Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಪತ್ರಕರ್ತರ ಸಂಘದ ಚಟುವಟಿಕೆಗಳಿಗೆ...

ಪತ್ರಕರ್ತರ ಸಂಘದ ಚಟುವಟಿಕೆಗಳಿಗೆ ನೆರವಿಗೆ ಪ್ರಯತ್ನ: ಕೆ.ವಿ. ಪ್ರಭಾಕರ್

ವಾರ್ತಾಭಾರತಿವಾರ್ತಾಭಾರತಿ16 Aug 2023 6:07 PM IST
share
ಪತ್ರಕರ್ತರ ಸಂಘದ ಚಟುವಟಿಕೆಗಳಿಗೆ ನೆರವಿಗೆ ಪ್ರಯತ್ನ: ಕೆ.ವಿ. ಪ್ರಭಾಕರ್

ಮಂಗಳೂರು, ಆ.16: ಕಾರ್ಯನಿರತ ಪತ್ರಕರ್ತರ ಸಂಘದ ಚಟುವಟಿಕೆಗಳಿಗೆ ಸರಕಾರದಿಂದ ನೆರವು ಒದಗಿಸಲು ಪ್ರಯತ್ನ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಅವರ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಹೇಳಿದರು.

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಮಂಗಳೂರು ಪ್ರೆಸ್‌ಕ್ಲಬ್ ಮತ್ತು ಪತ್ರಿಕಾ ಭವನ ಟ್ರಸ್ಟ್ ಸಹಯೋಗದಲ್ಲಿ ಪತ್ರಿಕಾ ಭವನದಲ್ಲಿ ಬುಧವಾರ, ಪತ್ರಕರ್ತರು ಗ್ರಾಮ ವಾಸ್ತವ್ಯ ಮಾಡಿರುವ ಕುತ್ಲೂರು ಉನ್ನತೀಕರಿಸಿದ ಸರಕಾರಿ ಹಿ.ಪ್ರಾಥಮಿಕ ಶಾಲೆಯ 100 ಮಕ್ಕಳಿಗೆ ಎಂಸಿಎಫ್ ಸಿಎಸ್‌ಆರ್ ನಿಧಿ ಮತ್ತು ಇನ್ನರ್‌ವೀಲ್ ಕ್ಲಬ್ ಮಂಗಳೂರು ನಾರ್ತ್ ವತಿಯಿಂದ ಬಿಜೈ ಕಾಪಿಕಾಡ್ ಅಂಗನವಾಡಿಯ ಪುಟಾಣಿಗಳಿಗೆ ಸಮವಸ್ತ್ರ ವಿತರಿಸಿ ಅವರು ಮಾತನಾಡಿದರು.

ದಕ್ಷಿಣ ಕನ್ನಡ ಜಿಲ್ಲೆಯ ಪತ್ರಕರ್ತರು ಹಾಗೂ ಪತ್ರಕರ್ತರ ಸಂಘ ರಾಜ್ಯಕ್ಕೆ ಮಾದರಿಯಾಗಿ ಕಾರ್ಯನಿರ್ವಹಿಸುತ್ತಿದೆ. ಸರಕಾರ, ಶಾಸಕರು, ಜಿಲ್ಲಾಡಳಿತ ಮಾಡಬೇಕಾದ ಕೆಲಸವನ್ನು ಪತ್ರಕರ್ತರ ಸಂಘ ಮಾಡುತ್ತಿದೆ ಎಂದರು.

ಅತಿಥಿಯಾಗಿದ್ದ ದ.ಕ. ಜಿಲ್ಲಾಣ್ಛಕಾರಿ ಮುಲ್ಲೈ ಮುಗಿಲನ್ ಮಾತನಾಡಿ, ದಕ್ಷಿಣ ಕನ್ನಡ ಜಿಲ್ಲೆಯ ಜನತೆ ಸಮಾಜವನ್ನು ಮುನ್ನಡೆಸಲು ಮುಂದೆ ಬರುತ್ತಾರೆ. ಪತ್ರಕರ್ತರು ಪ್ರಶ್ನೆ ಕೇಳುವುದು ಮಾತ್ರವಲ್ಲ, ಕೆಲಸ ಮಾಡಿಯೂ ತೋರಿಸುತ್ತಾರೆ ಎಂಬುದನ್ನು ಕುತ್ಲೂರು ಶಾಲೆಯನ್ನು ಅಭಿವೃದ್ಧಿಪಡಿಸುವ ಮೂಲಕ ಶ್ರುತಪಡಿಸಿದ್ದಾರೆ ಎಂದರು.

ಕುತ್ಲೂರು ಉನ್ನತೀಕರಿಸಿದ ಸರಕಾರಿ ಹಿ.ಪ್ರಾಥಮಿಕ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರಾಮಚಂದ್ರ ಭಟ್ ಮಾತನಾಡಿ, ಕುತ್ಲೂರು ಪ್ರದೇಶದಲ್ಲಿ ಸೇತುವೆಯೊಂದು ಕುಸಿದಿದ್ದುಘಿ, ಜಿಲ್ಲಾಡಳಿತ ಕ್ರಮ ಕೈಗೊಳ್ಳಬೇಕು, ಶಾಲೆಯ ಜಮೀನಿಗೆ ಆವರಣ ಗೋಡೆ ನಿರ್ಮಿಸಬೇಕು ಎಂದು ವಿನಂತಿಸಿದರು.

ಎಂಸಿಎಫ್ ಎಚ್‌ಆರ್ ವಿಭಾಗ ಮುಖ್ಯಸ್ಥ ಚೇತನ್ ಮೆಂಡೋನ್ಸಾ, ಇನ್ನರ್ ವೀಲ್ ಕ್ಲಬ್ ಮಂಗಳೂರು ನಾರ್ತ್ ಅಧ್ಯಕ್ಷೆ ಗೀತಾ ಬಿ. ರೈ ಮುಖ್ಯ ಅತಿಥಿಗಳಾಗಿದ್ದರು.

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಿ, ಸ್ವಾಗತಿಸಿದರು. ಜಿಲ್ಲಾ ವಾರ್ತಾ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ರವಿರಾಜ್, ಮಂಗಳೂರು ಪ್ರೆಸ್‌ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ, ಪತ್ರಿಕಾಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ ಆರ್, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ, ರಾಜ್ಯ ಕಾರ್ಯಕಾರಿ ಸಮಿತಿಯ ನಾಮ ನಿರ್ದೇಶಿತ ಸದಸ್ಯ ಇಬ್ರಾಹಿಂ ಅಡ್ಕಸ್ಥಳ ಉಪಸ್ಥಿತರಿದ್ದರು.

ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ವಂದಿಸಿದರು. ಪುಷ್ಪರಾಜ್ ಬಿ.ಎನ್. ಕಾರ್ಯಕ್ರಮ ನಿರೂಪಿಸಿದರು. ಭಾರತೀಯ ಸೇನೆ ಆಯ್ಕೆಯಾದ ಕುತ್ಲೂರು ಶಾಲೆ ಹಳೆ ವಿದ್ಯಾರ್ಥಿ ವಿಜೇತ್ ಮಡಿವಾಳ ಅವರನ್ನು ಈ ವೇಳೆ ಸನ್ಮಾನಿಸಲಾಯಿತು.





share
ವಾರ್ತಾಭಾರತಿ
ವಾರ್ತಾಭಾರತಿ
Next Story
X