Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ದ.ಕ. ತ್ರೈಮಾಸಿಕ ಕೆಡಿಪಿ ಸಭೆ: ಜಿಲ್ಲೆಗೆ...

ದ.ಕ. ತ್ರೈಮಾಸಿಕ ಕೆಡಿಪಿ ಸಭೆ: ಜಿಲ್ಲೆಗೆ ಅನುದಾನ ನೀಡುವಲ್ಲಿ ತಾರತಮ್ಯ ಆರೋಪ

ಉತ್ತರಕ್ಕೂ ಕಾಯದೆ ಸಭಾತ್ಯಾಗ ಮಾಡಿದ ಬಿಜೆಪಿ ಶಾಸಕರು

ವಾರ್ತಾಭಾರತಿವಾರ್ತಾಭಾರತಿ23 Dec 2024 6:16 PM IST
share
ದ.ಕ. ತ್ರೈಮಾಸಿಕ ಕೆಡಿಪಿ ಸಭೆ: ಜಿಲ್ಲೆಗೆ ಅನುದಾನ ನೀಡುವಲ್ಲಿ ತಾರತಮ್ಯ ಆರೋಪ

ಮಂಗಳೂರು, ಡಿ.23: ಕಳೆದ ಎರಡು ವರ್ಷಗಳಿಂದ ದ.ಕ. ಜಿಲ್ಲೆಗೆ ಯಾವುದೇ ಹೊಸ ಯೋಜನೆ ನೀಡಲು ರಾಜ್ಯ ಸರಕಾರದಿಂದ ಸಾಧ್ಯವಾಗಿಲ್ಲ. ಮಾತ್ರವಲ್ಲದೆ ತುರ್ತು ಕಾಮಗಾರಿಗಳಿಗೂ ಅನುದಾನ ನೀಡದೆ ಕರಾವಳಿ ಜಿಲ್ಲೆಯ ಬಗ್ಗೆ ಸರಕಾರ ತಾರತಮ್ಯ ಧೋರಣೆ ಅನುಸರಿಸಿದೆ ಎಂದು ಆರೋಪಿಸಿದ ಬಿಜೆಪಿ ಶಾಸಕರು, ಜಿಲ್ಲಾ ಉಸ್ತುವಾರಿ ಸಚಿವರ ಉತ್ತರಕ್ಕೂ ಕಾಯದೆ ಸಭಾತ್ಯಾಗ ಮಾಡಿದ ಪ್ರಸಂಗ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಸೋಮವಾರ ನಡೆಯಿತು.

ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅಧ್ಯಕ್ಷತೆಯಲ್ಲಿ ಆಯೋಜಿಸಲಾದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಬಿಜೆಪಿ ಶಾಸಕ ಹರೀಶ್ ಪೂಂಜಾ ಮಾತನಾಡಿ, ನಗರ ಮಾತ್ರವಲ್ಲದೆ ಗ್ರಾಮಾಂತರ ಪ್ರದೇಶದ ರಸ್ತೆಗಳಲ್ಲಿ ನಡೆದಾಟಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ರಸ್ತೆಗಳ ಗುಂಡಿ ಮುಚ್ಚಲು ಅನುದಾನ ನೀಡಿಲ್ಲ. ಕರಾವಳಿ ಜಿಲ್ಲೆಗೆ ಅಭಿವೃದ್ಧಿಯ ದೃಷ್ಟಿಯಿಂದ ಯಾವುದೇ ಯೋಜನೆಯನ್ನು ಕಳೆದರಡು ವರ್ಷಗಳಿಂದ ನೀಡಲು ರಾಜ್ಯ ಸರಕಾರದಿಂದ ಸಾಧ್ಯ ಆಗಿಲ್ಲ. ಮಳೆ ಹಾನಿಯಿಂದಾಗಿ ತೊಂದರೆ ಆಗಿರುವ ಅಂಗನವಾಡಿಗೆ ಹೆಂಚು ಹಾಕಲು ಸಾಧ್ಯಾಗಿಲ್ಲ. ಕೆಲ ಶಾಲೆಗಳಲ್ಲಿ ಮರದಡಿ ಪಾಠ ಮಾಡುವ ಪರಿಸ್ಥಿತಿ ಇದೆ. ಕಲ್ಯಾಣ ಕರ್ನಾಟಕದ ಹೆಸರಿನಲ್ಲಿ ಕರಾವಳಿಯ ಅಭಿವೃದ್ಧಿಗೆ ಅನುದಾನ ನೀಡಿಲ್ಲ. ಧಾರ್ಮಿಕ ಸಂಸ್ಥೆಗಳಲ್ಲಿ ಸದಸ್ಯರ ನೇಮಕ ಮಾಡದೆ ದುಡ್ಡಿಲ್ಲದೆ ಯಾವುದೇ ಕಾಮಗಾರಿ ಮಾಡದಂತಾಗಿದೆ. ಆಡಳಿತಾಧಿಕಾರಿಗಳು ದುಡ್ಡಿಲ್ಲ ಎನ್ನುವ ಪರಿಸ್ಥಿತಿ ನಿರ್ಮಾಣವಾಗಿದೆ. ನಮಗೆ ನ್ಯಾಯ ಕೊಡಬೇಕು ಎಂದು ದೂರಿದರು.

ಶಾಸಕ ಡಾ. ಭರತ್ ಶೆಟ್ಟಿ ಮಾತನಾಡಿ, ಕಿರು ನೀರಾವರಿ ಯೋಜನೆಯಡಿ ನಿರ್ಮಿಸಲಾದ ಕಿಂಡಿ ಅಣೆಕಟ್ಟುಗಳಿಗೆ ಹಲಗೆ ಹಾಕಲು ಹಣ ಇಲ್ಲವಾಗಿದೆ. ಮಳೆ ಹಾನಿ ಆದ ಬಳಿಕ ರಸ್ತೆಗಳ ಕಾಮಗಾರಿಗೆ ಹಣ ಬಂದಿಲ್ಲ. 100 ಮೀ. ರಸ್ತೆ ಮಾಡಲು ಆಗುತ್ತಿಲ್ಲ ಎಂದು ಆರೋಪಿಸಿದರು.

ಈ ಬಗ್ಗೆ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಉತ್ತರ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದಾಗ ಮತ್ತೆ ಶಾಸಕರು ಆರೋಪ ಮುಂದುವರಿಸಿದರು. ಈ ಸಂದರ್ಭ ವಿಧಾನ ಪರಿಷತ್ ಶಾಸಕ ಐವನ್ ಡಿಸೋಜಾರವರು ಮಧ್ಯ ಪ್ರವೇಶಿಸಿ ಉತ್ತರ ನೀಡಲು ಅವಕಾಶ ನೀಡಿ ಎಂದಾಗ, ನಾವು ಪ್ರಶ್ನಿಸುತ್ತಿರುವುದು ಉಸ್ತುವಾರಿ ಸಚಿವರನ್ನು ಎಂದು ಆರೋಪ ಮುಂದುವರಿಸಿದರು. ಈ ಸಂದರ್ಭ ಕೆಲ ನಿಮಿಷಗಳ ಕಾಲ ಶಾಸಕರ ನಡುವೆ ವಾಗ್ವಾದ ನಡೆದಾಗ ಜಿಲ್ಲಾ ಉಸ್ತುವಾರಿ ಸಚಿವರು ಒಬ್ಬೊಬ್ಬರು ಮಾತನಾಡಿ, ಎಲ್ಲರೂ ಒಟ್ಟಾಗಿ ಮಾತನಾಡಬೇಡಿ ಎಂದು ಹೇಳಿದರಲ್ಲದೆ ಐವನ್ ಡಿಸೋಜಾರನ್ನು ಮತ್ತೆ ಮಾತನಾಡುವಂತೆ ಸೂಚಿಸಿದರು.

ಕಳೆದ ಅವಧಿಯಲ್ಲಿ ಮಹಾತ್ಮಗಾಂಧಿ ನಗರ ವಿಕಾಸ ಯೋಜನೆಯಲ್ಲಿ 125 ಕೋಟಿ ರೂ. ಮಂಗಳೂರಿಗೆ ನೀಡಲಾಗಿತ್ತು. 45 ಕೋಟಿ ರೂ. ಕಾಮಗಾರಿ ಆಗಿದ್ದು, ಉಳಿದ ಕಾಮಗಾರಿ ಕೈಗೆತ್ತಿಕೊಳ್ಳದೆ ಅರ್ಧಕ್ಕೆ ನಿಂತಿದೆ. ಸರಕಾರದಿಂದ ಈ ಕಾಮಗಾರಿ ಮುಂದುವರಿಸದಂತೆ ಆದೇಶ ಬಂದ ಕಾರಣ ಗುತ್ತಿಗೆದಾರರು ಕಾಮಗಾರಿ ನಿಲ್ಲಿಸಿದ್ದಾರೆ. ಕೆಯುಎಫ್‌ಡಿಸಿಯಡಿ ಜಲಸಿರಿ ಕಾಮಗಾರಿಯಡಿ 72 ಕೋಟಿ ರೂ. ರೆಸ್ಟೋರೇಶನ್ ಕಾಮಗಾರಿಯ ಹಣವನ್ನು ಬೇರೆ ಕಾಮಗಾರಿಗೆ ವರ್ಗಾವಣೆ ಮಾಡಲಾಗಿದೆ. ಅನುದಾನ ಬದಲಾವಣೆ ಮಾಡುವಾಗ ಸ್ಥಳೀಯ ಜನಪ್ರತಿನಿಧಿಗಳಿಗೆ ತಿಳಿಸುವ ಕಾರ್ಯವೂ ಮಾಡಿಲ್ಲ. ವಿವಿಧ ನಿಗಮಗಳಿಗೆ ಅನುದಾನವೇ ನೀಡಿಲ್ಲ. ಜಿಲ್ಲೆಯ 31 ಕೋಟಿ ರೂ. ವಿವಿಧ ಸಮುದಾಯ ಭವನಗಳ ಕಾಮಗಾರಿ ತಡೆಹಿಡಿಯಲಾಗಿದೆ ಎಂದು ವೇದವ್ಯಾಸ ಕಾಮತ್ ಆರೋಪಿಸಿದರು.

ನಾವು ನಮ್ಮ ಜಿಲ್ಲೆಯ ಅಭಿವೃದ್ಧಿಗೆ ಅನುದಾನ ಕೇಳಿರುವುದು. ಹಿಂದಿನ ಸರಕಾರ ಮಾಡಿದ್ದ ಕಾಮಗಾರಿಗಳ ಅನುದಾನ ತಡೆ ಹಿಡಿರುವುದನ್ನು ಮಂಜೂರು ಮಾಡುವಂತೆ ಕಳೆದ ಸಭೆಯಲ್ಲೂ ಹೇಳಿದ್ದೆವು. ವಿವಿಧ ಸಮುದಾಯ ಭವನಗಳ ಕಾಮಗಾರಿ ತಡೆಹಿಡಿಯಲಾಗಿದೆ ಎಂದು ಶಾಸಕ ಹರೀಶ್ ಪುಂಜಾ ಮತ್ತೆ ಆರೋಪ ಮುಂದುವರಿಸಿದಾಗ, ‘ನೀವು ಉತ್ತರ ಕೊಡಲು ಬಿಡದೆ ಕೇವಲ ಆರೋಪ ಮಾಡುವ ಉದ್ದೇಶದಿಂದಲೇ ಬಂದಿರುವ ಹಾಗಿದೆ. ಚರ್ಚೆಯೂ ಇಲ್ಲದೆ, ಉತ್ತರ ನೀಡಲು ಅವಕಾಶ ನೀಡುತ್ತಿಲ್ಲವಲ್ಲ’ ಎಂದು ಉಸ್ತುವಾರಿ ಸಚಿವ ದಿನೇಶ್ ಗುಂಡುರಾವ್ ಆಕ್ಷೇಪಿಸಿದರು.

ಬಿಜೆಪಿ ಶಾಸಕರು ತಮ್ಮ ಆರೋಪ ಮುಂದುವರಿಸಿದಾಗ ವಿಧಾನ ಪರಿಷತ್ ಶಾಸಕ ಐವನ್ ಡಿಸೋಜಾ ಮತ್ತೆ ಎದ್ದು ನಿಂತು ಶಾಸಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭ ಕೆಲ ನಿಮಿಷಗಳ ಕಾಲ ಸಭೆಯಲ್ಲಿ ಪರಸ್ಪರ ವಾಗ್ವಾದ ನಡೆದು ವೇದಿಕೆಯಲ್ಲಿದ್ದ ಸಂಸದ ಬ್ರಜೇಶ್ ಚೌಟ ಸೇರಿದಂತೆ ಬಿಜೆಪಿಯ ಶಾಸಕರು, ವಿಧಾನ ಪರಿಷತ್ ಶಾಸಕ ಕಿಶೋರ್ ಕುಮಾರ್ ಕೂಡ ಸಭೆಯಿಂದ ಹೊರನಡೆದರು.

ಸಭೆಯಲ್ಲಿ ಉಪಸ್ಥಿತರಿದ್ದ ವಿಧಾನ ಪರಿಷತ್ ಶಾಸಕ ಬೋಜೇಗೌಡರೂ ಹೊರ ಹೋಗಿ ಬರುತ್ತೇನೆ ಎಂದು ಹೇಳಿ ಹೊರ ನಡೆದು ಕೆಲ ನಿಮಿಷಗಳ ಬಳಿಕ ಮತ್ತೆ ಸಭೆಯಲ್ಲಿ ಭಾಗವಹಿಸಿದರು.

ಬಿಜೆಪಿ ಶಾಸಕರ ನಡೆಯಿಂದ ಅಸಮಾಧಾನಗೊಂಡ ಉಸ್ತುವಾರಿ ಸಚಿವರು ಸಭೆಯಲ್ಲಿ ಪ್ರತಿಕ್ರಿಯಿಸುತ್ತಾ, ಅಧಿಕಾರಿ ಗಳಿಂದ ಉತ್ತರ ಕೊಡಲು ಅವಕಾಶವೂ ನೀಡದೆ ಈ ರೀತಿ ಸಭಾತ್ಯಾಗ ಮಾಡುವುದು ಸರಿಯಲ್ಲ. ಮುಖಮಂತ್ರಿಯವರು ಈಗಾಗಲೇ ಮಳೆ ಹಾನಿ ಪ್ರದೇಶಗಳಿಗೆ 2000 ಕೋಟಿ ರೂ. ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ. ಅಪೆಂಡಿಕ್ಸ್ ನಲ್ಲಿ ಪಿಡಬ್ಲ್ಯುಡಿ ರಸ್ತೆಗಳಿಗೆ 4000 ಕೋಟಿರೂ. ಬಿಡುಗಡೆ ಮಾಡಲು ತೀರ್ಮಾನ ಆಗಿದೆ. ಒಟ್ಟು 6000 ಕೋಟಿ ರೂ. ಇಡೀ ರಾಜ್ಯಾದ್ಯಂತ ಬಿಡುಗಡೆಗೆ ತೀರ್ಮಾನ ಆಗಿದೆ. ಪ್ರತಿಯೊಬ್ಬ ಶಾಸಕರ ಕ್ಷೇತ್ರಕ್ಕೆ ಪಕ್ಷಾತೀತವಾಗಿ ನೀಡುವುದಾಗಿ ಹೇಳಿ ದ್ದಾರೆ. ಅದನ್ನೆಲ್ಲಾ ವಿಧಾನಸಭೆಯಲ್ಲಿ ಕೇಳಿಕೊಂಡು ಬಂದು ಇಲ್ಲಿ ಪ್ರಚಾರಕ್ಕಾಗಿ ಏನೂ ಕೆಲಸ ಆಗಿಲ್ಲ ಎಂದು ಉದ್ದೇಶ ಪೂರ್ವಕವಾಗಿ ಮಾತನಾಡುವುದರಿಂದ ಏನು ಪ್ರಯೋಜನ ಎಂದರು.

ನಾವು ಉತ್ತರ ನೀಡಲು ಸಿದ್ಧರಿದ್ದೇವೆ. ಏನಾದರೂ ಸಮಸ್ಯೆ ಇದಲ್ಲಿ ಅದನ್ನು ಬಗೆಹರಿಸುವ ನಿಟ್ಟಿನಲ್ಲಿ ಚರ್ಚಿಸಿ ಸರಕಾರಕ್ಕೆ ಮುಟ್ಟಿಸಬೇಕಾಗಿದೆ. 5.67 ಕೋಟಿ ರೂ.ಗಳನ್ನು ಶಾಲೆ ಮತ್ತು ಅಂಗನವಾಡಿಗಳ ದುರಸ್ತಿಗೆ ಬಿಡುಗಡೆ ಮಾಡಲಾಗಿದೆ. ಆರ್‌ಡಿಪಿಆರ್‌ನಲ್ಲಿ ಹಾಳಾಗಿರುವ ರಸ್ತೆಗಳಿಗಾಗಿ 44 ಕೋಟಿ ರೂ.ಗಳ ಪ್ರಸ್ತಾವನೆ ಸಲ್ಲಿಕೆಯಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

ಬಳಿಕ ಸಭೆಗೆ ಆಗಮಿಸಿದ ಪುತ್ತೂರು ಶಾಸಕ ಅಶೋಕ್ ರೈ, ವಿಧಾನ ಪರಿಷತ್ ಶಾಸಕ ಧನಂಜಯ ಸುರ್ಜಿ ಉಪಸ್ಥಿತಿ ಯಲ್ಲಿ ಸಭೆ ಮುಂದುವರಿಯಿತು.

ಶಾಲೆಗಳ ಮಾನ್ಯತೆ ನವೀಕರಣದ ಹೆಸರಲ್ಲಿ ಕಿರುಕುಳ ನಿಲ್ಲಿಸಿ: ಬೋಜೇಗೌಡ

ದ.ಕ. ಜಿಲ್ಲೆಯಲ್ಲಿ ಹಳೆಯ ಶಾಲೆಗಳಿಗೆ ಮಾನ್ಯತೆ ನವೀಕರಣಕ್ಕೆ ಸಂಬಂಧಿಸಿ ಅನುದಾನ ರಹಿತ ಶಾಲೆಗಳಿಗೆ ನಾನಾ ರೀತಿಯಲ್ಲಿ ಕಿರುಕುಳ ನೀಡಲಾಗುತ್ತಿದೆ ಎಂದು ವಿಧಾನ ಪರಿಷತ್ ಶಾಸಕ ಬೋಜೇಗೌಡ ಆಕ್ಷೇಪಿಸಿದರು.

ಹೈಕೋರ್ಟ್ ಆದೇಶದಂತೆ ಹಳೆಯ ಶಾಲೆಗಳಿಗೆ ಅಗ್ನಿ ಸುರಕ್ಷತೆ ಮಾಡಲು ನಿಗದಿತ ಕಾಲಾವಕಾಶ ನೀಡಲಾಗಿದೆ ಎಂದು ಅಧಿಕಾರಿಗಳು ಹೇಳಿದಾಗ, ಇದರಿಂದ ನೂರಾರು ವರ್ಷಗಳಿಂದ ಕಾರ್ಯಾಚರಿಸುತ್ತಿರುವ ಶಾಲೆಗಳು ತೊಂದರೆ ಅನುಭವಿ ಸುವಂತಾಗಿದೆ. ಇದಕ್ಕೆ ಸೂಕ್ತ ನಿರ್ಣಯ ಮಾಡಬೇಕು ಎಂದು ಬೋಜೇಗೌಡರು ಆಗ್ರಹಿಸಿದರು.

ಅಡಿಕೆ- ಕಾಳು ಮೆಣಸಿಗೆ ವಿಮೆ: ಉತ್ತಮ ಪ್ರತಿಕ್ರಿಯೆ

2024-25ನೆ ಸಾಲಿನಲ್ಲಿ ಅಡಿಕೆ ಮತ್ತು ಕಾಳುಮೆಣಸು ಬೆಳೆಗಳಿಗೆ ಜುಲೈ 1ರಿಂದ ಹವಾಮಾನ ಆಧಾರಿತ ಬೆಳೆ ವಿಮೆ ಆರಂಭಿಸಲಾಗಿದ್ದು, ಉತ್ತಮ ಪ್ರಚಾರದ ಕಾರಣ ರೈತರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಜಿಲ್ಲೆಯಲ್ಲಿ ಒಟ್ಟು 94519 ಅಡಿಕೆ ಬೆಳೆಗಾರರು, 37734 ಕಾಳು ಮೆಣಸು ಬೆಳೆಗಾರರು ನೋಂದಣಿ ಮಾಡಿಕೊಂಡಿದ್ದಾರೆ. ಈ ಯೋಜನೆಯಡಿ ಈ ಮೂಲಕ ಜಿಲ್ಲೆಯ 256910 ಎಕರೆ ಅಡಿಕೆ ಹಾಗೂ 93382 ಎಕರೆ ಕಾಳು ಮೆಣಸು ಪ್ರದೇಶವಾಗಿದೆ ಎಂದು ತೋಟಗಾರಿಕಾ ಇಲಾಖೆಯ ಉಪ ನಿರ್ದೇಶಕರು ಮಾಹಿತಿ ನೀಡಿದರು.

ಸಳ್ಯ ತಾಲೂಕಿನಲ್ಲಿ ಹಳದಿ ರೋಗದಿಂದ ಈಗಾಲೇ ಸಾಕಷ್ಟು ಅಡಿಕೆ ಬೆಳೆ ಹಾಳಾಗಿದೆ. ಕಳೆದ 20 ವರ್ಷಗಳಿಂದ ಈ ಬಗ್ಗೆ ಸಂಶೋಧನೆ ನಡೆಸಲಾಗುತ್ತಿದ್ದರೂ ಸೂಕ್ತ ಔಷಧಿ ಕಂಡುಹಿಡಿಯಲಾಗಿಲ್ಲ. ಇದೀಗ ಎಲೆಚುಕ್ಕಿ ರೋಗವೂ ಅಡಿಕೆ ಬೆಳೆಗಾರ ರನ್ನು ಬಹುವಾಗಿ ಬಾಧಿಸುತ್ತಿದೆ ಎಂದು ಗ್ಯಾರಂಟಿ ಯೋಜನೆಗಳ ಜಿಲ್ಲಾ ಅಧ್ಯಕ್ಷ ಭರತ್ ಮುಂಡೋಡಿ ಸಭೆಯ ಗಮನ ಸೆಳೆದರು.

ಸಭೆಯಲ್ಲಿ ನಾಮ ನಿರ್ದೇಶಿತ ಸದಸ್ಯರಾದ ಮೆಲ್ವಿನ್ ಡಿಸೋಜಾ, ಹಮೀದ್ ಕಿನ್ಯ, ಸಂತೋಷ್ ಕುಮಾರ್, ಪ್ರವೀಣ್ ಕುಮಾರ್ ಜೈನ್, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಜಿ.ಪಂ. ಸಿಇಒ ಡಾ. ಆನಂದ್, ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್, ಪೊಲೀಸ್ ವರಿಷ್ಠಾಧಿಕಾರಿ ಯತೀಶ್, ಅಪರ ಜಿಲ್ಲಾಧಿಕಾರಿ ಡಾ. ಸಂತೋಷ್, ಪಾಲಿಕೆ ಆಯುಕ್ತ ಆನಂದ್ ಮೊದಲಾದವರು ಉಪಸ್ಥಿತರಿದ್ದರು.

157 ಆರೋಗ್ಯ ಉಪ ಕೇಂದ್ರಗಳಿಗೆ ನಿವೇಶನ ಗುರುತು

ಜಿಲ್ಲೆಯಲ್ಲಿ ಸ್ವಂತ ಕಟ್ಟಡ, ನಿವೇಶನ ಇಲ್ಲದ 186 ಆರೋಗ್ಯ ಉಪ ಕೇಂದ್ರಗಲಲ್ಲಿ 157ಕ್ಕೆ ನಿವೇಶನ ಲಭ್ಯವಾಗಿದೆ. ತಲಾ 65 ಲಕ್ಷ ರೂ. ಘಟಕ ವೆಚ್ಚದಡಿ 17 ಉಪ ಕೇಂದ್ರಗಳ ಕಟ್ಟಡ ನಿರ್ಮಾಣಕ್ಕೆ ಈಗಾಗಲೇ ಟೆಂಡರ್ ಕರೆಯಲಾಗಿದೆ. 41 ಉಪ ಕೇಂದ್ರಗಳಿಗೆ 2025-26ರ ಅನುದಾನದಲ್ಲಿ ಕಟ್ಟಡವಾಗಲಿದೆ ಎಂದು ಆರೋಗ್ಯಾಧಿಕಾರಿ ಡಾ. ತಿಮ್ಮಯ್ಯ ಸಭೆಗೆ ಮಾಹಿತಿ ನೀಡಿದರು.






share
ವಾರ್ತಾಭಾರತಿ
ವಾರ್ತಾಭಾರತಿ
Next Story
X