ಅಡ್ಯನಡ್ಕದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ; ಹಿರಿಯ ವೈದ್ಯರಿಗೆ ಸನ್ಮಾನ

ಅಡ್ಯನಡ್ಕ: ಅಡ್ಯನಡ್ಕ ಎಜುಕೇಶನಲ್ ಸೊಸೈಟಿ (ರಿ) ಹಾಗೂ ರೋಟರಿ ಕ್ಲಬ್ ಪುತ್ತೂರು ಇವುಗಳ ಸಹಯೋಗದಲ್ಲಿ ಸ್ಥಳೀಯ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಹಿರಿಯ ವೈದ್ಯರಿಗೆ ಸನ್ಮಾನ ಕಾರ್ಯಕ್ರಮವು ಅಡ್ಯನಡ್ಕ ಜನತಾ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಫೆ. 9ರಂದು ನಡೆಯಿತು.
ಆರೋಗ್ಯ ತಪಾಸಣಾ ಶಿಬಿರವನ್ನು ಅಡ್ಯನಡ್ಕ ಎಜುಕೇಶನಲ್ ಸೊಸೈಟಿ (ರಿ) ಗೋವಿಂದ ಪ್ರಕಾಶ ಸಾಯ ಉದ್ಘಾಟಿಸಿದರು. ಪುತ್ತೂರು ರೋಟರಿ ಕ್ಲಬ್ ಅಧ್ಯಕ್ಷ ಡಾ. ಶ್ರೀಪತಿ ರಾವ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಯೆನೆಪೊಯ ಮೆಡಿಕಲ್ ಕಾಲೇಜಿನ ತಜ್ಞ ವೈದ್ಯರಾದ ಡಾ. ರೋಹನ್ ಶೆಟ್ಟಿ ಹಾಗೂ ಡಾ. ರಾಜೇಶ್ ಕೃಷ್ಣ ಪಾಲ್ಗೊಂಡು ಮಾತನಾಡಿದರು. ಅಡ್ಯನಡ್ಕ ಜನತಾ ವಿದ್ಯಾಸಂಸ್ಥೆಗಳ ಸಂಚಾಲಕರಾದ ಡಾ. ಅಶ್ವಿನಿ
ಕೃಷ್ಣ ಮೂರ್ತಿ ಶುಭ ಹಾರೈಸಿದರು. ಅಡ್ಯನಡ್ಕ ಎಜುಕೇಶನಲ್ ಸೊಸೈಟಿಯ ಆಡಳಿತಾಧಿಕಾರಿ ರಮೇಶ ಎಂ. ಬಾಯಾರು ,ಪುತ್ತೂರು ರೋಟರಿ ಕ್ಲಬ್ ಕಾರ್ಯದರ್ಶಿ ದಾಮೋದರ್, ಅಡ್ಯನಡ್ಕ ಎಜುಕೇಶನಲ್ ಸೊಸೈಟಿಯ ಕೋಶಾಧಿಕಾರಿ ಕೇಶವ ಭಟ್ ಚವರ್ಕಾಡು ಹಾಗೂ ಜನತಾ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಗಿರೀಶ್ ಮುಳಿಯಾಲ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಅಡ್ಯನಡ್ಕ ಪರಿಸರದಲ್ಲಿ ವೈದ್ಯಕೀಯ ಸೇವೆ ಸಲ್ಲಿಸುತ್ತಿರುವ ಹಿರಿಯ ವೈದ್ಯರಾದ ಡಾ.ಕೆ. ಸುಬ್ರಹ್ಮಣ್ಯ ಭಟ್, ಡಾ. ಶ್ರೀಕೃಷ್ಣ ಪೈಸಾರಿ ಹಾಗೂ ಡಾ. ವಿಶ್ವೇಶ್ವರ ಭಟ್ ಇವರನ್ನು ಜನತಾ ವಿದ್ಯಾಸಂಸ್ಥೆಗಳ ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ ಸನ್ಮಾನಿಸಲಾಯಿತು. ಜನತಾ ಹಿರಿಯ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಎಂ. ಕುಂಞ ನಾಯ್ಕ ಸನ್ಮಾನ ಪತ್ರ ವಾಚಿಸಿದರು. ಜನತಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಡಿ. ಶ್ರೀನಿವಾಸ್ ಸ್ವಾಗತಿಸಿ, ಜನತಾ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಟಿ. ಆರ್. ನಾಯ್ಕ್ ವಂದಿಸಿದರು. ಕನ್ನಡ ಅಧ್ಯಾಪಕ ಶಿವಕುಮಾರ್ ಸಾಯ ಕಾರ್ಯಕ್ರಮ ನಿರೂಪಿಸಿದರು.
ಬೃಹತ್ ಆರೋಗ್ಯ ಶಿಬಿರದಲ್ಲಿ ಒಟ್ಟು 400 ಮಂದಿ ಫಲಾನುಭವಿಗಳು ವಿವಿಧ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸೆಗೆ ನೋಂದಾಯಿಸಿಕೊಂಡು ಉಚಿತ ಪ್ರಯೋಜನ ಪಡೆದರು. 33 ಮಂದಿ ರಕ್ತದಾನ
ಮಾಡಿದ್ದು, 45 ಮಂದಿ ಫಲಾನುಭವಿಗಳಿಗೆ ಆಯುಷ್ಮಾನ್ ಕಾರ್ಡ್ ನೋಂದಾವಣೆ ನಡೆಸಲಾಗಿದೆ. ರಕ್ತ ವರ್ಗೀಕರಣ ಮತ್ತು ರಕ್ತದಾನ, ಕಣ್ಣಿನ ಪರೀಕ್ಷೆ ಮತ್ತು ಚಿಕಿತ್ಸೆ, ಕಿಡ್ನಿ, ಸಂಬಂಧಪಟ್ಟ ಕಾಯಿಲೆಗಳಿಗೆ ಉಚಿತ ತಪಾಸಣೆ ಮತ್ತು ಮಾರ್ಗದರ್ಶನ, ಬಾಯಿಯ ತಪಾಸಣೆ ಮತ್ತು ದಂತ ಚಿಕಿತ್ಸೆ, ಬಿಪಿ, ಸಕ್ಕರೆ ಖಾಯಿಲೆ, ಇಸಿಜಿ, ಶ್ವಾಸಕೋಶ ತಪಾಸಣೆ ಮತ್ತು ಮಾಹಿತಿ, ಹೋಮಿಯೋಪತಿ ಮತ್ತು ಆಯುರ್ವೇದಿಕ್ ಚಿಕಿತ್ಸೆ, ಸ್ತನ ಕ್ಯಾನ್ಸರ್ ಮತ್ತು ಮೂತ್ರಜನಕಾಂಗದ ತಪಾಸಣೆ, ಮಕ್ಕಳ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸೆ, ಆಯು?್ಮಾನ್ ಕಾರ್ಡ್ ನೋಂದಾವಣೆ ಉಚಿತವಾಗಿ ನಡೆಯಿತು.