Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸ್ವಾತಂತ್ರ್ಯ ಸಮಾನತೆ, ಭ್ರಾತೃತ್ವ...

ಸ್ವಾತಂತ್ರ್ಯ ಸಮಾನತೆ, ಭ್ರಾತೃತ್ವ ಪಾಲನೆ ಎಲ್ಲರಿಂದಾಗಬೇಕು: ಸಿಎಂ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ20 Oct 2025 5:19 PM IST
share
ಸ್ವಾತಂತ್ರ್ಯ ಸಮಾನತೆ,  ಭ್ರಾತೃತ್ವ ಪಾಲನೆ ಎಲ್ಲರಿಂದಾಗಬೇಕು: ಸಿಎಂ ಸಿದ್ದರಾಮಯ್ಯ
ಪುತ್ತೂರಿಗೆ ಮುಖ್ಯಮಂತ್ರಿ ಆಗಮನ

ಮಂಗಳೂರು, ( ದಿ.ಕೆ.ಪಿ.ಸಂಜೀವ ರೈ ವೇದಿಕೆ ಕೊಂಬೆಟ್ಟು ಪುತ್ತೂರು ): ಸಂವಿಧಾನದ ಆಶಯವಾದ ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವದ ಪಾಲನೆ ಎಲ್ಲರಿಂದಾಗಬೇಕು ಎಂದು ಸಿ.ಎಂ. ಸಿದ್ದರಾಮಯ್ಯ ಹೇಳಿದರು.

ಅವರು ಸೋಮವಾರ ಪುತ್ತೂರಿನ ರೈ ಎಸ್ಟೇಟ್ ಎಜುಕೇಶನ್ ಮತ್ತು ಚ್ಯಾರಿಟೇಬಲ್ ಟ್ರಸ್ಟ್ (ರಿ) ಇದರ ವತಿಯಿಂದ ಶಾಸಕ ಅಶೋಕ ರೈ ನೇತೃತ್ವದಲ್ಲಿ ಪುತ್ತೂರಿನ ಕೊಂಬೆಟ್ಟು ಮೈದಾನದಲ್ಲಿ ದೀಪಾವಳಿ ಪ್ರಯುಕ್ತ ಸೋಮವಾರ ಹಮ್ಮಿಕೊಂಡ 13ನೆ ವರ್ಷದ (ವಸ್ತ್ರ ವಿತರಣಾ )ಜನಮನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ, ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ತಪ್ಪು ಮಾಹಿತಿ ನೀಡುವವರ ವಿರುದ್ಧ ಸೂಕ್ತ ಕಾಯಿದೆ ರೂಪಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಮನುಷ್ಯ ತಾನುಗಳಿಸಿದ್ದರಲ್ಲಿ ಸ್ವಲ್ಪ ಭಾಗ ಸಮಾಜದ ಇತರ ಜನರಿಗೆಹಂಚುವುದು ಒಳ್ಳೆಯ ಕೆಲಸ. ಸಮಾನತೆಯ ಸಮಾಜ ನಿರ್ಮಾಣ ವಾಗಬೇಕಾದರೆ ಉಳ್ಳವರು ಇಲ್ಲದವರಿಗೆ ಸಹಾಯ ಮಾಡಬೇಕಾಗಿದೆ. ನಮ್ಮ ಸಂವಿಧಾನದ ಆಶಯ ಇದಾಗಿದೆ. ಬಸವಣ್ಣ ಇದನ್ನೆ ಕಾಯಕ ದಾಸೋಹ ಎಂದು ಹೇಳಿದ್ದಾರೆ. ಉತ್ಪಾದನೆ ಮಾಡಿ ಎಲ್ಲರೂ ಹಂಚಿ ತಿನ್ನಬೇಕಾಗಿದೆ. ಈ ನಿಟ್ಟಿನಲ್ಲಿ ಅಶೋಕ್ ರೈ ಯವರು ಸಮಾಜ ಮುಖಿ ಕೆಲಸ ಮಾಡುತ್ತಿದ್ದಾರೆ. ಇದು ಇತರರಿಗೆ ಮಾದರಿಯಾಗ ಬೇಕಾಗಿದೆ. ಸಮಾಜದ ಅಸಮಾನತೆ ಹೋಗಲಾಡಿಸಬೇಕಾಗಿದೆ. ಸಮಾಜದಲ್ಲಿ ಅಸಮಾನತೆ ಇದ್ದಾಗ ಸ್ವಾತಂತ್ರ್ಯದ ಸೌಧ ಕುಸಿಯುತ್ತದೆ ಎಂದು ಬಾಬಾ ಸಾಹೇಬ್ ಅಂಬೇಡ್ಕರ್ ಹೇಳಿದ ಮಾತು ಗಮನಾರ್ಹ ಎಂದರು.

ಯಾವ ಧರ್ಮವೂ ದ್ವೇಷಿಸಲು ಹೇಳುವುದಿಲ್ಲ. ಎಲ್ಲರನ್ನು ಪ್ರೀತಿಸಿ ಎನ್ನುತ್ತದೆ. ಕುವೆಂಪು ಅಂದಂತೆ ಸಮಾಜ ಸರ್ವ ಜನಾಂಗದ ಶಾಂತಿಯ ತೋಟ ಆಗಬೇಕು ಎಂದರು. ರಾಜ್ಯದ ಜನರು ಇನ್ನೊಂದು ಮನೆಯಲ್ಲಿ ಅನ್ನಕ್ಕಾಗಿ ಕೈ ಒಡ್ಡಬಾರದು. ರಾಜ್ಯ ಹಸಿವು ಮುಕ್ತವಾಗ ಬೇಕೆನ್ನುವುದು ಅನ್ನಭಾಗ್ಯದ ಗ್ಯಾರಂಟಿ ಯೋಜನೆಯ ಗುರಿ ಎಂದರು.

ಗ್ಯಾರಂಟಿ ಯೋಜನೆ ಮಾಡಿದ ಬಳಿಕ ರಾಜ್ಯ ತಲಾ ಆದಾಯದಲ್ಲಿ ದೇಶದಲ್ಲಿ ನಂಬರ್ ಒನ್. ಜಾತಿ, ಧರ್ಮದ ಹೆಸರಿನಲ್ಲಿ ಜಗಳವಾಡುವುದರಲ್ಲಿ ಕರಾವಳಿಯಲ್ಲಿ ದಕ್ಷ ಅಧಿಕಾರಿಗಳನ್ನು ನೇಮಕ ಮಾಡಲಾ ಗಿದೆ. ಅಧಿಕಾರಿಗಳು ಜನ ಪ್ರತಿ ನಿಧಿಗಳು ಪರಸ್ಪರ ಅನ್ಯೋನ್ಯತೆ ಯಿಂದ ಕೆಲಸ ಮಾಡಿದಾಗ ಕ್ಷೇತ್ರದ ಅಭಿವೃದ್ಧಿಯಾ ಗುತ್ತದೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮೆಡಿಕಲ್ ಕಾಲೇಜ್ ಮತ್ತು ಒಂದು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಾಡುವುದು ನಮ್ಮ ಬದ್ಧತೆ. ಇದುವರೆಗೆ 22 ಜಿಲ್ಲೆಗಳಲ್ಲಿ ಮೆಡಿಕಲ್ ಕಾಲೇಜ್ ಆಗಿದೆ. ಪುತ್ತೂರಿನಲ್ಲಿ ಪೂರ್ಣ ಪ್ರಮಾಣದ ಸರಕಾರಿ ಮೆಡಿಕಲ್ ಕಾಲೇಜು ಆಸ್ಪತ್ರೆ ಆಗುತ್ತದೆ ಸಂಶಯ ಬೇಡ ಎಂದರು.

ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಮಾತನಾಡುತ್ತಾ, ಇದೊಂದು ಐತಿಹಾಸಿಕ ಕಾರ್ಯಕ್ರಮ, ಜನರ ನಡುವೆ ಪ್ರೀತಿ ವಿಶ್ವಾಸ ಮೂಡಿಸುವ ಕಾರ್ಯ ಕ್ರಮ ಎಂದರು. ರಾಜಕೀಯದಲ್ಲಿ ಅಧಿಕಾರದ ಅನುಭವಿಸುವುದು ಒಂದೇ ಗುರಿಯಲ್ಲ. ಜನರ ಋಣ ತೀರಿಸುವ ನಿಟ್ಟಿನಲ್ಲಿ ಇಂತಹ ಕಾರ್ಯ ಮಹತ್ವದ್ದಾಗಿದೆ ಎಂದರು.

ಶಾಸಕ ಅಶೋಕ್ ಕುಮಾರ್ ರೈ ಮಾತನಾಡುತ್ತಾ, ಕಳೆದ 12ವರ್ಷಗಳಿಂದ ದೀಪಾವಳಿಯ ಸಂದರ್ಭ ವಸ್ತ್ರದಾನ ಮಾಡುತ್ತಾ ಬರಲಾಗಿದೆ. ಈ ವರ್ಷ ಒಂದು ಲಕ್ಷ ಜನರಿಗೆ ವಸ್ತ್ರದಾನ ಮಾಡಲಾಗುತ್ತಿದೆ ಎಂದರು. ಪುತ್ತೂರಿನ ಪ್ರವಾಸೋದ್ಯಮ ಅಭಿವೃದ್ಧಿಗೆ ಹಾಗೂ ಕ್ಷೇತ್ರದ ಅಭಿವೃದ್ಧಿ ಯಾಗ ಬೇಕು,ಉದ್ಯೋಗ ದೊರೆಯಬೇಕು ಎಂದು ಮುಖ್ಯ ಮಂತ್ರಿಯೊಂದಿಗೆ ಪ್ರಮಾಣಿಕ ಪ್ರಯತ್ನ ಮಾಡುವುದಾಗಿ ಅಶೋಕ್ ರೈ ಭರವಸೆ ನೀಡಿದರು.

ಸಮಾರಂಭದಲ್ಲಿ ವಿಧಾನ ಪರಿಷತ್ ಸದಸ್ಯ ಡಾ.ಮಂಜುನಾಥ ಭಂಡಾರಿ, ಐವನ್ ಡಿ ಸೋಜ, ಮಾಜಿ ಸಚಿವರಾದ ಅಭಯ ಚಂದ್ರ ಜೈನ್, ಬಿ.ರಮಾನಾಥ ರೈ, ವಿನಯಕುಮಾರ್ ಸೊರಕೆ, ಮಾಣಿಲ ಶ್ರೀಮೋಹನ್ ದಾಸ್ ಪರಮಹಂಸ ಸ್ವಾಮೀಜಿ, ಧಾರ್ಮಿಕ ಮುಖಂಡರಾದ ಮಾಯಿದೆ ದೇವೂಸ್ ನ ಧರ್ಮ ಗುರು ವಂ.ಲಾರೆನ್ಸ್ ಮಸ್ಕರೇನಸ್ , ಸುನ್ನಿ ವಿದ್ವಾಂಸ ಎಸ್.ಬಿ.ಧಾರಿಮಿ, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಕಾಂಗ್ರೆಸ್ ಮುಖಂಡರಾದ ಮಿಥುನ್ ರೈ, ಪದ್ಮರಾಜ್ , ಇನಾಯತ್ ಅಲಿ, ಕಣಚೂರು ಮೋನು, ನಿಗಮ ಮಂಡಳಿಯ ಅಧ್ಯಕ್ಷರುಗಳಾದ ಹರೀಶ್ ಕುಮಾರ್ , ಎಂ.ಎ.ಗಫೂರ್, ಸದಾಶಿವ ಉಳ್ಳಾಲ್, ಮಮತಾ ಗಟ್ಟಿ, ಶಾಲೆಟ್ ಪಿಂಟೊ, ಲಾವಣ್ಯ ಬಲ್ಲಾಳ್, ಭರತ್ ಮುಂಡೋಡಿ ಹಾಗೂ ಇತರ ಮುಖಂಡರಾದ ಕೃಷ್ಣ ಪ್ರಸಾದ್ ಆಳ್ವ, ಪದ್ಮನಾಭ ಪೂಜಾರಿ, ಉದಯ ಕುಮಾರ್ ಶೆಟ್ಟಿ, ರಕ್ಷಿತ್ ಶಿವರಾಮ್, ಮುರಳೀಧರ ರೈ, ಯು.ಟಿ. ತೌಸಿಫ್, ಉಮಾನಾಥ ಪೂಜಾರಿ ಡಾ.ರಾಜರಾಮ್, ಮುರಳೀಧರ ರೈ, ಪ್ರವೀಣ್ ಚಂದ್ರ ಆಳ್ವ, ಚಂದ್ರ ಪ್ರಭ ಗೌಡ, ಉಷಾ ಅಂಚನ್, ಸುಮಾ ಅಶೋಕ್ ರೈ, ಸುದೇಶ್ ಶೆಟ್ಟಿ, ಪಂಜಿ ಗುಡ್ಡೆ ಈಶ್ವರ ಭಟ್ ಚಂದ್ರ ಹಾಸ ಶೆಟ್ಟಿ, ಎಂ.ಎಸ್.ಮುಹಮ್ಮದ್, ಸುದರ್ಶನ್ ರೈ ಮೊದಲಾದ ವರು ಉಪಸ್ಥಿತರಿದ್ದರು.

ಶಾಸಕ ಅಶೋಕ್ ಕುಮಾರ್ ರೈ ಸ್ವಾಗತಿಸಿದರು. ಬಡಗನ್ನೂರು ಮುಹಮ್ಮದ್ ಕಾರ್ಯಕ್ರಮ ನಿರೂಪಿಸಿದರು. ನಿಹಾಲ್ ಶೆಟ್ಟಿ ವಂದಿಸಿದರು.

ಸಮಾರಂಭದಲ್ಲಿ ದೀಪಾವಳಿ ಪ್ರಯುಕ್ತ ಪುತ್ತೂರಿನ ರೈ ಎಸ್ಟೇಟ್ ಎಜುಕೇಶನ್ ಮತ್ತು ಚ್ಯಾರಿಟೇಬಲ್ ಟ್ರಸ್ಟ್ (ರಿ) ಇದರ ವತಿಯಿಂದ ಶಾಸಕ ಅಶೋಕ ರೈ ನೇತೃತ್ವದಲ್ಲಿ ಹಮ್ಮಿ ಕೊಂಡ ವಸ್ತ್ರ ಹಾಗೂ ಗೃಹ ಉಪಯೋಗಿ ಸಾಮಗ್ರಿಗಳನ್ನು ವಿತರಿಸಲಾಯಿತು. 20 ಜನ ಸಾಧಕರಿಗೆ ವೇದಿಕೆಯಲ್ಲಿ ಸನ್ಮಾನಿಸಲಾಯಿತು.










share
ವಾರ್ತಾಭಾರತಿ
ವಾರ್ತಾಭಾರತಿ
Next Story
X