Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. Mangaluru | ಸರಕಾರ ಯೋಜನಾ...

Mangaluru | ಸರಕಾರ ಯೋಜನಾ ಫಲಾನುಭವಿಗಳಿಗೆ ಬ್ಯಾಂಕ್ ಸಾಲ ವಿಳಂಬ: ಕ್ರಮಕ್ಕೆ ಸೂಚನೆ

ವಾರ್ತಾಭಾರತಿವಾರ್ತಾಭಾರತಿ16 Dec 2025 7:52 PM IST
share
Mangaluru | ಸರಕಾರ ಯೋಜನಾ ಫಲಾನುಭವಿಗಳಿಗೆ ಬ್ಯಾಂಕ್ ಸಾಲ ವಿಳಂಬ: ಕ್ರಮಕ್ಕೆ ಸೂಚನೆ

ಮಂಗಳೂರು: ವಿವಿಧ ಸರಕಾರಿ ನೇರಸಾಲ ಯೋಜನೆಯಲ್ಲಿ ಫಲಾನುಭವಿಗಳಿಗೆ ಬ್ಯಾಂಕ್ ಸಾಲ ಮಂಜೂರು ಮಾಡಲು ವಿಳಂಬ ಮಾಡಬಾರದು ಎಂದು ಅಪರ ಜಿಲ್ಲಾಧಿಕಾರಿ ರಾಜು ಕೆ ಸೂಚಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ನಡೆದ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ, ಅಲೆಮಾರಿ ಅಭಿವೃದ್ಧಿ ನಿಗಮ ಹಾಗೂ ಎಸ್‌ಸಿಪಿ , ಟಿಎಸ್‌ಪಿ ಕಾರ‌್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ವಿವಿಧ ಇಲಾಖೆ ಮತ್ತು ಅಭಿವೃದ್ಧಿ ನಿಗಮಗಳ ಸಬ್ಸಿಡಿ ಆಧಾರಿತ ಯೋಜನೆಯಲ್ಲಿ ಫಲಾನುಭವಿಗಳಿಗೆ ಸಾಲ ಮಂಜೂರು ಮಾಡಲು ಬ್ಯಾಂಕ್‌ಗಳು ಸಿಬಿಲ್ ಕೊರತೆ ನೆಪದಲ್ಲಿ ನಿರಾಕರಿಸುತ್ತಿದೆ ಎಂದು ಸಭೆಯಲ್ಲಿ ಸಮಿತಿ ಸದಸ್ಯರು ಪ್ರಸ್ತಾಪಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಅಪರ ಜಿಲ್ಲಾಧಿಕಾರಿ ಅವರು, ಈ ಬಗ್ಗೆ ಲೀಡ್ ಬ್ಯಾಂಕ್ ಗಮನಕ್ಕೆ ತಂದು ಫಲಾನುಭವಿಗಳಿಗೆ ಸಾಲ ಮಂಜೂರು ಮಾಡಲು ವಿಳಂಬವಾಗದಂತೆ ಕ್ರಮ ಕೈಗೊಳ್ಳಲು ಸೂಚಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಕೆ.ಅರುಣ್ ಮಾತನಾಡಿ, ಬ್ಯಾಂಕ್‌ನಲ್ಲಿ ಫಲಾನುಭವಿಯ ಇತರ ಸಾಲಗಳಿಗೆ ಸರ್ಕಾರದ ಯೋಜನೆಯ ಸಾಲವನ್ನು ಲಿಂಕ್ ಮಾಡದಂತೆ ಕ್ರಮ ಕೈಗೊಳ್ಳಲು ಸಮಾಜ ಕಲ್ಯಾಣ ಇಲಾಖೆಗೆ ಸೂಚಿಸಿದರು.

ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ಮ್ಯಾಪಿಂಗ್ ವ್ಯತ್ಯಾಸದ ಹೆಸರಿನಲ್ಲಿ ಮಂಜೂರು ಮಾಡಲು ವಿಳಂಬಿಸಲಾಗುತ್ತಿರುವ ಬಗ್ಗೆ ಸಮಿತಿ ಸದಸ್ಯರು ಸಭೆಯಲ್ಲಿ ಪ್ರಸ್ತಾಪಿಸಿದರು. ಈ ಬಗ್ಗೆ ಮಂಗಳೂರು ವಿಶ್ವವಿದ್ಯಾನಿಲಯಕ್ಕೆ ಭೇಟಿ ನೀಡಿ ಮುಂದಿನ ಒಂದು ವಾರದೊಳಗೆ ವರದಿ ನೀಡುವಂತೆ ಸಮಾಜ ಕಲ್ಯಾಣ ಇಲಾಖೆಗೆ ಪೊಲೀಸ್ ಅಧೀಕ್ಷಕರು ಸೂಚಿಸಿದರು.

ತಾಲೂಕು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕುಂದು ಕೊರತೆ ಸಭೆಗಳಲ್ಲಿ ಸಮಾಜದ ಸಮಸ್ಯೆಗಳನ್ನು ಹೊರತುಪಡಿಸಿ ಅನ್ಯ ವಿಷಯಗಳನ್ನು ಚರ್ಚಿಸದಂತೆ ಅಪರ ಜಿಲ್ಲಾಧಿಕಾರಿಗಳು ತಹಶೀಲ್ದಾರ್‌ಗಳಿಗೆ ಸೂಚಿಸಿದರು.

61 ದೌರ್ಜನ್ಯ ಪ್ರಕರಣ ದಾಖಲು: ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಹೇಮಲತಾ ಮಾತನಾಡಿ, ಪ್ರಸಕ್ತ ವಷರ್ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ 61 ದೌರ್ಜನ್ಯ ಪ್ರಕರಣಗಳು ದಾಖಲಾಗಿದ್ದು, ಈ ಪೈಕಿ 45 ಪ್ರಕರಣಗಳಲ್ಲಿ 58.10 ಲಕ್ಷ ರೂ. ಪರಿಹಾರ ಪಾವತಿಸಲಾಗಿದೆ. ಜಿಲ್ಲಾ ಪೊಲೀಸ್ ಅಧೀಕ್ಷಕರ ವ್ಯಾಪ್ತಿಯಲ್ಲಿ 29 ಪ್ರಕರಣಗಳು ದಾಖಲಾಗಿದ್ದು,29 ಲಕ್ಷ ಪರಿಹಾರ ಮಂಜೂರು ಮಾಡಲಾಗಿದೆ. ಬಾಕಿ ಪ್ರಕರಣಗಳ ಪರಿಹಾರ ಪಾವತಿ ಪ್ರಕ್ರಿಯೆ ನಡೆಯುತ್ತಿದೆ ಎಂದು ಅವರು ತಿಳಿಸಿದರು.

ಸಭೆಯಲ್ಲಿ ನಾಗರಿಕ ಹಕ್ಕು ನಿರ್ದೇಶನಾಲಯ ಪೊಲೀಸ್ ಅಧೀಕ್ಷಕ ಸಿ.ಎಸೈಮನ್, ನಗರಾಭಿವೃದ್ಧಿ ಯೋಜನಾನಿರ್ದೇಶಕ ಡಾ.ಜಿ ಸಂತೋಷ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X