Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಗ್ಯಾರಂಟಿ ಯೋಜನೆ ಬಗ್ಗೆ ಜಿಲ್ಲಾ ಮಟ್ಟದ...

ಗ್ಯಾರಂಟಿ ಯೋಜನೆ ಬಗ್ಗೆ ಜಿಲ್ಲಾ ಮಟ್ಟದ ಸಮಾವೇಶ ಅಗತ್ಯ: ವಿ. ಸುದರ್ಶನ್

ವಾರ್ತಾಭಾರತಿವಾರ್ತಾಭಾರತಿ2 Jan 2024 3:25 PM IST
share
ಗ್ಯಾರಂಟಿ ಯೋಜನೆ ಬಗ್ಗೆ ಜಿಲ್ಲಾ ಮಟ್ಟದ ಸಮಾವೇಶ ಅಗತ್ಯ: ವಿ. ಸುದರ್ಶನ್

ಮಂಗಳೂರು, ಜ.2: ರಾಜ್ಯದಲ್ಲಿ ಬರಗಾಲ ತೀವ್ರ ಪರಿಣಾಮ ಬೀರಿದ ಸಂದರ್ಭ ಗ್ಯಾರಂಟಿ ಬಡವರ ಬದುಕಿಗೆ ಆಸರೆಯಾಗಿ ಹಾಹಾಕಾರ ಕಡಿಮೆ ಮಾಡಿದೆ. ಇದೀಗ ಮುಖ್ಯಮಂತ್ರಿಯವರು ಫಲಾನುಭವಿಗಳ ಜತೆ ಜಿಲ್ಲಾ ಮಟ್ಟದಲ್ಲಿ ಸಮಾವೇಶ ಮಾಡಬೇಕಿದೆ. ಸಮಸ್ಯೆಗಳನ್ನು ಪರಿಹರಿಸುವ ಕೆಲಸ ಆದಾಗ ಗ್ಯಾರಂಟಿ ಯೋಜನೆಗಳನ್ನು ಮತ್ತಷ್ಟು ಬಲಪಡಿಸಲು ಸಾಧ್ಯ ಎಂದು ಕೆಪಿಸಿಸಿ ಉಪಾಧ್ಯಕ್ಷ, ವಿಧಾನ ಪರಿಷತ್‌ನ ಮಾಜಿ ಸಭಾಪತಿ ವಿ. ಸುದರ್ಶನ್ ಹೇಳಿದ್ದಾರೆ.

ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಹಿಂದಿನ ಬಿಜೆಪಿ ದುರಾಡಳಿತದಿಂದ ಜನ ಬದಲಾವಣೆ ಬಯಸಿ ಕೈ ಅಧಿಕಾರಕ್ಕೆ ತಂದಿದ್ದಾರೆ. ಸರಕಾರ ಘೋಷಣೆಯಂತೆ ಗ್ಯಾರಂಟಿ ಅನುಷ್ಠಾನ ಪ್ರಾಮಾಣಿಕವಾಗಿ ಮಾಡಿದೆ ಎಂದರು.

ಗ್ಯಾರಂಟಿ ಯೋಜನೆಗಳಿಂದಾಗಿ ಸರಕಾರ ಆರ್ಥಿಕವಾಗಿ ಸಂಕಷ್ಟದಲ್ಲಿದ್ದು, ಅಭಿವೃದ್ಧಿ ಕಾರ್ಯಗಳಿಗೆ ಹಿನ್ನಡೆಯಾಗುತ್ತಿದೆ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ವಿ. ಸುದರ್ಶನ್, ಹಿಂದಿನ ಬಿಜೆಪಿ ಸರಕಾರ ಕೊನೆಗೊಂಡಾಗ ರಾಜ್ಯದ ಆರ್ಥಿಕ ಪರಿಸ್ಥಿತಿ ಚೆನ್ನಾಗಿರಲಿಲ್ಲ. ಆದರೆ ಅನುಭವಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಸರಕಾರ ಆಡಳಿತದ ಬಗ್ಗೆ ಗಮನ ಹರಿಸುತ್ತಿದೆ. ಸರಕಾರ ಆಡಳಿತಕ್ಕೆ ಬಂದು ಆರು ತಿಂಗಳಷ್ಟೇ ಆಗಿದ್ದು, ಬಹಳಷ್ಟು ಅಭಿವೃದ್ಧಿ ಕೆಲಸಗಳೂ ಆರಂಭವಾಗಿವೆ ಎಂದರು.

ಬಿಜೆಪಿ ಆಯೋಧ್ಯೆ ವಿಚಾರವನ್ನು ಮುಂದಿಟ್ಟು ಚುನಾವಣೆಗೆ ಸಿದ್ಧತೆ ನಡೆಸುತ್ತಿದ್ದು, ಕಾಂಗ್ರೆಸ್‌ನ ಪ್ರತಿ ತಂತ್ರಗಾರಿಕೆ ಏನು ಎಂಬ ಸುದ್ದಿಗಾರರ ಪ್ರಶ್ನೆಗೆ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಆಡಳಿತ ಎಂಬುದು ನಿಂತರ ನೀರಲ್ಲ. ಬದಲಾವಣೆ ನಿಯಮ. ಧಾರ್ಮಿಕ ವಿಚಾರಗಳನ್ನು ನಾವು ಗೌರವಿಸುತ್ತೇವೆ. ಅದರ ಜತೆಗೆ ಜನರ ಬದುಕಿನ ಸಮಸ್ಯೆಗಳು, ಸಂಕಷ್ಟಗಳನ್ನು ಪ್ರಶ್ನಿಸಬೇಕಿದೆ. ಆದರೆ ಕೇಂದ್ರ ಸರಕಾರದಿಂದ ಇದಕ್ಕೆ ಉತ್ತರ ಸಿಗುತ್ತಿಲ್ಲ. ಸಂಸತ್ತಿನಲ್ಲಿ 150 ಸಂಸದರನ್ನು ಹೊರಗೆ ಹಾಕಿ ಬಿಲ್ ಪಾಸ್ ಮಾಡುವುದೆಂದರೆ ಪ್ರಜಾಪ್ರಭುತ್ವದ ಮೇಲೆ ಎಷ್ಟು ಗೌರವ ಇದೆ ಎಂಬುದನ್ನು ತೋರ್ಪಡಿಸುತ್ತದೆ ಎಂದು ಸುದರ್ಶನ್ ಪ್ರತಿಕ್ರಿಯಿಸಿದರು.

ಅಯೋಧ್ಯೆಗೆ ಸಂಬಂಧಿಸಿ ರಾಜ್ಯದಲ್ಲಿ ಹಿಂದಿನ ಪ್ರಕರಣಗಳನ್ನು ಕೆದಕಲಾಗುತ್ತಿದೆ ಎಂಬುದಾಗಿ ವಿಪಕ್ಷ ನಾಯಕರ ವಿರೋಧದ ಕುರಿತಂತೆ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಅಶೋಕ್ ಅವರು ಗೃಹ ಸಚಿವರಾಗಿದ್ದಾಗ ಕಡ್ಲೆಕಾಯಿ ತಿನ್ನುತ್ತಿದ್ದರೇ? ನ್ಯಾಯಾಲಯದ ತೀರ್ಮಾನ ಅಂತಿಮ. ಎರಡು ಸಲ ಸರಕಾರ ಮಾಡಿದವರಿಗೆ ಆ ಸಂದರ್ಭದಲ್ಲಿ ಇದರ ಬಗ್ಗೆ ಅರಿವಿರಲಿಲ್ಲವೇ? ರಾಜಕಾರಣಕ್ಕೆ ಮಾತ್ರ ಅಯೋಧ್ಯೆ ವಿಚಾರ ಬೇಕು ಅವರಿಗೆ. ಈ ಘಟನೆ ರಾಜಕೀಯವಾಗಿ ನೋಡುವ ಅಗತ್ಯವಿಲ್ಲ ಎಂದರು.

ಸುದ್ದಿಗೋಷ್ಟಿಯಲ್ಲಿ ಇಬ್ರಾಹಿಂ ಕೋಡಿಜಾಲ್, ನೀರಜ್‌ಪಾಲ್, ಶುಭೋದಯ ಆಳ್ವ, ವಿಶ್ವಾಸ್ ಕುಮಾರ್ ದಾಸ್, ಲಾರೆನ್ಸ್ ಡಿಸೋಜಾ, ನಝೀರ್ ಬಜಾಲ್ ಉಪಸ್ಥಿತರಿದ್ದರು.

ಬೆಳಗಾವಿ ಅಧಿವೇಶನದ 100ರ ಸಂಭ್ರಮ

1924ರಲ್ಲಿ ಎಐಸಿಸಿ ಅಧಿವೇಶನ ಬೆಳಗಾವಿಯಲ್ಲಿ ನಡೆದಾಗ ಮಹಾತ್ಮ ಗಾಂಧಿ ಅಧ್ಯಕ್ಷತೆ ವಹಿಸಿದ್ದರು. ಗಾಂಧಿ ತತ್ವಗಳು ಜಗತ್ತಿಗೆ ಪ್ರಭಾವ ಬೀರಿವೆ. ಈ ವಿಚಾರ ಹೊಸ ತಲೆಮಾರಿಗೆ ತಲುಪಿಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಅಧಿವೇಶನದ 100ನೆ ಸಂಭ್ರಮವನ್ನು ಜಿಲ್ಲಾ ಕೇಂದ್ರಗಳಲ್ಲಿ ಆಚರಿಸಲು ಮಾತುಕತೆ ನಡೆಯುತ್ತಿದೆ. ಇದನ್ನು ಸರಕಾರ ಅಥವಾ ಪಕ್ಷದ ವತಿಯಿಂದ ನಡೆಸುವ ಬಗ್ಗೆ ನಿರ್ಧಾರ ಮಾಡಲಾಗುವುದು ಎಂದು ಸುದರ್ಶನ್ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X