ಶ್ರೀನಿವಾಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ‘ಇಂಜಿನಿಯರ್ಸ್ ಡೇ’

ಮಂಗಳೂರು, ಸೆ.19: ಮಂಗಳೂರಿನ ಮುಕ್ಕದಲ್ಲಿರುವ ಶ್ರೀನಿವಾಸ್ ಯೂನಿವರ್ಸಿಟಿ ಇನ್‌ಸ್ಟಿಟ್ಯೂಟ್ ಆಫ್ ಇಂಜಿನಿಯ ರಿಂಗ್ ಆ್ಯಂಡ್ ಟೆಕ್ನಾಲಜಿಯಲ್ಲಿ ಸಿವಿಲ್ ಇಂಜಿನಿಯರಿಂಗ್ ವಿಭಾಗ ಹಾಗೂ ಸೃಷ್ಟಿಕ ವತಿಯಿಂದ ‘ಇಂಜಿನಿಯರ್ಸ್ ಡೇ’ ಆಯೋಜಿಸಲಾಗಿತ್ತು.
ಸಮಾರಂಭವನ್ನು ಉದ್ಘಾಟಿಸಿದ ಮಂಜೇಶ್ವರ ಟೆಕ್ನೋ ಟ್ರೇಡ್ಸ್ ಸಂಸ್ಥೆಯ ಮುಖ್ಯಸ್ಥ ಅನಿಲ್ ವಾಮನ್ ಬಾಳಿಗಾ ಮಾತ ನಾಡಿ, ಸರ್ ಎಂ. ವಿಶ್ವೇಶ್ವರಯ್ಯ ಅವರು ದೇಶದ ಎಲ್ಲಾ ಇಂಜಿನಿಯರಿಂಗ್ ವೃತ್ತಿಪರರಿಗೆ ಮಾದರಿ ಹಾಗೂ ಆದರ್ಶ ಪ್ರಾಯರಾಗಿದ್ದಾರೆ ಎಂದು ಹೇಳಿದರು .
ಶ್ರೀನಿವಾಸ್ ವಿಶ್ವವಿದ್ಯಾಲಯದ ಇನ್ಕ್ಯುಬೇಷನ್ ಹಾಗೂ ಸ್ಟಾರ್ಟ್ ಅಪ್ ನಿರ್ದೇಶಕ ಡಾ. ನವೀನ್ ಬಪ್ಪಳಿಗೆ ಯವರು ಗೌರವ ಅತಿಥಿಯಾಗಿ ‘ಉತ್ತಮ ಜೀವನಕ್ಕೆ ಹೊಸ ತಂತ್ರಜ್ಞಾನವು ಬಹಳ ಮುಖ್ಯವಾಗಿದೆ, ಆದ್ದರಿಂದ ಯುವಜನತೆಯು ಸರ್ ಎಂ. ವಿಶ್ವೇಶ್ವರಯ್ಯ ಸಾಧನೆಗಳನ್ನು ತಮ್ಮ ವೃತ್ತಿಜೀವನದಲ್ಲಿ ಅಳವಡಿಸಿಕೊಂಡು ಸಮಾಜಕ್ಕೆ ಹಾಗೂ ದೇಶಕ್ಕೆ ಉತ್ತಮ ಕೊಡುಗೆಯನ್ನು ನೀಡುವಂತಾಗಬೇಕು ಎಂದು ಹೇಳಿದರು.
ಸಂಸ್ಥೆಯ ಮುಖ್ಯಸ್ಥ ಡಾ. ಥಾಮಸ್ ಪಿಂಟೋ ರವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ದಿನಂಪ್ರತಿ ಹದಿನೆಂಟು ಗಂಟೆಗೂ ಅಧಿಕ ಸಮಯ ಕರುನಾಡಿಗಾಗಿ ನಿಸ್ವಾರ್ಥ ಸೇವೆಯನ್ನು ಸಲ್ಲಿಸಿದ್ದ ಮಹಾನ್ ಚೇತನ ಸರ್ ಎಂ. ವಿಶ್ವೇಶ್ವರಯ್ಯ. ಅವರು ಎಂದೆಂದಿಗೂ ನಮ್ಮ ಮನದಲ್ಲಿ ಶಾಶ್ವತವಾಗಿ ಇರುತ್ತಾರೆ ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದ ಸಂಚಾಲಕರು ಹಾಗೂ ಸೃಷ್ಟಿಕ ಸಮನ್ವಯಕಾರ ಪ್ರೊ. ಕೆ. ಶ್ರೀನಾಥ್ ರಾವ್ ಸ್ವಾಗತಿಸಿದರು. ಮಾಧುರಿ ಉಪಾಧ್ಯಾಯ ಪ್ರಾರ್ಥಿಸಿದರು. ಪ್ರೊ. ಶಿಲ್ಪಾ.ಎಸ್ ವಂದಿಸಿದರು. ಸಿವಿಲ್ ಇಂಜಿನಿಯರಿಂಗ್ ವಿದ್ಯಾರ್ಥಿನಿ ಐಶ್ವರ್ಯಾ ಬೆಟ್ಟಿನ್ ಕಾರ್ಯಕ್ರಮ ನಿರೂಪಿಸಿದರು. ಕಾಲೇಜಿನ ವಿವಿಧ ವಿಭಾಗಗಳ ಮುಖ್ಯಸ್ಥರು, ಉಪನ್ಯಾಸಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.