Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಜ.18ರಂದು ಮಂಗಳೂರಿನಲ್ಲಿ ಪ್ರಥಮ ಜಾಗತಿಕ...

ಜ.18ರಂದು ಮಂಗಳೂರಿನಲ್ಲಿ ಪ್ರಥಮ ಜಾಗತಿಕ ಬಿಲ್ಲವರ ಕ್ರೀಡೋತ್ಸವ

ವಾರ್ತಾಭಾರತಿವಾರ್ತಾಭಾರತಿ15 Jan 2026 4:01 PM IST
share
ಜ.18ರಂದು ಮಂಗಳೂರಿನಲ್ಲಿ ಪ್ರಥಮ ಜಾಗತಿಕ ಬಿಲ್ಲವರ ಕ್ರೀಡೋತ್ಸವ
ವಿಶೇಷ ಆಕರ್ಷಣೆಯಾಗಿ ನಟ ಶಿವರಾಜ್ ಕುಮಾರ್ ಸಹಿತ ಸಿನಿತಾರೆಯರು ಭಾಗಿ

ಮಂಗಳೂರು, ಜ.15: ಅಖಿಲ ಭಾರತೀಯ ಬಿಲ್ಲವರ ಯೂನಿಯನ್ ಆಶ್ರಯದಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ ಕ್ರೀಡೋತ್ಸವವು ಜ.18ರಂದು ಬೆಳಗ್ಗೆ 9ರಿಂದ ನಗರದ ನೆಹರೂ ಮೈದಾನದಲ್ಲಿ ಜರುಗಲಿದೆ. ಕ್ರೀಡೋತ್ಸವದಲ್ಲಿ ಖ್ಯಾತ ಚಲನಚಿತ್ರ ನಟ ಡಾ.ಶಿವರಾಜ್ಕುಮಾರ್ ಸೇರಿದಂತೆ ಚಿತ್ರರಂಗದ ಗಣ್ಯ ತಾರೆಯರು ಹಾಗೂ ವಿವಿಧ ಕ್ಷೇತ್ರಗಳ ಪ್ರಮುಖರು ಭಾಗವಹಿಸಲಿದ್ದಾರೆ ಎಂದು ಅಖಿಲ ಭಾರತೀಯ ಬಿಲ್ಲವರ ಯೂನಿಯನ್ ಅಧ್ಯಕ್ಷ ನವೀನ್ ಚಂದ್ರ ಸುವರ್ಣ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿಂದು ಈ ಬಗ್ಗೆ ಮಾಹಿತಿ ನೀಡಿದ ಅವರು, ಅಂದು ಬೆಳಗ್ಗೆ 7:30ಕ್ಕೆ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಿಂದ ನೆಹರೂ ಮೈದಾನದವರೆಗೆ ಕ್ರೀಡಾ ಜ್ಯೋತಿ ಮೆರವಣಿಗೆ ನಡೆಯಲಿದೆ. 9 ಗಂಟೆಗೆ ಉದ್ಘಾಟನೆ ಸಮಾರಂಭ ಜರುಗಲಿದ್ದು, ಸಂಜೆ 6 ಗಂಟೆಗೆ ಸಮಾರೋಪ ಸಮಾರಂಭ ಆಯೋಜಿಸಲಾಗಿದೆ ಎಂದು ಹೇಳಿದರು.

*ಸಿನೆಮಾ ತಾರಾಬಳಗದ ವಿಶೇಷ ಆಕರ್ಷಣೆ:

ಡಾ.ಶಿವರಾಜ್ಕುಮಾರ್, ವಿಜಯ ರಾಘವೇಂದ್ರ, ಧನ್ಯಾ ರಾಮ್ ಕುಮಾರ್, ಯುವ ರಾಜ್ ಕುಮಾರ್, ಪೃಥ್ವಿ ಅಂಬರ್ ಹಾಗೂ ಅನುಶ್ರೀ ಶೆಟ್ಟಿ ಸೇರಿದಂತೆ ಕಾರ್ಯಕ್ರಮದಲ್ಲಿ ತಾರಾಬಳಗದ ಉಪಸ್ಥಿತಿ ವಿಶೇಷ ಆಕರ್ಷಣೆಯಾಗಿದೆ. ಸಂಜೆ 5.30ಕ್ಕೆ ಪ್ರಕಾಶ್ ಮಹಾದೇವನ್ ಹಾಗೂ ತಂಡದಿಂದ ಸಂಗೀತ ರಸಮಂಜರಿ ನಡೆಯಲಿದೆ ಎಂದು ನವೀನ್ ಚಂದ್ರ ಸುವರ್ಣ ಮಾಹಿತಿ ನೀಡಿದರು.

ಯುವ ಸಮುದಾಯವನ್ನು ಸಂಘಟಿಸುವ ಉದ್ದೇಶದೊಂದಿಗೆ ಈ ಜಾಗತಿಕ ಕ್ರೀಡೋತ್ಸವವನ್ನು ಆಯೋಜಿಸಲಾಗಿದ್ದು, ಬೆಳಗ್ಗೆ 8ಕ್ಕೆ ವಿಶ್ವಕಪ್ ಮಹಿಳಾ ಕಬಡ್ಡಿಯಲ್ಲಿ ಚಿನ್ನದ ಪದಕ ಗೆದ್ದ ಭಾರತೀಯ ತಂಡದ ಆಟಗಾರ್ತಿ ಧನಲಕ್ಷ್ಮೀ ಪೂಜಾರಿ ನೇತೃತ್ವದಲ್ಲಿ ಕ್ರೀಡಾ ಜ್ಯೋತಿ ಮೆರವಣಿಗೆ ಕುದ್ರೋಳಿಯಿಂದ ನಾರಾಯಣ ಗುರು ವೃತ್ತ, ಲಾಲ್ಭಾಗ್, ಕೆ.ಎಸ್. ರಾವ್ ರಸ್ತೆ ಮೂಲಕ ನೆಹರೂ ಮೈದಾನ ತಲುಪಲಿದೆ ಎಂದು ಅವರು ತಿಳಿಸಿದರು.

ಬೆಳಗ್ಗೆ 9ಕ್ಕೆ ದಾಮೋದರ ಆರ್. ಸುವರ್ಣ ವೇದಿಕೆಯಲ್ಲಿ ಸಾಗರ್ ಗ್ರೂಪ್ ಆಫ್ ಹೋಟೆಲ್ಸ್ನ ಛೇರ್ಮ್ಯಾನ್ ಜಯರಾಮ್ ಬನಾನ್ ಹಾಗೂ ಪೂಜಾರಿ ಫಿಶ್ ಲ್ಯಾಂಡ್ನ ಮಾಲಕ ಎಲ್. ಸುಧಾಕರ ಪೂಜಾರಿ ಉದ್ಘಾಟನೆ ನೆರವೇರಿಸಲಿದ್ದಾರೆ. ಬಳಿಕ ಮಹಿಳೆಯರಿಗೆ ತ್ರೋಬಾಲ್ ಹಾಗೂ ಹಗ್ಗಜಗ್ಗಾಟ, ಪುರುಷರಿಗೆ ವಾಲಿಬಾಲ್ ಹಾಗೂ ಹಗ್ಗಜಗ್ಗಾಟ ಸೇರಿದಂತೆ ಮಕ್ಕಳಿಗೂ ಮಹಿಳೆಯರಿಗೂ ವಿವಿಧ ಕ್ರೀಡಾವಳಿಗಳು ನಡೆಯಲಿವೆ ಎಂದು ನವೀನ್ ಚಂದ್ರ ಸುವರ್ಣ ವಿವರಿಸಿದರು.

ಸಮಾರೋಪ ಸಮಾರಂಭದಲ್ಲಿ ವಿಜೇತ ತಂಡಗಳಿಗೆ ಬಹುಮಾನ ವಿತರಣೆ ನಡೆಯಲಿದ್ದು, ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್, ಕೇಂದ್ರ ಸಚಿವ ಶ್ರೀಪಾದ್ ನಾಯಕ್, ವಿಧಾನಸಭಾ ಸ್ಪೀಕರ್ ಯು.ಟಿ.ಖಾದರ್, ಸಚಿವ ಮಧು ಬಂಗಾರಪ್ಪ, ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ, ಕ್ಯಾ. ಬ್ರಿಜೇಶ್ ಚೌಟ ಸೇರಿದಂತೆ ಶಾಸಕರು ಹಾಗೂ ಚಿತ್ರರಂಗ–ಕ್ರೀಡಾ ಕ್ಷೇತ್ರದ ಗಣ್ಯರು ಭಾಗವಹಿಸಲಿದ್ದಾರೆ. ಕ್ರೀಡೋತ್ಸವವನ್ನು ಯಶಸ್ವಿಗೊಳಿಸಲು ಸಮಾಜದ ಸರ್ವ ಬಂಧು–ಮಿತ್ರರು ಸಹಕರಿಸಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ನವೀನ್ ಚಂದ್ರ ಸುವರ್ಣ ಮನವಿ ಮಾಡಿದ್ದಾರೆ.

1912ರಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಮಾರ್ಗದರ್ಶನದಲ್ಲಿ ಕುದ್ರೋಳಿಯಲ್ಲಿ ಸ್ಥಾಪಿತವಾದ ಅಖಿಲ ಭಾರತೀಯ ಬಿಲ್ಲವರ ಯೂನಿಯನ್ ಸಮಾಜವನ್ನು ಶೈಕ್ಷಣಿಕ, ಸಾಮಾಜಿಕ ಹಾಗೂ ಸಂಘಟಿತವಾಗಿ ಬಲಿಷ್ಠಗೊಳಿಸುವ ನಿಟ್ಟಿನಲ್ಲಿ ನಿರಂತರವಾಗಿ ಕಾರ್ಯನಿರ್ವಹಿಸುತ್ತಿದ್ದು, ಮುಲ್ಕಿಯಲ್ಲಿ ನಡೆದ ಪ್ರಥಮ ಬಿಲ್ಲವ ಸಮ್ಮೇಳನ, ನಾರಾಯಣ ಗುರು ವಿದ್ಯಾಸಂಸ್ಥೆಗಳು, ಮಹಿಳಾ ಸಮ್ಮೇಳನ ಹಾಗೂ ಬಿಲ್ಲವ ಮಹಿಳಾ ಹಾಸ್ಟೆಲ್ಗಳು ಸಂಘಟನೆಯ ಪ್ರಮುಖ ಸಾಧನೆಗಳಾಗಿವೆ ಎಂದು ಅವರು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಯೂನಿಯನ್ ಸಂಚಾಲಕ ಸದಾನಂದ ಪೂಜಾರಿ, ಖಜಾಂಚಿ ಜಯಪ್ರಕಾಶ್, ಮಹಿಳಾ ವಿಭಾಗದ ಅಧ್ಯಕ್ಷೆ ಸುಮಲತಾ ಎನ್. ಸುವರ್ಣ, ಪ್ರಧಾನ ಕಾರ್ಯದರ್ಶಿ ಜೀವನ್ ಕುಮಾರ್ ಉಪಸ್ಥಿತರಿದ್ದರು.

Tags

Billawa
share
ವಾರ್ತಾಭಾರತಿ
ವಾರ್ತಾಭಾರತಿ
Next Story
X