Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಜಿಎಂಪಿಎಲ್ ನೆಲದ ಕಾನೂನಿಗೆ ಗೌರವ...

ಜಿಎಂಪಿಎಲ್ ನೆಲದ ಕಾನೂನಿಗೆ ಗೌರವ ನೀಡಿದೆ: ಲಾರೆನ್ಸ್ ಡಿಸೋಜ

ಜೆಬಿಎಫ್ ಕಂಪೆನಿಗೆ ಜಮೀನು ಬಿಟ್ಟುಕೊಟ್ಟವರಿಗೆ ಉದ್ಯೋಗ

ವಾರ್ತಾಭಾರತಿವಾರ್ತಾಭಾರತಿ18 Sept 2024 4:16 PM IST
share
ಜಿಎಂಪಿಎಲ್ ನೆಲದ ಕಾನೂನಿಗೆ ಗೌರವ ನೀಡಿದೆ: ಲಾರೆನ್ಸ್ ಡಿಸೋಜ

ಮಂಗಳೂರು, ಸೆ.16: ಜೆಬಿಎಫ್ ಕಂಪೆನಿಗೆ ಜಮೀನು ಬಿಟ್ಟುಕೊಟ್ಟ ಕುಟುಂಬದ ಪರ ಉದ್ಯೋಗ ಪಡೆದಿದ್ದ 115 ಮಂದಿಗೆ ಉದ್ಯೋಗವನ್ನು ಮುಂದುವರಿಸಲು ಗೈಲ್ ಮಂಗಳೂರು ಪೆಟ್ರೋ ಕೆಮಿಕಲ್ಸ್ ಲಿಮಿಟೆಡ್ ಸೆಪ್ಟಂಬರ್ ತಿಂಗಳಾಂತ್ಯದೊಳಗೆ ಆದೇಶ ನೀಡುವ ನಿರ್ಧಾರವನ್ನು ತಿಳಿಸಿರುವುದು ಸಂತಸದ ವಿಚಾರವಾಗಿದೆ. ಇದರೊಂದಿಗೆ ಜಿಎಂಪಿಎಲ್ ನೆಲದ ಕಾನೂನಿಗೆ ಕೊನೆಗೂ ಗೌರವ ನೀಡಿದೆ ಎಂದು ದಕ್ಷಿಣ ಕನ್ನಡ ಕಾಂಗ್ರೆಸ್ ಕಾರ್ಮಿಕ ಘಟಕದ ಅಧ್ಯಕ್ಷ ಲಾರೆನ್ಸ್ ಡಿ ಸೋಜ ಅಭಿಪ್ರಾಯಪಟ್ಟಿದ್ದಾರೆ.

ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದು ದ.ಕ. ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ಘಟಕದ ಗೆಲವು, ಭೂಮಿ ಕೊಟ್ಟು ಉದ್ಯೋಗಕ್ಕಾಗಿ 45 ದಿನಗಳಿಂದ ಹೋರಾಟ ನಡೆಸಿದ ಮತ್ತು ಕೆಲಸವು ಇಲ್ಲದೆ ವರ್ಷದಿಂದ ಅಲೆದಾಡುತ್ತಿರುವ ಸ್ಥಳೀಯರ ಗೆಲುವು ಆಗಿದೆ ಎಂದು ಅವರು ಹೇಳಿದರು.

ಮಂಗಳೂರಿನ ವಿಶೇಷ ಆರ್ಥಿಕ ವಲಯದಲ್ಲಿ ಜೆಬಿಎಫ್ಪಿಎಲ್ ಕಂಪೆನಿ ಸ್ಥಾಪನೆಗೆ ಜಮೀನು ಬಿಟ್ಟುಕೊಟ್ಟು ಪಿಡಿಎಫ್ (ಭೂಮಿ ಕಳೆದುಕೊಂಡ ಕುಟುಂಬಸ್ಥರು) ಆಧಾರದಲ್ಲಿ ಉದ್ಯೋಗ ಪಡೆದಿದ್ದ ಸ್ಥಳೀಯರಿಗೆ ಜಿಎಂಪಿಎಲ್ (ಗೈಲ್ ಇಂಡಿಯಾ) ಕಂಪೆನಿಯಲ್ಲಿ ಉದ್ಯೋಗ ಖಾಯಂಗೊಳಿಸುವಂತೆ ಕೇಂದ್ರ ಪೆಟ್ರೋಲಿಯಂ ಸಚಿವಾಲಯ ನೀಡಿದ್ದ ಸೂಚನೆ ಮೇರೆಗೆ ಜಿಎಂಪಿಎಲ್ ಕಂಪೆನಿ ಇದೀಗ ಒಪ್ಪಿಗೆ ನೀಡಿದೆ. ಕಳೆದ ಒಂದು ವರ್ಷದಿಂದ ಮೊಂಡುತನವನ್ನು ಪ್ರದರ್ಶಿಸುತ್ತಿದ್ದ ಗೈಲ್ ಕಂಪೆನಿಯು ಇದೀಗ ರಾಜ್ಯ ಸರಕಾರ, ಕೇಂದ್ರ ಸರಕಾರ, ಜಿಲ್ಲಾಡಳಿತ, ಎಂಎಇಝೆಡ್ ಅಧಿಕಾರಿಗಳ ಸ್ಪಷ್ಟ ಕಾನೂನು ಪರಿಪಾಲನೆ ಮಾಡಿರುವ ಹಿನ್ನೆಲೆಯಲ್ಲಿ ತಾನು ಅನುಸರಿಸುತ್ತಿದ್ದ ನಿಲುವಿನಿಂದ ಹಿಂದಕ್ಕೆ ಸರಿದಿದೆ ಎಂದರು.

ಎಂಎಸ್ ಇಝೆಡ್ ವಿಶೇಷ ಆರ್ಥಿಕ ವಲಯವು ವಶಪಡಿಸಿಕೊಂಡ ಜಾಗದಲ್ಲಿ ಸುಮಾರು 115 ಎಕರೆ ಸ್ಥಳವನ್ನು ಜೆಬಿಎಫ್ ಕಂಪೆನಿಗಾಗಿ ನೀಡಿತ್ತು.ಈ ಕಂಪೆನಿಯಲ್ಲಿ 115 ಮಂದಿ ಸ್ಥಳೀಯರು ಉದ್ಯೋಗ ಪಡೆದಿದ್ದರು. ಆದರೆ ಮುಂದೆ ಆರ್ಥಿಕ ಮುಗ್ಗಟ್ಟಿನಿಂದಾಗಿ ಕಂಪೆನಿ ದಿವಾಳಿ ಆಗಿತ್ತು. ಎನ್ಸಿಎಲ್ಟಿ ಮೂಲಕ ಜೆಪಿಎಫ್ ಕಂಪೆನಿಯನ್ನು ಗೈಲ್ ಇಂಡಿಯಾ ಕಂಪೆನಿ ತನ್ನ ವಶಕ್ಕೆ ಪಡೆದಿತ್ತು ಎಂದು ಲಾರೆನ್ಸ್ ಹೇಳಿದರು.

*80 ಮಂದಿ ಪರ ಹೋರಾಟ: ಜೆಬಿಎಫ್ನಲ್ಲಿ ವಿವಿಧ ಹುದ್ದೆಗಳಿಗೆ ನೇರ ನೇಮಕಗೊಂಡ ಅರ್ಹ 80 ಮಂದಿ ಇದೀಗ ಉದ್ಯೋಗ ಕಳೆದುಕೊಂಡಿದ್ದಾರೆ. ಅವರಿಗೆ ಮರಳಿ ಗೈಲ್ ಮಂಗಳೂರು ಪೆಟ್ರೋ ಕೆಮಿಕಲ್ಸ್ ಲಿಮಿಟೆಡ್ನಲ್ಲಿ ಉದ್ಯೋಗ ಕೊಡಿಸಲು ಹೋರಾಟದ ಅಗತ್ಯತೆ ಇದೆ ಎಂದು ಜಿಲ್ಲಾ ಕಾಂಗ್ರೆಸ್ ನ ಕಾನೂನು, ಮಾನವ ಹಕ್ಕುಗಳು ಮತ್ತು ಆರ್ಟಿಐ ವಿಭಾಗದ ಅಧ್ಯಕ್ಷ ಮನೋರಾಜ್ ರಾಜೀವ್ ತಿಳಿಸಿದ್ದಾರೆ.

ಎಲ್ಲ ಅರ್ಹತೆ, ಅನುಭವ ಮತ್ತು ಸೂಕ್ತ ತರಬೇತಿಯನ್ನು ಪಡೆದ ನೌಕರರನ್ನು ಹೊರಗಿಟ್ಟು ಹೊಸಬರನ್ನು ನೇಮಿಸಿಕೊಳ್ಳುವುದು ಸರಿಯಲ್ಲ. ಕೆಲಸ ಕಳೆದುಕೊಂಡವರಿಗೆ ಉದ್ಯೋಗ ಕೊಡಿಸುವಂತೆ ಅವರು ಆಗ್ರಹಿಸಿದರು.

ಕಂಪೆನಿಯಲ್ಲಿ ಹೊರಗಿನವರಿಗೆ ಕೊಡುವುದು ಬೇಡ ಎಂದು ನಾವು ಹೇಳುವುದಿಲ್ಲ. ಆದರೆ ಸ್ಥಳೀಯ ಯುವಕರಿಗೆ ಹೆಚ್ಚಿನ ಉದ್ಯೋಗ ಕೊಡಬೇಕು ಎಂದು ಆಗ್ರಹಿಸಿದರು.

ಕಾಂಗ್ರೆಸ್ ಪಕ್ಷದ ಪ್ರಮುಖರಾದ ನೀರಜ್ ಪಾಲ್, ಸದಾಶಿವ ಶೆಟ್ಟಿ, ಸದಾಶಿವ ಶೆಟ್ಟಿ, ಸುಭಾಶ್ಚಂದ್ರ ಶೆಟ್ಟಿ ಕೊಳ್ನಾಡು, ವಹಾಬ್ ಕುದ್ರೋಳಿ ಮತ್ತಿತರರು ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X