ದ.ಕ. ಜಿಲ್ಲಾ ಪತ್ರಕರ್ತರ ಸಂಘದ ನೂತನ ಅಧ್ಯಕ್ಷ ಪುಷ್ಪರಾಜ್‌ಗೆ ಅಭಿನಂದನೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷ ಆಯ್ಕೆಯಾಗಿರುವ ವಾರ್ತಾ ಭಾರತಿಯ ಮಂಗಳೂರು ನಗರ ಕಚೇರಿಯ ಬ್ಯುರೋ ಚೀಫ್ ಪುಷ್ಪರಾಜ್ ಬಿ.ಎನ್ ಮತ್ತು ಕೆಯುಡಬ್ಲ್ಯುಜೆ ರಾಜ್ಯಕಾರ್ಯಕಾರಿ ಸಮಿತಿ ಸದಸ್ಯರಾಗಿ ಆಯ್ಕೆಯಾಗಿರುವ ಶ್ರೀನಿವಾಸ್ ನಾಯಕ್ ಇಂದಾಜೆ ಅವರನ್ನು ನಗರದ ಓಷನ್ ಪರ್ಲ್ ಹೋಟೆಲ್‌ನಲ್ಲಿ ನ.11ರಂದು ನಡೆದ ಕಾರ್ಯಕ್ರಮದಲ್ಲಿ ಆಕಾಶವಾಣಿಯ ನಿವೃತ್ತ ಕಾರ್ಯಕ್ರಮ ಮುಖ್ಯಸ್ಥ ಡಾ.ಸದಾನಂದ ಪೆರ್ಲ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಅಂತರಾಷ್ಟ್ರೀಯ ಜಾದೂಗಾರ ಕುದ್ರೋಳಿ ಗಣೇಶ್ ಉದ್ಯಮಿ ಪುಷ್ಪರಾಜ ಜೈನ್ , ಕದ್ರಿ ಪೊಲೀಸ್ ಠಾಣೆಯ ಎಸ್‌ಐ ಮನೋಹರ ಪ್ರಸಾದ್ ಹಾಗೂ ಹಿರಿಯ ಪತ್ರಕರ್ತ ಭಾಸ್ಕರ ರೈ ಕಟ್ಟ ಉಪಸ್ಥಿತರಿದ್ದರು.
Next Story





