ಮೀನುಗಾರರು ಮುನ್ನೆಚ್ಚರಿಕೆ ವಹಿಸಲು ಸೂಚನೆ

ಮಂಗಳೂರು: ಹವಾಮಾನ ಮುನ್ಸೂಚನೆಯಂತೆ ಜನವರಿ 27 ರಿಂದ 31 ರವರೆಗೆ ಅರಬ್ಬೀ ಸಮುದ್ರದಲ್ಲಿ ಭಾರೀ ಗಾಳಿ ಬೀಸುವುದರಿಂದ ಸಮುದ್ರವು ಪ್ರಕ್ಷುಬ್ದವಾಗಿರುತ್ತದೆ. ಆದ್ದರಿಂದ ಅನಾಹುತವನ್ನು ತಡೆಯುವ ಸಲುವಾಗಿ ನಾಡದೋಣಿ ಮೀನುಗಾರರು ಸೇರಿದಂತೆ ಎಲ್ಲಾ ಮೀನುಗಾರರು ಜಾಗರೂಕತೆ ವಹಿಸುವಂತೆ ಮೀನುಗಾರಿಕೆ ಜಂಟಿ ನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story





