Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬ್ಯಾರಿ ಭವನಕ್ಕೆ ಶೀಘ್ರ ಶಂಕುಸ್ಥಾಪನೆ:...

ಬ್ಯಾರಿ ಭವನಕ್ಕೆ ಶೀಘ್ರ ಶಂಕುಸ್ಥಾಪನೆ: ಯು.ಟಿ.ಖಾದರ್

ಬ್ಯಾರಿ ಅಕಾಡಮಿಯ ಗೌರವ ಪ್ರಶಸ್ತಿ ಪ್ರದಾನ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ6 Sept 2024 8:19 PM IST
share
ಬ್ಯಾರಿ ಭವನಕ್ಕೆ ಶೀಘ್ರ ಶಂಕುಸ್ಥಾಪನೆ: ಯು.ಟಿ.ಖಾದರ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬ್ಯಾರಿ ಭವನ ನಿರ್ಮಿಸಬೇಕು ಎಂಬ ಬೇಡಿಕೆಯು ಬ್ಯಾರಿ ಸಾಹಿತ್ಯ ಅಕಾಡಮಿಯು ಸ್ಥಾಪನೆಗೊಂಡಾಗಲೇ ಇತ್ತು. ಅದಕ್ಕಾಗಿ ಈ ಹಿಂದೆ ಒಂದೆರೆಡು ಸ್ಥಳಗಳನ್ನೂ ಗುರುತಿಸಲಾಗಿತ್ತು. ಕಾರಣಾಂತರದಿಂದ ಅದನ್ನು ಕೈ ಬಿಡಲಾಗಿದೆ. ಇದೀಗ ಮಂಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನಾಟೆಕಲ್-ಅಸೈಗೋಳಿ ಮಧ್ಯದ ಪ್ರಮುಖ ರಸ್ತೆಯ ಪಕ್ಕದಲ್ಲೇ ಬ್ಯಾರಿ ಭವನ ನಿರ್ಮಾಣಕ್ಕೆ ಜಮೀನು ಗುರುತಿಸಲಾಗಿದ್ದು, 6 ಕೋ.ರೂ. ಅನುದಾನವೂ ಬಿಡುಗಡೆಗೊಂಡಿದೆ. ಹಾಗಾಗಿ ಬ್ಯಾರಿ ಭವನ ನಿರ್ಮಾಣಕ್ಕೆ ಶೀಘ್ರ ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದು ರಾಜ್ಯ ವಿಧಾನಸಭೆಯ ಸ್ಪೀಕರ್ ಯು.ಟಿ. ಖಾದರ್ ಹೇಳಿದರು.

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯ ವತಿಯಿಂದ ನಗರದ ಪುರಭವನದ ಮರ್ಹೂಂ ಎಂ.ಜಿ.ರಹೀಂ ವೇದಿಕೆಯಲ್ಲಿ ಶುಕ್ರವಾರ ನಡೆದ 2022 ಮತ್ತು 2023ನೇ ಸಾಲಿನ ಗೌರವ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ತಾನು ನೀಡಿದ ಸಂದೇಶ ದಲ್ಲಿ ಅವರು ತಿಳಿಸಿದರು. ಕಾರಣಾಂತರದಿಂದ ಪಾಲ್ಗೊಳ್ಳಲಾಗದ ಅವರು ಕಳುಹಿಸಿಕೊಟ್ಟ ಸಂದೇಶವನ್ನು ಕಾರ್ಯಕ್ರಮದಲ್ಲಿ ವಾಚಿಸಲಾಯಿತು.

ಮಂಗಳೂರು ಆಕಾಶವಾಣಿಯಲ್ಲಿ ಬ್ಯಾರಿ ಭಾಷೆಯ ಕಾರ್ಯಕ್ರಮ ಪ್ರಸಾರವಾಗಬೇಕು, ಶಾಲಾ ಪಠ್ಯಪುಸ್ತಕದಲ್ಲಿ ಬ್ಯಾರಿ ಭಾಷೆಯನ್ನು ಅಳವಡಿಸಬೇಕು, ಶಾಲೆಗಳಲ್ಲಿ ನಡೆಯುವ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಬ್ಯಾರಿ ಭಾಷೆಗೆ ಅವಕಾಶ ನೀಡ ಬೇಕು ಎಂಬ ಬೇಡಿಕಯೂ ಇದೆ. ಅಕಾಡಮಿಯು ಈ ನಿಟ್ಟಿನಲ್ಲಿ ಪ್ರಯತ್ನ ಸಾಗಿಸಿದರೆ ತಾನು ಎಲ್ಲಾ ರೀತಿಯಲ್ಲೂ ಸಹಕರಿಸಲು ಬದ್ಧನಿದ್ದೇನೆ ಎಂದು ಯು.ಟಿ. ಖಾದರ್ ಭರವಸೆ ನೀಡಿದರು.

2022ನೇ ಸಾಲಿನ ಗೌರವ ಪ್ರಶಸ್ತಿಯನ್ನು ಹಂಝತುಲ್ಲಾ ವೈ. ಕುವೇಂಡ ಬೆಂಗಳೂರು, ಮರಿಯಮ್ ಇಸ್ಮಾಈಲ್ ಉಳ್ಳಾಲ, ಎಂ.ಜಿ. ಶಾಹುಲ್ ಹಮೀದ್ ಗುರುಪುರ ಹಾಗೂ 2023ನೇ ಸಾಲಿನ ಗೌರವ ಪ್ರಶಸ್ತಿಯನ್ನು ಹಾಜಿ ಟಿ.ಎ. ಆಲಿಯಬ್ಬ ಜೋಕಟ್ಟೆ, ಮುಹಮ್ಮದ್ ಶರೀಫ್ ನಿರ್ಮುಂಜೆ, ಅಶ್ರಫ್ ಅಪೋಲೊ ಕಲ್ಲಡ್ಕ ಅವರಿಗೆ ಪದ್ಮಶ್ರೀ ಹರೇಕಳ ಹಾಜಬ್ಬ ಗೌರವ ಪ್ರಶಸ್ತಿ ಪ್ರದಾನ ಮಾಡಿದರು.

ಮಂಗಳೂರು ವಿಶ್ವವಿದ್ಯಾನಿಲಯ ಬ್ಯಾರಿ ಅಧ್ಯಯನ ಪೀಠದ ಸಂಯೋಜಕ ಡಾ. ಅಬೂಬಕ್ಕರ್ ಸಿದ್ದೀಕ್ ಬೆಲ್ಕಿರಿ ದ್ವೈಮಾಸಿಕ ಸಂಚಿಕೆಯನ್ನು ಬಿಡುಗಡೆ ಮಾಡಿದರು. ಉಪನ್ಯಾಸಕ ಅಬ್ದುಲ್ ರಝಾಕ್ ಅನಂತಾಡಿ ಅಭಿನಂದನಾ ಭಾಷಣ ಮಾಡಿದರು.

*ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಬ್ಯಾರಿ ಅಕಾಡಮಿಯ ಅಧ್ಯಕ್ಷ ಉಮರ್ ಯು.ಹೆಚ್. ಬ್ಯಾರಿ ಅಕಾಡಮಿಯು ಬ್ಯಾರಿ ಅಧ್ಯಯನ ಪೀಠದ ಸಹಕಾರದೊಂದಿಗೆ ಸಂಶೋಧನೆಗೆ ಹೆಚ್ಚಿನ ಆದ್ಯತೆ ನೀಡಲು ಮುಂದಾಗಿವೆ. ಬ್ಯಾರಿ ಕ್ಷೇತ್ರ ಕಾರ್ಯಕ್ಕೆ ಸಂಬಂಧಿಸಿದಂತೆ ಪಿಎಚ್‌ಡಿ ಮಾಡುವವರಿಗೆ ಫೆಲೋಶಿಪ್ ನೀಡಲಾಗುವುದು. ಬ್ಯಾರಿ ಭಾಷಾ ಸಂಶೋಧನೆ, ಅಧ್ಯಯನ, ದಾಖಲೀಕರಣ, ಬ್ಯಾರಿ ಭವನದಲ್ಲಿ ವಸ್ತು ಸಂಗ್ರಹಾಲಯ ಸ್ಥಾಪನೆಗೆ ತಜ್ಞರ ಸಮಿತಿಯನ್ನೂ ರಚಿಸಲಾಗಿದೆ ಎಂದರು.

ಮುಖ್ಯ ಅತಿಥಿಗಳಾಗಿ ತುಳು ಅಕಾಡಮಿಯ ಅಧ್ಯಕ್ಷ ತಾರನಾಥ್ ಗಟ್ಟಿ ಕಾಪಿಕಾಡ್, ಕೊಂಕಣಿ ಅಕಾಡಮಿಯ ಅಧ್ಯಕ್ಷ ಸ್ಟ್ಯಾನಿ ಜೋಕಿಂ ಅಲ್ವಾರಿಸ್, ಯಕ್ಷಗಾನ ಅಕಾಡಮಿಯ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ, ಬ್ಯಾರಿ ಅಕಾಡಮಿಯ ಮಾಜಿ ಅಧ್ಯಕ್ಷರಾದ ರಹೀಮ್ ಉಚ್ಚಿಲ್, ಬಿ.ಎ. ಮುಹಮ್ಮದ್ ಹನೀಫ್, ಕರಂಬಾರ್ ಮುಹಮ್ಮದ್ ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಬ್ಯಾರೀಸ್ ಚೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರೀಸ್ ಇದರ ಅಧ್ಯಕ್ಷ ಹಾಜಿ ಎಸ್. ಎಂ. ರಶೀದ್, ಬ್ಯಾರಿ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಂಘದ ಅಧ್ಯಕ್ಷ ಬಶೀರ್ ಬೈಕಂಪಾಡಿ, ಕೇಂದ್ರ ಬ್ಯಾರಿ ಸಾಹಿತ್ಯ ಪರಿಷತ್‌ನ ಅಧ್ಯಕ್ಷ ಡಿ.ಎಂ. ಅಸ್ಲಮ್, ಮೂಡಿಗೆರೆ ತಾಲೂಕು ಬ್ಯಾರಿ ಒಕ್ಕೂಟದ ಅಧ್ಯಕ್ಷ ಮುಹಮ್ಮದ್ ಮೂಡಿಗೆರೆ, ಮೈಸೂರಿನ ದಿ ಬ್ಯಾರೀಸ್ ವೆಲ್ಫೇರ್ ಅಸೋಸಿಯೇಶನ್‌ನ ಅಧ್ಯಕ್ಷ ಯು.ಕೆ. ಹಮೀದ್ ಹಾಜಿ, ಅಖಿಲ ಭಾರತ ಬ್ಯಾರಿ ಮಹಾಸಭಾದ ಅಧ್ಯಕ್ಷ ಅಬ್ದುಲ್ ಅಝೀಝ್ ಬೈಕಂಪಾಡಿ, ಅಖಿಲ ಭಾರತ ಬ್ಯಾರಿ ಪರಿಷತ್‌ನ ಗೌರವಾಧ್ಯಕ್ಷ ಯೂಸುಫ್ ವಖ್ತಾರ್, ಮೇಲ್ತೆನೆಯ ಗೌರವಾ ಧ್ಯಕ್ಷ ಆಲಿಕುಂಞಿ ಪಾರೆ, ಕರಾವಳಿ ಬ್ಯಾರಿ ಕಲಾವಿದರ ಒಕ್ಕೂಟದ ಅಧ್ಯಕ್ಷ ಹುಸೈನ್ ಕಾಟಿಪಳ್ಳ ಉಪಸ್ಥಿತರಿದ್ದರು.

ಸಾಹಿತಿ ಹುಸೈನ್ ಕಾಟಿಪಳ್ಳ ಪ್ರಾರ್ಥಿಸಿ, ನಾಡಗೀತೆ ಹಾಡಿದರು. ಅಕಾಡಮಿಯ ರಿಜಿಸ್ಟ್ರಾರ್ ರಾಜೇಶ್ ಜಿ., ಸದಸ್ಯರಾದ ಹಫ್ಸಾ ಬಾನು ಬೆಂಗಳೂರು ಪಾಲ್ಗೊಂಡಿದ್ದರು.

ಸದಸ್ಯರಾದ ಶಮೀರಾ ಜಹಾನ್, ಹಮೀದ್ ಹಸನ್ ಮಾಡೂರು, ಸಾರಾ ಅಲಿ ಪರ್ಲಡ್ಕ, ಅಬೂಬಕರ್ ಅನಿಲಕಟ್ಟೆ, ತಾಜುದ್ದೀನ್ ಅಮ್ಮುಂಜೆ ಸನ್ಮಾನ ಪತ್ರಗಳನ್ನು ವಾಚಿಸಿದರು. ಸದಸ್ಯರಾದ ಅಬ್ದುಲ್ ಶರೀಫ್ ಸ್ವಾಗತಿಸಿದರು. ಬಿ.ಎಸ್. ಮುಹಮ್ಮದ್ ವಂದಿಸಿದರು. ಯು.ಎಚ್. ಖಾಲಿದ್‌ಉಜಿರೆ ಕಾರ್ಯಕ್ರಮ ನಿರೂಪಿಸಿದರು.














share
ವಾರ್ತಾಭಾರತಿ
ವಾರ್ತಾಭಾರತಿ
Next Story
X