ದ.ಕ. ಜಿಲ್ಲೆಗೆ ಮರು ನಾಮಕರಣ: ಶಾಸಕ ಕಾಮತ್ ಬೆಂಬಲ

ಮಂಗಳೂರು, ಜು.5: ದ.ಕ.ಜಿಲ್ಲೆಗೆ ಮಂಗಳೂರು ಎಂಬುದಾಗಿ ನಾಮಕರಣ ಮಾಡುವ ಬಗ್ಗೆ ಕೂಗಿಗೆ ಸಹಮತ ವ್ಯಕ್ತಪಡಿಸಿರುವ ಶಾಸಕ ವೇದವ್ಯಾಸ ಕಾಮತ್, ಮಂಗಳೂರು ಜಿಲ್ಲೆ ತುಳುಪರ ಹೋರಾಟ ಸಮಿತಿ ಸಂಚಾಲಕನಾಗಿ ಈ ಬೇಡಿಕೆಯನ್ನು ಬೆಂಬಲಿಸುವುದಾಗಿ ಹೇಳಿದ್ದಾರೆ.
ಪತ್ರಿಕಾ ಪ್ರಕಟನೆಯ ಮೂಲಕ ಹೇಳಿಕೆ ನೀಡಿರುವ ಶಾಸಕ ವೇದವ್ಯಾಸ ಕಾಮತ್, ಸರ್ವ ಧರ್ಮ, ಪಕ್ಷ ಹಾಗೂ ಸಂಘಟನೆಗಳು ಒಗ್ಗೂಡಿರುವ ಈ ಹೋರಾಟಕ್ಕೆ ತಮ್ಮ ಬೆಂಬಲವೂ ಇದೆ ಎಂದಿದ್ದಾರೆ.
ಬ್ರಿಟಿಷರ ಕಾಲದ್ಲಿ ತುಳುನಾಡು ಹೋಗಿ ಸೌತ್ ಕೆನರಾ ಆಯಿತು. ಸ್ವತಂತ್ರ ಭಾರತದಲ್ಲಿ ರಾಜ್ಯ ವಿಂಗಡಣೆ ಸಂದರ್ಭ ಸೌತ್ ಕೆನರಾ ದಕ್ಷಿಣ ಕನ್ನಡವಾಗಿ ಬದಲಾಯಿತು. ಹಾಗಾಗಿ ಈ ನೆಲಕ್ಕೂ ದಕ್ಷಿಣ ಕನ್ನಡ ಹೆಸರಿಗೂ ಯಾವುದೇ ಸಂಬಂಧವಿಲ್ಲ ಎಂದು ಇತಿಹಾಸದ ಪುಟಗಳು ಹೇಳುತ್ತವೆ. ಜಿಲ್ಲೆಗೆ ಮರ ನಾಮಕರಣದ ಹೋರಾಟ ನಿನ್ನೆ ಮೊನ್ನೆಯದಲ್ಲ. ಸುಮಾರು 100 ವರ್ಷಗಳ ಹಿಂದಿನಿಂದಲೂ ಆಗ್ರಹವಿದೆ. ಜಿಲ್ಲೆಯ ಹೆಸರು ಬದಲಾವಣೆಯಾದಲ್ಲಿ ತುಳು ಭಾಷೆಯ ಹೋರಾಟಕ್ಕೂ ಪುಷ್ಟಿ ಸಿಗಲಿದೆ ಎಂದವರು ಹೇಳಿದ್ದಾರೆ.
Next Story