Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮೀನುಗಾರ ಸಮುದಾಯದ ಶಾಂತಿ ಕದಡಬೇಡಿ,...

ಮೀನುಗಾರ ಸಮುದಾಯದ ಶಾಂತಿ ಕದಡಬೇಡಿ, ಅಭಿವೃದ್ಧಿ ಕಾರ್ಯಕ್ಕೆ ಕೈಜೋಡಿಸಿ: ಮೀನುಗಾರರು, ವ್ಯಾಪಾರಸ್ಥರ ಸಂಘಗಳ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ27 Sept 2023 1:02 PM IST
share
ಮೀನುಗಾರ ಸಮುದಾಯದ ಶಾಂತಿ ಕದಡಬೇಡಿ, ಅಭಿವೃದ್ಧಿ ಕಾರ್ಯಕ್ಕೆ ಕೈಜೋಡಿಸಿ: ಮೀನುಗಾರರು, ವ್ಯಾಪಾರಸ್ಥರ ಸಂಘಗಳ ಒತ್ತಾಯ

ಮಂಗಳೂರು, ಸೆ.27: ಮೀನುಗಾರಿಕಾ ಬಂದರಿನಲ್ಲಿ ಕೋಮು ಸೌಹಾರ್ದ ಕಾಪಾಡುವ ನಿಟ್ಟಿನಲ್ಲಿ ವಿವಿಧ ಸಂಘಟನೆಗಳ ಒಕ್ಕೂಟವು ಹಲವು ವರ್ಷಗಳಿಂದ ಶಾಂತಿ ಕಾಪಾಡಿಕೊಂಡು ಬಂದಿದೆ. ಇದೀಗ ಹೊರಗಿನವರು ಯಾರೂ ಸಮುದಾಯದ ಈ ಶಾಂತಿ ಕದಡುವ ಪ್ರಯತ್ನ ಬಿಟ್ಟು, ಅಭಿವೃದ್ಧಿ ಕಾರ್ಯದಲ್ಲಿ ನಮ್ಮ ಜತೆ ಕೈಜೋಡಿಸಿ ಎಂದು ಮೀನುಗಾರರು ಹಾಗೂ ಮೀನು ವ್ಯಾಪಾರಸ್ಥರ ಸಂಘಗಳು ಒತ್ತಾಯಿಸಿವೆ.

ಪ್ರೆಸ್ಕ್ಲ ಬ್ನಲ್ಲಿ ಬುಧವಾರ ಕರ್ನಾಟಕ ಪರ್ಸಿನ್ ಮೀನುಗಾರರ ಸಂಘ, ಮಂಗಳೂರು ಟ್ರಾಲ್ ಬೋಟ್, ಹಸಿಮೀನು ವ್ಯಾಪಾರಸ್ಥರು, ಒಣ ಮೀನು ವ್ಯಾಪಾರಸ್ಥರು, ಸೀ ಫುಡ್ ಬಯ್ಸರ್ ಅಸೋಸಿಯೇಶನ್, ಮಂಗಳೂರು ಹಸಿ ಮೀನು ಕಮಿಶನ್ ಏಜೆಂಟರ ಸಂಘ, ದ.ಕ. ಜಿಲ್ಲಾ ಗಿಲ್ ನೆಟ್ ಮೀನುಗಾರರ ಸಂಘಗಳ ಪ್ರತಿನಿಧಿಗಳ ಪರವಾಗಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಚೇತನ್ ಬೆಂಗ್ರೆ, ಒಕ್ಕೂಟವು ಕಳೆದ ಹಲವಾರು ವರ್ಷಗಳ ಹಿಂದೆ ಹಿರಿಯರು ಸೇರಿ ಕೈಗೊಂಡ ಒಮ್ಮತದ ನಿರ್ಧಾರದ ಪ್ರಕಾರ ಮೀನುಗಾರಿಕಾ ಬಂದರಿನಲ್ಲಿ ಎಂಟು ದಿನ ಮೀನುಗಾರಿಕಾ ರಜೆಗಳನ್ನು ಘೋಷಿಸಲಾಗಿದೆ ಎಂದರು.

ಚೌತಿ ಹಬ್ಬ, ಬಾರ್ಕೂರು ಶ್ರೀ ಕುಲ ಮಹಾಸ್ತ್ರಿ ಅಮ್ಮನವರ ವಾರ್ಷಿಕ ಜಾತ್ರೆ, ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ವಾರ್ಷಿಕ ಜಾತ್ರೆ, ಮೀಲಾದುನ್ನಬಿ, ಬಕ್ರೀದ್, ಈದುಲ್ ಫಿತ್ರ್, ಕ್ರಿಸ್ಮಸ್ ಹಾಗೂ ಗುಡ್ ಫ್ರೈಡೆ ಈ ರಜೆಯನ್ನು ಎಲ್ಲರೂ ಕ್ರಮಬದ್ಧವಾಗಿ ಪಾಲಿಸುತ್ತಿದ್ದಾರೆ. ಚೌತಿ ಸಂದರ್ಭದಲ್ಲೂ ಹೊಸತಾಗಿ ಮೀನುಗಾರಿಕೆ ಚಟುವಟಿಕೆಗೆ ಬಂದವರು ಒಕ್ಕೂಟದ ನಿರ್ಣಯ ಉಲ್ಲಂಘಿಸಿ ಮೀನುಗಾರಿಕಾ ಚಟುವಟಿಕೆ ನಡೆಸಿರುವುದು ಕಂಡುಬಂದಿದ್ದು, ಇದಕ್ಕಾಗಿ ರಜೆಯ ನಿರ್ಬಂಧವನ್ನು ಕಡ್ಡಾಯವಾಗಿ ಪಾಲಿಸುವಂತೆ ಫ್ಲೆಕ್ಸ್ ಮೂಲಕ ತಿಳಿಸಲಾಗಿತ್ತು. ಇದರಲ್ಲಿ ಯಾವುದೇ ಗೊಂದಲವಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಫ್ಲೆಕ್ಸ್, ಬ್ಯಾನರ್ ಅಳವಡಿಸುವುದು ಇದೇ ಮೊದಲಲ್ಲ. ಪ್ರತೀ ವರ್ಷವೂ ಹೊಸತಾಗಿ ಮೀನುಗಾರಿಕೆ ಚಟುವಟಿಕೆ ನಡೆಸುವವರಿಗೆ ತಿಳಿಯುವ ಹಾಗೂ ಮೀನಿಗಾಗಿ ಬಂದರಿಗೆ ಬರುವವರಿಗೆ ಮಾಹಿತಿಗಾಗಿ ಈ ಕ್ರಮ ಅನುಸರಿಸಲಾಗುತ್ತದೆ ಎಂದು ಟ್ರಾಲ್ ಬೋಟ್ ಮೀನುಗಾರರ ಸಂಘದ ಅಧ್ಯಕ್ಷರೂ ಆಗಿರುವ ಚೇತನ್ ಬೆಂಗ್ರೆ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಪರ್ಸಿನ್ ಮೀನುಗಾರರ ಸಂಘದ ಉಪಾಧ್ಯಕ್ಷ ಮನೋಹರ್ ಬೆಂಗ್ರೆ, ವಿವಿಧ ಸಂಘಗಳ ಮುಖಂಡರಾದ ಯು.ಕೆ.ಅಹ್ಮದ್, ಸುಭಾಶ್ಚಂದ್ರ ಕಾಂಚನ್, ಇಬ್ರಾಹೀಂ ಬೆಂಗರೆ, ಎಸ್.ಎಂ.ಇಬ್ರಾಹೀಂ ಮೊದಲಾದವರು ಉಪಸ್ಥಿತರಿದ್ದರು.


3ನೇ ಹಂತದ ಕಾಮಗಾರಿಗೆ 49.50 ಕೋಟಿ ರೂ. ಅನುಮೋದನೆ

ಮಂಗಳೂರು ಮೀನುಗಾರಿಕಾ ಬಂದರಿನ 3ನೇ ಹಂತದ ವಿಸ್ತರಣೆ ಕಾಮಗಾರಿ ಆರಂಭಗೊಂಡಿದ್ದರೂ 11 ವರ್ಷಗಳಿಂದ ಸ್ಥಗಿತಗೊಂಡಿದೆ. ಉಳಿಕೆ ಕಾಮಗಾರಿ ಕೈಗೊಳ್ಳಲು ನೂತನ ರಾಜ್ಯ ಸರಕಾರ 49.50 ಕೋಟಿ ರೂ. ವೆಚ್ಚದ ಪರಿಷ್ಕೃತ ಅಂದಾಜು ವೆಚ್ಚಕ್ಕೆ ಆಡಳಿತಾತ್ಮಕ ಅನುಮೋದನೆ ನೀಡಿದೆ. ಇದಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಸಂಪುಟದ ಸದಸ್ಯರಿಗೆ ಅಭಿನಂದನೆ ಸಲ್ಲಿಸುವುದಾಗಿ ಚೇತನ್ ಬೆಂಗ್ರೆ ಈ ಸಂದರ್ಭ ಹೇಳಿದರು.


ವಾರ್ತಾಭಾರತಿ ಓದುಗರಿಗೆ ಶುಭಸುದ್ದಿ: ನಿಮ್ಮ ನೆಚ್ಚಿನ VB ಈಗ ವಾಟ್ಸ್ ಆ್ಯಪ್ ಚಾನೆಲ್ ನಲ್ಲೂ ಲಭ್ಯ

https://whatsapp.com/channel/0029VaA8ju86LwHn9OQpEq28 ಈ ಲಿಂಕ್ ಕ್ಲಿಕ್ ಮಾಡಿ, Follow ಮಾಡುವ ಮೂಲಕ ಕ್ಷಣಕ್ಷಣದ ಅಪ್ಡೇಟ್ ಪಡೆಯಿರಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X