ದ.ಕ. ಜಿಲ್ಲೆಯಾದ್ಯಂತ ಗುಡುಗು ಸಹಿತ ಭಾರೀ ಮಳೆ

ಮಂಗಳೂರು, ನ.22: ದ.ಕ. ಜಿಲ್ಲೆಯಾದ್ಯಂತ ಶನಿವಾರ ರಾತ್ರಿ ಗುಡುಗು ಸಹಿತ ಭಾರೀ ಮಳೆಯಾಗಿದೆ.
ನಗರದಲ್ಲಿ ಸುಮಾರು ರಾತ್ರಿ ಹತ್ತು ಗಂಟೆಯ ಹೊತ್ತಿಗೆ ಗಾಳಿ, ಗುಡುಗು ಸಿಡಿಲಿನ ಆರ್ಭಟದೊಂದಿಗೆ ಮಳೆ ಸುರಿದಿದೆ.
ಜಿಲ್ಲೆಯ ಹಲವಡೆ ಆಗಾಗ ಮಳೆಯಾಗುತ್ತಿದ್ದು, ನಗರದಲ್ಲಿ ಕೆಲವು ದಿನಗಳಿಂದ ಮಳೆ ಕಣ್ಮರೆಯಾಗಿತ್ತು. ಸಿಡಿಲಿನ ಅರ್ಭಟಕ್ಕೆ ಕೆಲವಡೆ ವಿದ್ಯುತ್ ಸಂಪರ್ಕ ಕಡಿದು ಹೋಗಿ ಜನಸಾಮಾನ್ಯರು ತೊಂದರೆ ಅನುಭವಿಸಿದ್ದಾರೆ.
Next Story





