ಮಂಗಳೂರು | ಮಾದಕ ವಸ್ತು ಮಾರಾಟ ಪ್ರಕರಣ: ಆರೋಪಿ ಸೆರೆ

ಸಾಂದರ್ಭಿಕ ಚಿತ್ರ
ಮಂಗಳೂರು: ಮಾದಕ ವಸ್ತು ಮಾರಾಟಕ್ಕೆ ಯತ್ನಿಸುತ್ತಿದ್ದ ನಗರದ ಕುಂಟಿಕಾನ ನಿವಾಸಿ ಶಬರೀಶ್ ಯಾನೆ ಶಬರಿ (24) ಎಂಬಾತನನ್ನು ಬರ್ಕೆ ಪೊಲೀಸರು ಬಂಧಿಸಿದ್ದಾರೆ.
ನಗರದ ಬೋಳೂರಿನಲ್ಲಿ ಎಂಡಿಎಂಎ ಡ್ರಗ್ಸ್ ಮಾರಾಟಕ್ಕೆ ಬರುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ಮಂಗಳವಾರ ಅಪರಾಹ್ನ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
ಆರೋಪಿಯನ್ನು ವಿಚಾರಣೆಗೆ ಒಳಪಡಿಸಿದಾಗ ತಾನು ಎಂಡಿಎಂಎ ಅನ್ನು ನಗರದ ಕದ್ರಿ ಕಂಬಳದ ನಿವಾಸಿ ಅಮಾನ್ ಎಂಬಾತನಿಂದ ಪಡೆದುಕೊಂಡಿರುವ ಬಗ್ಗೆ ತಿಳಿಸಿದ್ದಾನೆ. ಆರೋಪಿಯಿಂದ ಎಂಡಿಎಂಎ ಇದರ 4.42 ಗ್ರಾಂನ 5 ಪ್ಯಾಕೆಟ್ಗಳು, 1 ಮೊಬೈಲ್ ಫೋನ್ ವಶಪಡಿಸಿಕೊಂಡಿದ್ದಾರೆ.
Next Story





