Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕೋಡಿ ಬೆಂಗ್ರೆಯಲ್ಲಿ ನಡೆದ ಗಲಾಟೆಯ ಬಗ್ಗೆ...

ಕೋಡಿ ಬೆಂಗ್ರೆಯಲ್ಲಿ ನಡೆದ ಗಲಾಟೆಯ ಬಗ್ಗೆ ವಾಟ್ಸಪ್ ನಲ್ಲಿ ಸುಳ್ಳು ಸುದ್ದಿ: ಪೊಲೀಸ್ ಆಯುಕ್ತರ ಸ್ಪಷ್ಟನೆ

ವಾರ್ತಾಭಾರತಿವಾರ್ತಾಭಾರತಿ13 Jan 2025 11:26 AM IST
share
ಕೋಡಿ ಬೆಂಗ್ರೆಯಲ್ಲಿ ನಡೆದ ಗಲಾಟೆಯ ಬಗ್ಗೆ ವಾಟ್ಸಪ್ ನಲ್ಲಿ ಸುಳ್ಳು ಸುದ್ದಿ: ಪೊಲೀಸ್ ಆಯುಕ್ತರ ಸ್ಪಷ್ಟನೆ

ಮಂಗಳೂರು: ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ಗಣೇಶ ಕಟ್ಟೆ, ತಣ್ಣೀರುಬಾವಿ ಎಂಬಲ್ಲಿ ರವಿವಾರ ರಾತ್ರಿ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ವಾಟ್ಸಪ್ ನಲ್ಲಿ‌ ಸುಳ್ಳು ಸುದ್ದಿ ಹರಡಲಾಗುತ್ತಿದೆ ಎಂದು ಅಭಿಪ್ರಾಯಪಟ್ಟಿರುವ ಮಂಗಳೂರು ಪೊಲೀಸ್ ಆಯುಕ್ತರು ಘಟನೆಯ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

ಘಟನೆಯ ವಿವರ : ರವಿವಾರ ರಾತ್ರಿ‌ 11:45 ಗಂಟೆಗೆ ಯುವಕರಾದ ವೆಂಕಟೇಶ, ಕಾರ್ತಿಕ್, ಸಂತೋಷ್, ಸೈಫ್, ಧನುಷ್, ಪ್ರಜ್ವಲ್ ಎಂಬವರು ಮದ್ಯಪಾನ ಮಾಡಿಕೊಂಡು ಸಿಗರೇಟ್ ಸೇದುತ್ತಿರುವ ಸಂಧರ್ಭ ಪ್ರೀತಂ ಮತ್ತು ಸನ್ವೀತ್ ಹಾಗೂ ಇತರರು ಸ್ಥಳಕ್ಕೆ ಬಂದು ಸಿಗರ್ ಲೈಟರ್ ಕೇಳಿದ್ದು, ಪ್ರಜ್ವಲ್ ಸಿಗರ್ ಲೈಟರನ್ನು ಪ್ರೀತಂ ಹಾಗೂ ಇತರರಿಗೆ ನೀಡಿದ್ದಾರೆ. ಸಿಗರ್ ಲೈಟರ್ ವಾಪಾಸು ಕೇಳಿದಾಗ 'ನೀವು ಯಾಕೆ ಧಮ್ಕಿ ಹಾಕುತ್ತೀರಿ ' ಎಂದು ಹೇಳಿ ಸನ್ವೀತ್ ತಂಡದವರಲ್ಲೊಬ್ಬ ಕಾರ್ತಿಕ್ ತಲೆಗೆ ಬಿಯರ್ ಬಾಟಲಿಯಿಂದ ಹೊಡೆದಿದ್ದು, ಇತರರು ಮರದ ಕೋಲುಗಳಿಂದ ಪ್ರಜ್ವಲ್ ಕಾರ್ತಿಕ್, ಸಂತೋಷ್, ಸೈಫ್, ಧನುಷ್, ಎಂಬವರಿಗೆ ಹಲ್ಲೆ ನಡೆಸಿದಾಗ , ಅವರೊಳಗೆ ಪರಸ್ಪರ ಗಲಾಟೆ ನಡೆದಿರುತ್ತದೆ. ಈ ಘಟನೆಯ ಪರಸ್ಪರ ಹಲ್ಲೆ ಕುರಿತು ಪಣಂಬೂರು ಠಾಣೆಯಲ್ಲಿ 2 ಪ್ರತ್ಯೇಕ ಪ್ರಕರಣಗಳು ದಾಖಲಾಗಿರುತ್ತವೆ. ಎಂದು ಆಯುಕ್ತರು ಮಾಹಿತಿ ನೀಡಿದ್ದಾರೆ.

ಈ ಸಂಬಂಧ ಪ್ರೀತಂ ಎಂಬವರು ನೀಡಿದ ದೂರಿನಂತೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ಅ.ಕ್ರ. 03/2025 ಕಲಂ: 118(1), 126(2), 189(2), 189(4), 190, 191(2), 191(3),352) ಬಿ. ಎನ್.ಎಸ್ ನಂತೆ ಪ್ರಕರಣ ದಾಖಲಾಗಿದೆ. ಈ ಪ್ರಕರಣದಲ್ಲಿ ವೆಂಕಟೇಶ್, ಕಾರ್ತಿಕ್, ಸಂತೋಷ್, ಸೈಫ್, ಧನುಷ್, ಪ್ರಜ್ವಲ್ ಎಂಬವರು ಆರೋಪಿಗಳಾಗಿದ್ದು , ಇವರಲ್ಲಿ ಕಾರ್ತಿಕ್, ಸಂತೋಷ್, ಧನುಷ್, ಪ್ರಜ್ವಲ್ ಎಂಬವರನ್ನು ದಸ್ತಗಿರಿ ಮಾಡಲಾಗಿದೆ.

ಪ್ರಜ್ವಲ್ ಎಂಬಾತನು ನೀಡಿದ ದೂರಿನಂತೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ಅ.ಕ್ರ. 04/2025 ಕಲಂ: 189(2), 189(4) , 191(2), 191(3), 118(1), 190 ಬಿ. ಎನ್.ಎಸ್ ನಂತೆ ದಾಖಲಾಗಿದ್ದು ಈ ಪ್ರಕರಣದಲ್ಲಿ ಪ್ರೀತಂಮತ್ತು ಸನ್ವೀತ್ ಹಾಗೂ ಇತರರು ಆರೋಪಿಗಳಾಗಿರುತ್ತಾರೆ.

ಈ ಘಟನೆಗೆ ಸಂಬಂಧಿಸಿದಂತೆ ವಾಟ್ಸಪ್ ನಲ್ಲಿ ಬೆಂಗ್ರೆ ಪರಿಸರದಲ್ಲಿ “ಹಿಂದೂಗಳ ಮನೆಯನ್ನು ಗುರಿಯಾಗಿಸಿಕೊಂಡು ತಲವಾರು ಸಹಿತ ನುಗ್ಗಿದ ಮುಸ್ಲಿಮ್ ಯುವಕರು" "ಸುಮಾರು ಹತ್ತು ಮಂದಿಯಿದ್ದ ಮುಸ್ಲಿಮ್ ಯುವಕರ ತಂಡದಿಂದ ಪರಿಶಿಷ್ಟ ಸಮುದಾಯದ ಯುವಕನ ಮೇಲೆ ದಾಳಿ ನಡೆಸಿ ಪರಾರಿಯಾಗುವ ಸಂದರ್ಭದಲ್ಲಿ ಒಬ್ಬನನ್ನು ಸೆರೆ ಹಿಡಿದ ಹಿಂದೂಗಳು" "ಸ್ಥಳದಲ್ಲಿ ಭಾರಿ ಸಂಖ್ಯೆಯಲ್ಲಿ ಸೇರಿರುವ ಹಿಂದೂಗಳು, ಉಳಿದ ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಹಾಗೂ ಸ್ಥಳಕ್ಕೆ ಮಂಗಳೂರು ಪೊಲೀಸ್ ಕಮಿಷನರ್ ಆಗಮಿಸುವಂತೆ ಬಿಗಿಪಟ್ಟು ಹಿಡಿದ ಹಿಂದೂ ಸಮುದಾಯ” ಎಂಬುದಾಗಿ ಸುದ್ದಿಯನ್ನು ಹರಿಬಿಡಲಾಗಿರುತ್ತದೆ.

ಈ ಘಟನೆಗೆ ಸಂಬಂಧಿಸಿದಂತೆ ಡಿ.ಸಿ.ಪಿಯವರಾದ ಸಿದ್ದಾರ್ಥ್ ಗೋಯಲ್ (ಕಾ&ಸು) ಮಂಗಳೂರು ನಗರ ಹಾಗೂ ಎ.ಸಿ.ಪಿ, ಸಿ.ಸಿ.ಬಿ, ಎ.ಸಿ.ಪಿ ಉತ್ತರ ಉಪ ವಿಭಾಗ, ಪೊಲೀಸ್ ನಿರೀಕ್ಷಕರು ಪಣಂಬೂರು ರವರು ಕೂಡಲೇ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಮೇಲಿನ ವಾಟ್ಸಪ್ ನಲ್ಲಿ ಬಂದ ವಿಚಾರವು ಸುಳ್ಳು ಸುದ್ದಿಯಾಗಿರುತ್ತದೆ ಎಂದು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಪ್ರಕಟನೆಯಲ್ಲಿ‌ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X