲ್ ರಹ್ಮಾನ್ ಅವರ ಕುಟುಂಬಕ್ಕೆ ತಕ್ಷಣವೇ ತಲಾ 25 ಲಕ್ಷ ರೂಪಾಯಿ ಪರಿಹಾರ ನೀಡಬೇಕೆಂದು ಆಗ್ರಹಿಸಿದರು.

ಮುಸ್ಲಿಂ ಯೂತ್ ಲೀಗ್ ನ ಜಿಲ್ಲಾ ಕಾರ್ಯದರ್ಶಿ ಹಿದಾಯತ್ತುಲ್ಲಾಹ್ ಮಾರಿಪಳ್ಳ ಮಾತನಾಡಿ, ನಿರಂತರ ಅಲ್ಪಸಂಖ್ಯಾತರ ಮೇಲೆ ದಾಳಿಗಳಾಗುತ್ತಿದ್ದರೂ ಸರಕಾರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ.ಅಲ್ಪ ಸಂಖ್ಯಾತರು ಹಗಲು ರಾತ್ರಿ ದುಡಿದು ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಾರೆ.ಇತ್ತೀಚಿನ ದಿನಗಳಲ್ಲಿ ಚಕ್ರವರ್ತಿ ಸೂಲಿಬೆಲೆ ಮಾಡಿದ್ದ ದ್ವೇಷ ಭಾಷಣವು ಜಾಲತಾಣಗಳಲ್ಲಿ ಹರಿದಾಡಿತ್ತು.ಇದಕ್ಕೆ ಪ್ರತಿಯಾಗಿ ನಂ.1 ಶಾಸಕರೆನಿಸಿರುವ ಯು.ಟಿ.ಖಾದರ್ ಅವರು ಯಾವುದೋ ಪ್ರಾಣಿ ಕಚ್ಚುತ್ತದೆಂದು ನಾವು ಅದಕ್ಕೆ ತಿರುಗಿ ಕಚ್ಚಲಾಗುತ್ತದೆಯೇ ಎಂದು ಮಾಧ್ಯಮ‌ ಹೇಳಿಕೆ ನೀಡುತ್ತಾರೆಂದರೆ ಕಾಂಗ್ರೆಸ್ ಗೆ ಮತ ನೀಡಿದ ನಾವು ಪಶ್ಚಾತ್ತಾಪ ಪಡೆಯಲೇಬೇಕು.ಕಚ್ಚುವ ಪ್ರಾಣಿಗಳನ್ನು ಸೂಕ್ತ ಜಾಗದಲ್ಲಿ ಕೂಡಿ ಹಾಕುವ ಕೆಲಸವನ್ನು ಸರಕಾರ ಮಾಡಬೇಕಲ್ಲವೆ ಎಂದು ಪ್ರಶ್ನಿಸಿದರು.

ಜಿಲ್ಲೆಯಲ್ಲಿ ನಡೆದ ರೌಡಿಶೀಟರ್ ಕೊಲೆಯನ್ನೂ ನಾವು ಖಂಡಿಸುತ್ತೇವೆ.ದುಷ್ಕರ್ಮಿಗಳನ್ನು ದಂಡಿಸಲೆಂದೇ ಕಾನೂನು ಇದೆ.ಅಲ್ಪ ಸಂಖ್ಯಾತರಿಗೆ ಪಕ್ಷದ ಕೊರತೆ ಇಲ್ಲ.ಪರ್ಯಾಯ ಪಕ್ಷವನ್ನು ರಚಿಸಿ ಅಧಿಕಾರ ಮಾಡಲು ಮುಸ್ಲಿಮರಿಗೆ ಗೊತ್ತಿದೆ.ಕಾಂಗ್ರೆಸ್ ಸ್ವಾತಂತ್ರ್ಯ ಪೂರ್ವದಿಂದಲೇ ಅಲ್ಪ ಸಂಖ್ಯಾತರ ,ದಮನಿತರ ಪರವಾಗಿದೆ ಎಂಬುವ ಕಾರಣಕ್ಕಾಗಿ ನಾವು ಕಾಂಗ್ರೆಸ್ ಜೊತೆ ಇದ್ದೇವೆ.ಪ್ರಚೋದನಾಕಾರಿ ಭಾಷಣ ಮಾಡುವ ಭರತ್ ಕುಮ್ಡೇಲ್ ,ಶರಣ್ ಪಂಪ್ವೆಲ್ ನಂತವರನ್ನು ಜೈಲಿಗಟ್ಟಿದರೆ ಜಿಲ್ಲೆಯಲ್ಲಿ ಶಾಂತಿ ನೆಲೆಸಲು ಸಾಧ್ಯ.ಇನ್ನು ಮುಂದೆ ಅಮಾಯಕರ ಕೊಲೆ ನಡೆಯಬಾರದೆಂದರೆ ಇಲ್ಲಿ ಸಂಘ ಪರಿವಾರವನ್ನು ನಿಷೇಧಿಸಬೇಕು.ಇವೆಲ್ಲವನ್ನು ಮಾಡಲು ರಾಜ್ಯ ಸರಕಾರಕ್ಕೆ ಆಗಲ್ಲವೆಂದರೆ ಅಲ್ಪಸಂಖ್ಯಾತರು ಕಾಂಗ್ರೆಸಲ್ಲಿ ಇರುವುದಕ್ಕೆ ಯಾವುದೇ ನೈತಿಕತೆ ಇಲ್ಲ ಎಂದು ಹೇಳಿದರು.

ಗೃಹ ಇಲಾಖೆ ಮತ್ತು ಪೊಲೀಸರ ವೈಫಲ್ಯದಿಂದ ಜಿಲ್ಲೆಯಲ್ಲಿ ಕೊಲೆಗಳು ನಡೆದಿವೆ.ಮುಖ್ಯಮಂತ್ರಿ ಸಿದ್ಧರಾಮಯ್ಯನವರೇ ನಮಗೆ ಬದುಕುವ ಭಾಗ್ಯ ಕೊಡಿ.ಬೇರೆ ಯಾವ ಬಿಟ್ಟಿ ಭಾಗ್ಯಗಳೂ ನಮಗೆ ಬೇಡ.ಸಮಾಜದಲ್ಲಿ ಅರಾಜಕತೆ ಸೃಷ್ಟಿಸುತ್ತಿರುವ ಕ್ರಿಮಿಗಳನ್ನು ಬಂಧಿಸಲು ನಾವು ವಿಧಾನಸಭಾ ಚಲೋ ಆಂದೋಲನ ಮಾಡಬೇಕೇ ಎಂದು ಪ್ರಶ್ನಿಸಿದ ಅವರು,ಅಲ್ಪ ಸಂಖ್ಯಾತರು ದುಷ್ಕೃತ್ಯ ಎಸಗಿದರೆ 24 ಗಂಟೆಯೊಳಗೆ ಪೊಲೀಸರು ಬಂಧಿಸುತ್ತಾರೆ.ಸುಹಾಸ್ ಶೆಟ್ಟಿ ಕೊಲೆಯಾದ ಸಂದರ್ಭ ಬಜರಂಗದಳದ ಶರಣ್ ಪಂಪ್ವೆಲ್ ನೀಡಿದ್ದ ಜಿಲ್ಲಾ ಬಂದ್ ಕರೆಯಿಂದಾಗಿ ಜಿಲ್ಲೆಯ ಹಲವೆಡೆ ಇರಿತಗಳಾಗಿತ್ತು.ಆದರೆ ಶರಣ್ ಪಂಪ್ವೆಲ್ ಸಂಜೆ 7 ಗಂಟೆಗೆ ಬಂಧನವಾದರೆ ರಾತ್ರಿ 8.30 ಗಂಟೆಗೆ ಬಿಡುಗಡೆಯಾಗುತ್ತದೆ.ಸರಕಾರದ ಈ ಧೋರಣೆಯ ವಿರುದ್ಧ ಅಲ್ಪಸಂಖ್ಯಾತ ಕಾಂಗ್ರೆಸಿಗರ ಸಾಮೂಹಿಕ ರಾಜೀನಾಮೆಯು ರಾಜ್ಯಕ್ಕೆ ಮಾದರಿಯಾಗಬೇಕಾಗಿದೆ ಎಂದರು.

ಮುಸ್ಲಿಂ ಯೂತ್ ಲೀಗ್ ನ ರಾಜ್ಯ ಸಮಿತಿ ಸದಸ್ಯರಾದ ಶಬೀರ್ ತಲಪಾಡಿ, ಜಿಲ್ಲಾಧ್ಯಕ್ಷರಾದ ಹನೀಫ್ ಕುಂಜತ್ತೂರು,ಸದಸ್ಯರಾದ ಅಹಮ್ಮದ್ ಪೆರಿಬೈಲ್, ಹನೀಫ್ ಎಸ್ .ಬಿ ಉಚ್ಚಿಲ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X