Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು ವಿವಿಯಲ್ಲಿ 'ಗಿಳಿವಿಂಡು'...

ಮಂಗಳೂರು ವಿವಿಯಲ್ಲಿ 'ಗಿಳಿವಿಂಡು' ಕಾರ್ಯಕ್ರಮ

ಮಾನವಿಕ, ಭಾಷಾ ವಿಭಾಗಗಳು ಮುಚ್ಚಿದರೆ ಸಮಾಜಕ್ಕೆ ಗಂಡಾಂತರ ಕಾದಿದೆ: ಪ್ರೊ.ವೈ.ಸಂಗಪ್ಪ

ವಾರ್ತಾಭಾರತಿವಾರ್ತಾಭಾರತಿ24 July 2025 11:16 AM IST
share
ಮಂಗಳೂರು ವಿವಿಯಲ್ಲಿ ಗಿಳಿವಿಂಡು ಕಾರ್ಯಕ್ರಮ

ಕೊಣಾಜೆ: ಆಧುನಿಕ ತಂತ್ರಜ್ಞಾನ, ವಿಜ್ಞಾನದ ಭರಾಟೆಯಲ್ಲಿ ಸಮಾಜದಲ್ಲಿ ಹಲವಾರು ಬದಲಾವಣೆಗಳಾಗಿವೆ. ಸಮಾಜದ ಸ್ವಾಸ್ಥ್ಯ, ಆರೋಗ್ಯ ಕಾಪಾಡಲು ಮಾನವಿಕ ವಿಭಾಗಗಳು ,‌ಭಾಷಾ ವಿಭಾಗಗಳು ಜೀವಂತವಿರಬೇಕಿದೆ. ಒಂದು ವೇಳೆ ಮುಚ್ಚಿದರೆ ಮುಂದಿನ ದಿನಗಳಲ್ಲಿ ಸಮಾಜಕ್ಕೆ ಗಂಡಾಂತರ ಕಾದಿದೆ ಎಂದು ಮಂಗಳೂರು ವಿವಿ ಹಣಕಾಸು ಅಧಿಕಾರಿ ಪ್ರೊ.ವೈ.ಸಂಗಪ್ಪ ಅವರು ಹೇಳಿದರು.

ಮಂಗಳೂರು ವಿವಿಯ ಎಸ್ ವಿಪಿ ಕನ್ನಡ ಅಧ್ಯಯನ ಸಂಸ್ಥೆ ಗಿಳಿವಿಂಡು(ರಿ), ಹಿರಿಯ ವಿದ್ಯಾರ್ಥಿ,‌ಅದ್ಯಾಪಕ ಹಾಗೂ ಸಿಬ್ಬಂದಿಗಳ ಒಕ್ಕೂಟ, ಮಂಗಳಗಂಗೋತ್ರಿ ಇದರ ಆಶ್ರಯದಲ್ಲಿ 'ಬಾರಿಸು ಕನ್ನಡ ಡಿಂಡಿಮವ, ಗಿಳಿವಿಂಡು ಯಾನ- ಮರಳಿ ಮನೆಗೆ' ಎಂಬ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ಸಮಾಂಭದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದ ಮಂಗಳೂರು ವಿವಿ ಕನ್ನಡ ವಿಭಾಗದ ಪ್ರಥಮ ತಂಡದ ವಿದ್ಯಾರ್ಥಿ ಹಾಗೂ ಕೆನರಾ‌ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಪ್ರೊ.ಶಂಕರ್ ಶೆಟ್ಟಿ ಅವರು, ಸಮಾಜಕ್ಕೆ ಕನ್ನಡದ ಕೊಡುಗೆ ಅಪಾರ. ಕನ್ನಡಕ್ಕೆ ವಿಶೇಷ ಶಕ್ತಿ ಇದೆ. ಕನ್ನಡವನ್ನು ಎಂದಿಗೂ ಹೀನವಾಗಿ ನೋಡದೆ ಕನ್ನಡಪರ ಕಾರ್ಯಗಳಲ್ಲಿ ತೊಡಗಿಸಿಕೊಳ್ಳೋಣ. ಮಂಗಳೂರು ವಿವಿಯ ಕನ್ನಡ ಅಧ್ಯಯನ ಸಂಸ್ಥೆಯು ಗಿಳಿವಿಂಡುವಿನ ಮೂಲಕ ಕನ್ನಡಪರ ಮನಸ್ಸುಗಳನ್ನು ಒಟ್ಟುಗೂಡಿಸಿರುವುದು ಶ್ಲಾಘನೀಯವಾಗಿದೆ ಎಂದರು.

ಪ್ರೊ.ಚಂದ್ರಕಲಾ ನಂದಾವರ ಅವರು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ, ಓದುವ ಆಸಕ್ತಿಯನ್ನು ಮೀರಿದ್ದು ಯಾವುದೇ ಇಲ್ಲ. ಆದ್ದರಿಂದ ಎಲ್ಲರೂ ಓದಿನ ಹವ್ಯಾಸವನ್ನು ಬೆಳೆಸಿಕೊಳ್ಳಬೇಕಿದೆ. ಸಾಹಿತ್ಯ ಹಾಗೂ ಸಾಹಿತ್ಯದ ಓದಿನಲ್ಲಿ ಒಂದು ಜೀವಾನುಭವ ಇರುತ್ತದೆ. ಬದುಕಿನ ಶಕ್ತಿಯನ್ನು ಅದು ಕಟ್ಟಿಕೊಡುತ್ತದೆ. ಗಿಳಿವಿಂಡುವಿನ ಮೂಲಕ ಕನ್ನಡದ ಕೆಲಸಗಳು ಮುಂದುವರಿಯಲಿ ಎಂದರು.

ಸಮಾರಂಭದಲ್ಲಿ ಗಿಳಿವಿಂಡುವಿನ ಸಹಕಾರ್ಯದರ್ಶಿ ಡಾ. ನರಸಿಂಹ ಮೂರ್ತಿ ಹಾಗೂ ಕನ್ನಡ ಅಧ್ಯಯನ ಸಂಸ್ಥೆಯ ಹಿರಿಯ ವಿದ್ಯಾರ್ಥಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಗಿಳಿವಿಂಡುವಿನ ಅಧ್ಯಕ್ಷರು ಹಾಗೂ ವಿಶ್ರಾಂತ ಪ್ರಾಧ್ಯಾಪಕರಾದ ಪ್ರೊ.ಬಿ.ಶಿವರಾಮ ಶೆಟ್ಟಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.

ಎಸ್ ವಿಪಿ ಕನ್ನಡ ಅಧ್ಯಯನ ಸಂಸ್ಥೆಯ ಅಧ್ಯಕ್ಷರಾದ ಡಾ.ನಾಗಪ್ಪ ಗೌಡ ಅವರು ಸ್ವಾಗತಿಸಿದರು. ಅಧ್ಯಾಪಕರಾದ ಡಾ‌.ಧನಂಜಯ ಕುಂಬ್ಳೆ ಅವರು ವಂದಿಸಿದರು. ಡಾ.ಯಶುಕುಮಾರ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X