Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಫೆ.7-8: ಐಕಳ ಬಾವ ಕಾಂತಾಬಾರೆ-ಬೂದಾಬಾರೆ...

ಫೆ.7-8: ಐಕಳ ಬಾವ ಕಾಂತಾಬಾರೆ-ಬೂದಾಬಾರೆ ಕಂಬಳದ ಸುವರ್ಣ ಸಂಭ್ರಮ

ವಾರ್ತಾಭಾರತಿವಾರ್ತಾಭಾರತಿ2 Feb 2026 9:48 PM IST
share
ಫೆ.7-8: ಐಕಳ ಬಾವ ಕಾಂತಾಬಾರೆ-ಬೂದಾಬಾರೆ ಕಂಬಳದ ಸುವರ್ಣ ಸಂಭ್ರಮ
"ಕಂಬಳದಲ್ಲಿ ಜೂಜು ನಿಯಂತ್ರಣ ಹಾಗೂ ಸಮಯಪಾಲನೆಗೆ ಆದ್ಯತೆ"

ಮಂಗಳೂರು, ಫೆ.2: ಸುವರ್ಣ ಮಹೋತ್ಸವ ಸಂಭ್ರಮದಲ್ಲಿರುವ ಐಕಳ ಬಾವ ಕಾಂತಾಬಾರೆ-ಬೂದಾಬಾರೆ ಕಂಬಳವು ಫೆ.7 ಮತ್ತು 8ರಂದು ನಡೆಯಲಿದ್ದು, ಇದರ ಸಿದ್ಧತೆಗಳು ಬಹುತೇಕ ಪೂರ್ಣಗೊಂಡಿದೆ. ಐಕಳ ಕಂಬಳದಲ್ಲಿ ಜೂಜು ನಿಯಂತ್ರಣ ಹಾಗೂ ಸಮಯಪಾಲನೆಗೆ ಆದ್ಯತೆ ನೀಡಲಾಗುವುದು ಎಂದು ಕಂಬಳ ಅಸೋಸಿಯೇಶನ್ ಮತ್ತು ಐಕಳ ಕಂಬಳ ಸಮಿತಿ ಅಧ್ಯಕ್ಷ ಬೆಳಪು ದೇವಿಪ್ರಸಾದ್ ಶೆಟ್ಟಿ ಹೇಳಿದರು.

ನಗರದ ಖಾಸಗಿ ಹೊಟೇಲ್‌ನಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕಂಬಳದಲ್ಲಿ ಜೂಜು ಸಕ್ರಿಯವಾಗಿರುವ ಬಗ್ಗೆ ಈಗಾಗಲೇ ದೂರುಗಳು ಬಂದಿದೆ. ಐಕಳ ಕಂಬಳದಲ್ಲಿ ಅದನ್ನು ಸಂಪೂರ್ಣ ನಿಯಂತ್ರಣ ತರಲಾಗುವುದು. ಅಲ್ಲದೆ ಕಂಬಳದಲ್ಲಿ ಕೋಣ ಬಿಡುವ ವಿಚಾರಕ್ಕೆ ಸಮಯ ನಿಗದಿಮಾಡಲಾಗಿದೆ. ನಿಗದಿತ ಅವಧಿಗೆ ಕೋಣ ಗಂತಿಗೆ ಬಾರದಿದ್ದರೆ ಸೂಕ್ತ ಕ್ರಮಕೈಗೊಳ್ಳಲಾಗುವುದು. ಈ ಮೂಲಕ ಕಂಬಳದಲ್ಲಿ ಸಮಯಪಾಲನೆಗೆ ಆದ್ಯತೆ ನೀಡಲಾಗುವುದು ಎಂದರು.

ಫೆ.3ರಿಂದ 8ರವರೆಗೆ ನಿರಂತರ ಕಂಬಳೋತ್ಸವ, ಧಾರ್ಮಿಕ ಕಾರ್ಯಕ್ರಮ, ಅನ್ನಸಂತರ್ಪಣೆ ನಡೆಯಲಿದೆ. 6ರಂದು ಕಟೀಲು ಶ್ರೀ ದುರ್ಗಾಪರಮೇಶ್ವರಿ ಮೇಳದ ಯಕ್ಷಗಾನ ನಡೆಯಲಿದೆ. ಫೆ.7ರಂದು ಬೆಳಗ್ಗೆ 8ಕ್ಕೆ ಕರೆಮುಹೂರ್ತ ನಡೆಯಲಿದ್ದು, ಕೋಣಗಳು ಕರೆಗೆ ಇಳಿಯಲಿದೆ. ಬೆಳಗ್ಗೆ 9:30ಕ್ಕೆ ವಾಸ್ತುತಜ್ಞ ಚಂದ್ರಶೇಖರ ಸ್ವಾಮೀಜಿ ಕಂಬಳಕ್ಕೆ ಚಾಲನೆ ನೀಡಲಿದ್ದಾರೆ. ಸಹಕಾರ ರತ್ನ ಡಾ. ಎಂ.ಎನ್. ರಾಜೇಂದ್ರ ಕುಮಾರ್‌ರಿಗೆ ಕಂಬಳ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದರು.

ಕಂಬಳದಲ್ಲಿ ಎಲ್ಲ ಕೋಣಗಳ ಯಜಮಾನರನ್ನು ವಿಶೇಷವಾಗಿ ಗೌರವಿಸಲಾಗುವುದು. ವಿಜೇತ ಕೋಣಗಳಿಗೆ ಚಿನ್ನದೊಂದಿಗೆ ನಗದು ಬಹುಮಾನ ನೀಡಲಾಗುವುದು. ಸೆಮಿಫೈನಲ್‌ಗೆ ಬಂದಿರುವ ಎಲ್ಲ ಕೋಣಗಳಿಗೆ ವಿಶೇಷ ಬಹುಮಾನವಿದೆ. ಕನಹಲಗೆ ವಿಭಾಗದಲ್ಲಿ ಭಾಗವಹಿಸುವ ವಿಜೇತ ಕೋಣಗಳಿಗೆ ಚಿನ್ನದೊಂದಿಗೆ ಎಲ್ಲಾ ಕೋಣದ ಯಜಮಾನರಿಗೂ ವಿಶೇಷ ಬಹುಮಾನ, ನಗದು ಪುರಸ್ಕಾರವಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಐಕಳ ಬಾವ ಕಂಬಳದ ಕಾರ್ಯಾಧ್ಯಕ್ಷ ಚಿತ್ತರಂಜನ್ ಭಂಡಾರಿ, ಮುಂಬೈ ಸಮಿತಿ ಅಧ್ಯಕ್ಷ ಕುಶಾಲ್ ಭಂಡಾರಿ, ಐಕಳ ಬಾವ ಕಂಬಳದ ಪ್ರಧಾನ ಕಾರ್ಯದರ್ಶಿ ಸ್ವರಾಜ್ ಶೆಟ್ಟಿ ದೊಡ್ಡಮನೆ, ಕೋಶಾಧಿಕಾರಿ ಪ್ರಕಾಶ್ ಶೆಟ್ಟಿ, ತಿಲಕ್‌ರಾಜ್ ಬಲ್ಲಾಳ್, ಪ್ರದೀಪ್ ಕುಮಾರ್ ಐಕಳಬಾವ ಉಪಸ್ಥಿತರಿದ್ದರು.

Tags

GoldencelebrationKantabareBudabareKambala
share
ವಾರ್ತಾಭಾರತಿ
ವಾರ್ತಾಭಾರತಿ
Next Story
X