Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಖ್ಯಾತ ನಾಟಕಕಾರ ಗಿರೀಶ್ ಪಿಲಾರ್ ನಿಧನ

ಖ್ಯಾತ ನಾಟಕಕಾರ ಗಿರೀಶ್ ಪಿಲಾರ್ ನಿಧನ

ವಾರ್ತಾಭಾರತಿವಾರ್ತಾಭಾರತಿ19 July 2023 12:05 AM IST
share
ಖ್ಯಾತ ನಾಟಕಕಾರ ಗಿರೀಶ್ ಪಿಲಾರ್ ನಿಧನ

ಉಳ್ಳಾಲ: ಖ್ಯಾತ ನಾಟಕಕಾರ, ನಟ ಪಂಡಿತ್‍ ಹೌಸ್ ಪಿಲಾರು ನಿವಾಸಿ ಗಿರೀಶ್ ಪಿಲಾರ್ (60) ಅಲ್ಪಕಾಲದ ಅಸೌಖ್ಯದಿಂದ ಆಸ್ಪತ್ರೆಯಲ್ಲಿ ನಿಧನರಾದರು.

`ದೇವೆರೆ ತೀರ್ಪು', `ಆರ್ ಅತ್ ಈರ್', `ಕೈಕೊರ್ಪೆರ್', `ಬಲಿಪಡೆ ಉಂತುಲೆ', `ಎಂಕುಲತ್ ನಿಕುಲು' , `ಎಂಕುಲ್ ಎನ್ನಿಲೆಕ ಅತ್',ಆರ್ ಅತ್ ಈರ್, `ಡಿಸೆಂಬರ್ -1' ಸೇರಿದಂತೆ 20ಕ್ಕೂ ಅಧಿಕ ತುಳು ನಾಟಕಗಳನ್ನು ಬರೆದು ನಿರ್ದೇಶಿಸಿದ್ದರು. ಇವರು ಬರೆದು ನಿರ್ದೇಶಿಸಿದ ದೇವೆರೆ ತೀರ್ಪು ನಾಟಕಕ್ಕೆ ಜಿಲ್ಲಾಮಟ್ಟದ ಪ್ರಶಸ್ತಿ ಲಭಿಸಿತ್ತು. ಮಂಗಳೂರಿನ ಪುರಭವನದಲ್ಲಿ ಹಲವು ಬಾರಿ ಪ್ರದರ್ಶನಗೊಂಡಿತ್ತು.

`ಕೈಕೊರ್ಪೆರ್' ನಾಟಕ ಬೆಳ್ತಂಗಡಿಯ ಪೂಂಜಾಲಕಟ್ಟೆಯಲ್ಲಿ ಯಶಸ್ವಿ ಪ್ರದರ್ಶನ ಕಂಡು ಪ್ರಶಸ್ತಿಯನ್ನು ಪಡೆದುಕೊಂಡಿತ್ತು. `ಬಲಿಪಡೆ ಉಂತುಲೆ' 40 ಪ್ರದರ್ಶನಗಳನ್ನು ಕಂಡಿತ್ತು. ಶರವು ಕಲಾವಿದರು ನಟಿಸಿದ ನವ ನೀತ್ ಶೆಟ್ಟಿ ಕದ್ರಿ ರಚಿಸಿದ ಕಾರ್ನಿಕದ ಶನೀಶ್ವೆರೆ ನಾಟಕವನ್ನು ಗಿರೀಶ್ ಪಿಲಾರ್ ನಿರ್ದೇಶಿಸಿ ಯಶಸ್ವಿ 30 ಪ್ರದರ್ಶನವಾಗಿತ್ತು.

ದಿನೇಶ್ ಕಂಕನಾಡಿ ಇವರ ನಾಟಕ ` ಮಾಷ್ಟ್ರ್ ದಾನೆ ಮನಿಪುಜೆರ್' ನಾಟಕದಲ್ಲಿ ಪ್ರಧಾನ ಭೂಮಿಕೆಯಲ್ಲಿ ನಟಿಸಿದ್ದರು. ಹಲವು ನಾಟಕಗಳಲ್ಲಿ ಸ್ತ್ರೀ ಪಾತ್ರಧಾರಿಯಾಗಿ ಪ್ರೇಕ್ಷಕರ ಗಮನ ಸೆಳೆದಿದ್ದರು. ಕಿರುತೆರೆಯಲ್ಲಿ ನಟಿಸಿದ್ದ ಗಿರೀಶ್ ಇವರು ನಟಿಸಿದ್ದ ಪುಂಡಿ ಪಣವು ದಾರವಾಹಿ ದೂರದರ್ಶನ ಸೇರಿದಂತೆ ಸ್ಥಳೀಯ ವಾಹಿನಿಗಳಲ್ಲಿ ಪ್ರಸಾರವಾಗುತಿತ್ತು. ‌

ಶಿವಪ್ರಕಾಶ್ ಪೂಂಜ, ಪ್ರದೀಪ್ ಆಳ್ವ ಕದ್ರಿ, ದಿ. ಮನಮೋಹನ್ ಕದ್ರಿ ಹಾಗೂ ಗಿರೀಶ್ ಪಿಲಾರ್ ಪ್ರಕೃತಿ ಕಲಾವಿದರು ಕುಡ್ಲ ಇದರ ಸ್ಥಾಪಕರಾಗಿದ್ದರು. ಮೂಲತ: ಬೆಳ್ತಂಗಡಿ ಪೂಂಜಾಲಕಟ್ಟೆಯವರಾಗಿದ್ದ ಇವರು ಪದವಿ ನಂತರ ಪಿಲಾರು ಬಳಿ ವಾಸವಾಗಿದ್ದರು. ಕುತ್ತಾರು ಶ್ರೀ ರಾಜರಾಜೇಶ್ವರಿ ಸಿದ್ಧಿವಿನಾಯಕ ದೇವಸ್ಥಾನದ ಟ್ರಸ್ಟ್ ಸದಸ್ಯರೂ ಆಗಿದ್ದರು. ಜಾಗೃತ ವಿವಿಧೋದ್ದೇಶ ಸಹಕಾರಿ ಸಂಘದಲ್ಲಿ ಹಲವು ವರ್ಷಗಳಿಂದ ಪಿಗ್ಮಿ ಸಂಗ್ರಹಕಾರ ರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಮೃತರು ಇಬ್ಬರು ಪುತ್ರರು ಹಾಗೂ ಪತ್ನಿಯನ್ನು ಅಗಲಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X