ಮೀಫ್‌ನಿಂದ ಸರಕಾರಿ ಪ.ಪೂ. ವಿದ್ಯಾರ್ಥಿಗಳಿಗೆ ಉಚಿತ ನೀಟ್, ಸಿಇಟಿ ತರಬೇತಿ: ಅರ್ಜಿ ಆಹ್ವಾನ

ಮಂಗಳೂರು: ಮೀಫ್ ವತಿಯಿಂದ ವಿಶೇಷವಾಗಿ ಸರಕಾರಿ ಪ.ಪೂ. ಕಾಲೇಜು ವಿದ್ಯಾರ್ಥಿಗಳಿಗೆ ಮಾರ್ಚ್ 21ರಿಂದ 45 ದಿನಗಳ ಕಾಲ ಉಚಿತ ನೀಟ್ ಮತ್ತು ಸಿಇಟಿ ತರಬೇತಿಯನ್ನು ಮಂಗಳೂರಿನಲ್ಲಿ ಆಯೋಜಿಸಲಾಗಿದೆ. 225 ಉಚಿತ ಸೀಟುಗಳು ಮೀಫ್‌ಗೆ ದೊರೆತಿದ್ದು, ಅದರಲ್ಲಿ ಕೆಲವು ಸೀಟುಗಳನ್ನು ಸರಕಾರಿ ಪ.ಪೂ. ಕಾಲೇಜುಗಳಲ್ಲಿ ಕಲಿಯುವ ದ್ವಿತೀಯ ಪಿಯು ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಕಾಯ್ದಿರಿಸಲಾಗಿದೆ. ಎರಡನೇ ಪಿಯು ಮಧ್ಯಾವಧಿ ಪರೀಕ್ಷೆಯಲ್ಲಿ ಅಥವಾ ತಯಾರಿ ಪರೀಕ್ಷೆಯಲ್ಲಿ ಶೇ.80 ಮತ್ತು ಅದಕ್ಕಿಂತ ಅಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳು ಈ ಉಚಿತ ತರಬೇತಿ ಪಡೆಯಲು ಅರ್ಹರಾಗಿರುತ್ತಾರೆ.
ಮೀಫ್ ವ್ಯಾಪ್ತಿಗೆ ಒಳಪಡುವ ದ.ಕ., ಉಡುಪಿ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಹಾಸನ ಜಿಲ್ಲೆಗಳ ವಿದ್ಯಾರ್ಥಿಗಳು ಈ ಸೌಲಭ್ಯವನ್ನು ಪಡೆಯಬಹುದಾಗಿದೆ. ಈ ಉಚಿತ ಸೀಟುಗಳನ್ನು ಮಂಗಳೂರಿನ ಯೆನೆಪೊಯ ಪ.ಪೂ. ಕಾಲೇಜು ಮತ್ತು ಬರಕಾ ಇಂಟರ್‌ನ್ಯಾಷನಲ್ ಸ್ಕೂಲ್ ಒದಗಿಸಿದೆ. ಆಸಕ್ತ ವಿದ್ಯಾರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಮೀಫ್ ಕೇಂದ್ರ ಕಚೇರಿಗೆ ಫೆ.10ರೊಳಗೆ ನೀಡಬೇಕು. ಹೆಚ್ಚಿನ ಮಾಹಿತಿಗೆ ಮೊ.ಸಂ: 8792115666ನ್ನು ಸಂಪರ್ಕಿಸಬಹುದು ಎಂದು ಮೀಫ್ ಕೇಂದ್ರ ಸಮಿತಿಯ ಅಧ್ಯಕ್ಷ ಮೂಸಬ್ಬ ಪಿ.ಬ್ಯಾರಿ ಜೋಕಟ್ಟೆ ಪ್ರಕಟನೆಯಲ್ಲಿ ತಿಳಿಸಿದ್ದಾರೆ.







