Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮತಾಂಧತೆ, ಭ್ರಮೆಯಿಂದ ಹೊರಬನ್ನಿ:...

ಮತಾಂಧತೆ, ಭ್ರಮೆಯಿಂದ ಹೊರಬನ್ನಿ: ಯುವಜನತೆಗೆ ನ್ಯಾ.ನಾಗಮೋಹನ್ ದಾಸ್ ಕರೆ

ತೊಕ್ಕೊಟ್ಟು: ಡಿವೈಎಫ್ಐ ರಾಜ್ಯ ಸಮ್ಮೇಳನಕ್ಕೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ25 Feb 2024 1:03 PM IST
share
ಮತಾಂಧತೆ, ಭ್ರಮೆಯಿಂದ ಹೊರಬನ್ನಿ: ಯುವಜನತೆಗೆ ನ್ಯಾ.ನಾಗಮೋಹನ್ ದಾಸ್ ಕರೆ

ಮಂಗಳೂರು, ಫೆ.25: ದೇಶದಲ್ಲಿ ಹಿಂದೆಂದೂ ಕಾಣದ ನಿರುದ್ಯೋಗ, ಅಸಮಾನತೆಯ ಹಲವು ಸಮಸ್ಯೆಗಳ ನಡುವೆ ಯುವ ಜನತೆ ಮತಾಂಧತೆ, ಭ್ರಮೆಯ ಸುಳಿಯಲ್ಲಿ ಸಿಲುಕಿ ನರಳುತ್ತಿದೆ. ಅದರಿಂದ ಅವರನ್ನು ಹೊರ ತರುವಲ್ಲಿ ಗ್ರಾಮಗಳಿಂದ ಜಾಗೃತಿ ಮೂಡಿಸುವ ಕೆಲಸ ಆಗಬೇಕು ಎಂದು ಕರ್ನಾಟಕದ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅಭಿಪ್ರಾಯಿಸಿದ್ದಾರೆ.

'ಸಾಮರಸ್ಯ, ಉದ್ಯೋಗ, ಘನತೆಯ ಬದುಕಿಗಾಗಿ' ಎಂಬ ಘೋಷ ವಾಕ್ಯದೊಂದಿಗೆ ನಡೆಯಲಿರುವ ಮೂರು ದಿನಗಳ ಡಿವೈಎಫ್ಐ 12ನೇ ರಾಜ್ಯ ಸಮ್ಮೇಳನಕ್ಕೆ ತೊಕ್ಕೊಟ್ಟು ಸಮೀಪದ ಕಲ್ಲಾಪು ಬಳಿಯ ಯುನಿಟಿ ಸಭಾಂಗಣದಲ್ಲಿ ರವಿವಾರ ಬೆಳಗ್ಗೆ ಡೋಲು ಬಾರಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು.

ಪ್ರಸಕ್ತ ಸಂದಿಗ್ಧ ಪರಿಸ್ಥಿತಿಯಲ್ಲಿ ದೇಶದಲ್ಲಿ ಸಮಾನ ಹಾಗೂ ಗುಣಮಟ್ಟದ ಶಿಕ್ಷಣ, ನೀತಿ ಜೊತೆಗೆ ಯುವ ನೀತಿಯನ್ನು ಸರಕಾರ ಜಾರಿಗೊಳಿಸುವ ನಿಟ್ಟಿನಲ್ಲಿ ಸಮ್ಮೇಳನದಲ್ಲಿ ಚರ್ಚಿಸಿ ನಿರ್ಣಯ ಕೈ ಗೊಂಡು ಈ ಕುರಿತಾದ ಚಳವಳಿಯ ನೇತೃತ್ವವನ್ನೂ ಡಿವೈ ಎಫ್ ಐ ವಹಿಸಬೇಕು ಎಂದು ಅವರು ಸಲಹೆ ನೀಡಿದರು.

ಯುನಿಟಿ ಹಾಲ್ ನ ಪ್ರೊ.ಅಮೃತ ಸೋಮೇಶ್ವರ ವೇದಿಕೆ, ಡಾ.ವಿಠಲ್ ಭಂಡಾರಿ ಸಭಾಂಗಣದಲ್ಲಿ ಕಾಂ.ನಾಗೇಶ್ ಕುಮಾರ್ ನಗರದಲ್ಲಿ ನಡೆಯುತ್ತಿರುವ ಸಮ್ಮೇಳನದ ಸ್ವಾಗತ ಸಮಿತಿಯ ಗೌರವಾಧ್ಯಕ್ಷ, ವಿಶ್ರಾಂತ ಜಿಲ್ಲಾಧಿಕಾರಿ ಎ.ಬಿ.ಇಬ್ರಾಹೀಂ ಮಾತನಾಡಿ, ದೇಶದಲ್ಲಿ ಕಳೆದ ಒಂದು ದಶಕದಲ್ಲಿ ಸಂವಿಧಾನವನ್ನು ದುರ್ಬಲಗೊಳಿಸುವ ಪ್ರಯತ್ನ ವ್ಯವಸ್ಥಿತವಾಗಿ ನಡೆಯುತ್ತಿದೆ. ಆ ಮೂಲಕ ಚಾತುರ್ವರ್ಣ, ಜಾತಿ ವ್ಯವಸ್ಥೆಯನ್ನು ಮುನ್ನೆಲೆಗೆ ತರುವ ಪಿತೂರಿ ನಡೆಯುತ್ತಿದ್ದು, ಇದರ ವಿರುದ್ಧ ಗ್ರಾಮ ಮಟ್ಟದಿಂದ ಜನರಿಗೆ ಮನವರಿಕೆ ಮಾಡುವ ಚಳವಳಿ ಆಗಬೇಕು ಎಂದು ಹೇಳಿದರು.

ಮತೀಯವಾದವನ್ನು ಬಿತ್ತುವ ಶತ್ರುಗಳು ಬಲಶಾಲಿಯಾಗಿದ್ದರೂ ಅದನ್ನು ಹಿಮ್ಮೆಟ್ಟಿಸುವ ನಮ್ಮ ಪ್ರಯತ್ನ ನಿರಂತರವಾಗಿರಬೇಕು. ಜಿಲ್ಲೆಯ ಸೌಹಾರ್ದ ಪರಂಪರೆಯನ್ನು ಕಾಪಾಡಬೇಕು ಎಂದು ಅವರು ಕರೆ ನೀಡಿದರು.

ಸಮ್ಮೇಳನದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಡಿವೈಎಫ್ಐ ಕರ್ನಾಟಕ ರಾಜ್ಯ ಅಧ್ಯಕ್ಷ ಮುನೀರ್ ಕಾಟಿಪಳ್ಳ ವಹಿಸಿದ್ದರು.

ಡಿವೈಎಫ್ಐ ಕೇಂದ್ರ ಸಮಿತಿಯ ಜೆಕ್ ಸಿ. ಥಾಮಸ್, ರಾಜ್ಯ ಕಾರ್ಯದರ್ಶಿ ಬಸವರಾಜ್ ಪೂಜಾರ್, ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ರಜೀಶ್ ವೆಲ್ಲಾಟ್, ಕರ್ನಾಟಕ ರಾಜ್ಯ ಸಮಿತಿ ಸದಸ್ಯರಾದ ರೇಣುಕಾ ಕಹಾರ್, ಆಶಾ ಬೋಳೂರು, ಎಸ್ಎಫ್ಐನ ರಾಜ್ಯ ಕಾರ್ಯದರ್ಶಿ ಭೀಮನಗೌಡ, ಸ್ವಾಗತ ಸಮಿತಿ ಸದಸ್ಯರಾದ ಸುನೀಲ್ ಕುಮಾರ್ ಬಜಾಲ್, ಕೃಷ್ಣಪ್ಪ ಕೊಂಚಾಡಿ, ಬಿ.ಕೆ. ಇಮ್ತಿಯಾಝ್, ವಕೀಲ ರಾಮಚಂದ್ರ ಬಬ್ಬುಕಟ್ಟೆ, ಡಾ.ಜೀವನ್ ರಾಜ್ ಕುತ್ತಾರ್ ಮತ್ತಿತರರು ಉಪಸ್ಥಿತರಿದ್ದರು.

ರಮೇಶ್ ಕುಮಾರ್ ಸ್ಮರಣೆಯಲ್ಲಿ ಹೋರಾಟ ಚಳವಳಿಗಳ ನೆನಪಿನ ಪೋಸ್ಟರ್ ಗ್ಯಾಲರಿಯನ್ನು ವಿಶ್ರಾಂತ ಜಿಲ್ಲಾಧಿಕಾರಿ, ಸ್ವಾಗತ ಸಮಿತಿಯ ಗೌರವಾಧ್ಯಕ್ಷ ಎ.ಬಿ.ಇಬ್ರಾಹೀಂ ಉದ್ಘಾಟಿಸಿದರು.

ಸ್ವಾಗತ ಸಮಿತಿಯ ಪ್ರಧಾನ ಕಾರ್ಯದರ್ಶಿ, ಡಿವೈಎಫ್ಐ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್ ಸ್ವಾಗತಿಸಿದರು. ಡಿವೈಎಫ್ಐ ಮುಖಂಡರಾದ ಮನೋಜ್ ವಾಮಂಜೂರು ಕಾರ್ಯಕ್ರಮ ನಿರ್ವಹಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X