Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕುತ್ಲೂರು ಶಾಲಾ ಮಕ್ಕಳಿಗೆ ಕಲಿಕಾ...

ಕುತ್ಲೂರು ಶಾಲಾ ಮಕ್ಕಳಿಗೆ ಕಲಿಕಾ ಸಾಮಾಗ್ರಿ ವಿತರಣೆ

ವಾರ್ತಾಭಾರತಿವಾರ್ತಾಭಾರತಿ23 May 2025 9:30 PM IST
share
ಕುತ್ಲೂರು ಶಾಲಾ ಮಕ್ಕಳಿಗೆ ಕಲಿಕಾ ಸಾಮಾಗ್ರಿ ವಿತರಣೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ( ರಿ ) ಸಹಯೋಗ ದೊಂದಿಗೆ ನಗರದ ಪತ್ರಿಕಾ ಭವನದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪತ್ರಕರ್ತರ ಸಂಘ,ಬಿಎಎಸ್ ಎಫ್ ಇಂಡಿಯಾ ಲಿಮಿಟೆಡ್ ಮತ್ತು ಕುತ್ಲೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹಯೋಗದೊಂದಿಗೆ ಹಮ್ಮಿಕೊಂಡ ಶಾಲಾ ಮಕ್ಕಳಿಗೆ ನೋಟ್ ಬುಕ್ ಹಾಗೂ ಕಲಿಕಾ ಸಾಮಾಗ್ರಿ ವಿತರಣಾ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಹೆಚ್ಚುವರಿ ಪೋಲಿಸ್ ವರಿಷ್ಠಾಧಿಕಾರಿ ಡಾ.ರಾಜೇಂದ್ರ ಶಾಲಾ ಮಕ್ಕಳಿಗೆ ನೋಟ್ ಬುಕ್ ಹಸ್ತಾಂತರ ಮಾಡಿದರು.

ಬಳಿಕ ಮಾತನಾಡಿದ ಅವರು, "ಸಮಾಜದಲ್ಲಿ ಉತ್ತಮ ವ್ಯಕ್ತಿಗಳಾಗಿ ರೂಪುಗೊಳ್ಳಲು ವಿದ್ಯಾರ್ಥಿಗಳಿಗೆ ಉತ್ತಮ ವಾತವರಣ, ಪ್ರೋತ್ಸಾಹ ಅಗತ್ಯ. ಈ ನಿಟ್ಟಿನಲ್ಲಿ ಕುತ್ಲೂರು ಶಾಲೆಯ ಅಭಿವೃದ್ಧಿಗೆ ನಡೆಯುತ್ತಿರುವ ಸಾಮೂಹಿಕ ಪ್ರಯತ್ನ ಶ್ಲಾಘನೀಯ ಎಂದರು.

ವಿದ್ಯಾರ್ಥಿಗಳಿಗೆ ಸಮವಸ್ತ್ರ, ಬ್ಯಾಂಡ್ ಸೆಟ್ ಹಾಗೂ ಕಲಿಕಾ ಸಾಮಾಗ್ರಿ ವಿತರಿಸಿ ಮಾತನಾಡಿದ, "ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕಿ(ಅಭಿವೃದ್ಧಿ) ರಾಜಲಕ್ಷ್ಮಿ, ಇತ್ತೀಚಿನ ದಿನಗಳಲ್ಲಿ ಸರಕಾರಿ ಶಾಲೆಗಳಲ್ಲಿ ತೋಟ ನಿರ್ಮಿಸಿ ಅದರ ಆದಾಯದಿಂದ ಶಾಲೆಗೆ ವಾಹನ ಖರೀದಿಸಿ ಸಾಕಷ್ಟು ಅಭಿವೃದ್ಧಿ ಆದ ಶಾಲೆಗಳ ಸಾಲಿನಲ್ಲಿ ಕುತ್ಲೂರು ಶಾಲೆಯೂ ಸೇರ್ಪಡೆಯಾಗಿದೆ. ಇದರಿಂದ ಶಿಕ್ಷಣದ ಗುಣಮಟ್ಟದಲ್ಲೂ ಉನ್ನತಿಯಾಗಲು ಸಾಧ್ಯವಾಗಿದೆ. ಕುತ್ಲೂರು ಶಾಲೆಯ ಅಭಿವೃದ್ಧಿಯಲ್ಲಿ ಶಾಲಾಭಿವೃದ್ಧಿ ಸಮಿತಿ ಹಾಗೂ ಸಮುದಾಯ ಸಂಘ ಸಂಸ್ಥೆಗಳ ಕೊಡುಗೆ ಮಹತ್ವದ್ದಾಗಿದೆ ಎಂದು ಶ್ಲಾಘಿಸಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ ಬಿಎಎಸ್ ಎಫ್ ಇಂಡಿಯಾ ಲಿಮಿಟೆಡ್ ಸಂಸ್ಥೆಯ ಸೈಟ್ ಡೈರೆಕ್ಟರ್ ಶ್ರೀನಿವಾಸ್ ಪ್ರಾಣೇಶ್ ಮಾತನಾಡಿ, "ಸಂಸ್ಥೆ ಈ ಹಿಂದೆಯೂ ಸ್ಥಳೀಯ ಶಾಲೆಗಳ ಮಕ್ಕಳಿಗೆ ವಿದ್ಯಾರ್ಥಿ ವೇತನದ ಮೂಲಕ ಪ್ರೋತ್ಸಾಹ ನೀಡುತ್ತಾ ಬಂದಿದೆ. ಈ ಬಾರಿ ಕುತ್ಲೂರು ಶಾಲಾ ಮಕ್ಕಳಿಗೆ ನೋಟ್ ಬುಕ್ ಹಾಗೂ ಕಲಿಕಾ ಸಾಮಾಗ್ರಿ ಒದಗಿಸಲು ಸಾಧ್ಯ ವಾಗಿರುವುದು ಸಂತಸ ತಂದಿದೆ ಎಂದರು.

ಕುತ್ಲೂರು ಸರಕಾರಿ ಶಾಲೆಯ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ರಾಮಚಂದ್ರ ಭಟ್ ಶಾಲಾ ಅಭಿವೃದ್ಧಿಯಲ್ಲಿ ಕೊಡುಗೆ ನೀಡಿದ ಸಂಘ ಸಂಸ್ಥೆಗಳು, ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘ ಸಹಾಯಕ್ಕೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದ್ದಾರೆ.

ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘ ಅಧ್ಯಕ್ಷ ಶ್ರೀನಿವಾಸ ಇಂದಾಜೆ ಅಧ್ಯಕ್ಷತೆ ವಹಿಸಿದ್ದರು.

ಸಮಾರಂಭದಲ್ಲಿ ಬಿಎಎಸ್ ಎಫ್ ಎಚ್ ಆರ್ ವಿಭಾಗದ ಮುಖ್ಯಸ್ಥ ಸಂತೋಷ್ ಪೈ ಮತ್ತು ಮೈಕಲ್ ಡಿ ಸೋಜ, ಮಂಗಳೂರು ಪ್ರೆಸ್‌ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ, ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ ಉಪಸ್ಥಿತರಿದ್ದರು. ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್ ಕಾರ್ಯಕ್ರಮ ನಿರೂಪಿಸಿದರು . ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X