ಜ.9 ರಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ

ಮಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಜನವರಿ 9 ರಂದು ದಕ್ಷಿಣ ಕನ್ನಡ ಜಿಲ್ಲೆಗೆಆಗಮಿಸಲಿದ್ದಾರೆ.
ಬೆಳಗ್ಗೆ 9.5 - ಮಂಗಳೂರು ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮನ, 9:30- ನಗರದಕದ್ರಿಯಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿಯ ನೂತನ ಕಚೇರಿಯ ಉದ್ಘಾಟನಾ ಸಮಾರಂಭ, 10- ಲಾಲ್‌ಬಾಗ್ ಕರಾವಳಿ ಮೈದಾನದ ಎದುರು ಉಪ ಅರಣ್ಯ ಸಂರಕ್ಷಣಾಧಿಕಾರಿ ವಸತಿಗೃಹ ಶಂಕುಸ್ಥಾಪನಾ ಸಮಾರಂಭ, 11- ಪಿಲಿಕುಳ ಭಾರತ್ ಸ್ಕೌಟ್ ಮತ್ತು ಗೈಡ್ಸ್ ಭವನದಲ್ಲಿ ಕರ್ನಾಟಕ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ಹಾಗೂ ಕರ್ನಾಟಕ ಅರಣ್ಯ ಇಲಾಖೆಯ ಸಹಯೋಗದಲ್ಲಿ ಕರ್ನಾಟಕ ಹಕ್ಕಿ ಹಬ್ಬ 12ನೇ ಆವೃತ್ತಿ ಉದ್ಘಾಟನಾ ಕಾರ್ಯ ಕ್ರಮ, 11:45- ಪಡೀಲ್ ಪ್ರಜಾ ಸೌಧದಲ್ಲಿ ಆರೋಗ್ಯ ಸೇತು ಸಂಚಾರಿ ಆರೋಗ್ಯ ಘಟ ಉದ್ಘಾಟನೆ, 12:30- ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‌ನಲ್ಲಿ ವೆನ್‌ಲಾಕ್ ಜಿಲ್ಲಾ ಆಸ್ಪತ್ರೆ, ಲೇಡಿಗೋಶನ್‌ಆಸ್ಪತ್ರೆ ಹಾಗೂ ಕೆಎಂಸಿ ಆಸ್ಪತ್ರೆಗಳ ಜೊತೆಗಿನ ಸಹಭಾಗಿತ್ವದ ಕುರಿತು ಸಭೆ, 2:05- ಉಡುಪಿ ಜಿಲ್ಲೆಗೆ ತೆರಳಲಿದ್ದಾರೆ.
ಜ. 10- ಬೆಳಿಗ್ಗೆ 11 ಗಂಟೆಗೆ ನಗರದಲ್ಲಿಬ ಕೋಸ್ಟಲ್ ಕರ್ನಾಟಕ ಟೂರಿಸಂ ಸಮಾವೇಶ ಸಂಜೆ 6- ನರಿಂಗಾನದಲ್ಲಿ 4ನೇ ಹೊನಲು ಬೆಳಕಿನ ಲವಕುಶ ಜೋಡುಕರೆ ಕಂಬಳ ಕಾರ್ಯಕ್ರಮ.
ಜನವರಿ 11ರಂದು ಬೆಳಗ್ಗೆ 6:15ಕ್ಕೆ ಸಚಿವರು ಮಂಗಳೂರಿನಿಂದ ಬೆಂಗಳೂರಿಗೆ ತೆರಳಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.





