Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರಿಗೆ ಸರಕಾರಿ ವಿಶೇಷ ದತ್ತು...

ಮಂಗಳೂರಿಗೆ ಸರಕಾರಿ ವಿಶೇಷ ದತ್ತು ಕೇಂದ್ರ: ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್

ವಾರ್ತಾಭಾರತಿವಾರ್ತಾಭಾರತಿ16 Feb 2024 11:55 PM IST
share
ಮಂಗಳೂರಿಗೆ ಸರಕಾರಿ ವಿಶೇಷ ದತ್ತು ಕೇಂದ್ರ: ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್

ಮಂಗಳೂರು: ರಾಜ್ಯ ಸರಕಾರವು ಸರಕಾರಿ ವಿಶೇಷ ದತ್ತು ಕೇಂದ್ರವನ್ನು ಮಂಜೂರು ಮಾಡಿದೆ. ಅದರಂತೆ ನಗರದಲ್ಲಿ ದತ್ತು ಕೇಂದ್ರ ಸ್ಥಾಪಿಸಲಾಗುವುದು ಎಂದು ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ದ.ಕ.ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ಕಲ್ಯಾಣ ಹಾಗೂ ರಕ್ಷಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ನಗರದ ಬಾಲಕರ ಬಾಲಮಂದಿರದ ಕಟ್ಟಡದಲ್ಲಿ ಈ ಕೇಂದ್ರವನ್ನು ಸ್ಥಾಪಿಸಲು ನಿರ್ಧರಿಸಲಾಗಿದೆ. ಇಲ್ಲಿಗೆ ಸಿಬ್ಬಂದಿಯ ನೇಮಕಾತಿ ಹಾಗೂ ಅಗತ್ಯ ಸೌಲಭ್ಯಗಳನ್ನು ಒದಗಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಮಕ್ಕಳ ದತ್ತು ಪ್ರಕ್ರಿಯೆ ಈ ಕೇಂದ್ರದ ಮೂಲಕ ನಡೆಯಲಿದೆ ಎಂದು ಡಿಸಿ ತಿಳಿಸಿದರು.

ಮಕ್ಕಳ ಸಹಾಯವಾಣಿ 1098 ಸಂಖ್ಯೆಗೆ ಡಿಸೆಂಬರ್‌ನಲ್ಲಿ 40 ಮತ್ತು ಜನವರಿ ತಿಂಗಳಲ್ಲಿ 17 ದೂರುಗಳು ಬಂದಿವೆ. ದೂರು ಬಂದ ಕೂಡಲೇ ಖುದ್ದಾಗಿ ಭೇಟಿ ನೀಡಿ, ಮಾಹಿತಿ ಪಡೆದು ಅಗತ್ಯವಿದ್ದ ಪ್ರಕರಣಗಳಲ್ಲಿ ಮಕ್ಕಳ ಕಲ್ಯಾಣ ಸಮಿತಿಯ ಮುಂದೆ ಹಾಜರುಪಡಿಸಲಾಗುತ್ತದೆ. ನಗರದಲ್ಲಿ ಸ್ಥಾಪಿಸಲಾದ ಬಾಲಕಿಯರ ನೂತನ ಬಾಲಮಂದಿರದಲ್ಲಿ 18 ಬಾಲಕಿಯರು ವಾಸ್ತವ್ಯದಲ್ಲಿದ್ದಾರೆ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಕುಮಾರಕೃಷ್ಣಾ ಮಾಹಿತಿ ನೀಡಿದರು.

ಮಕ್ಕಳ ಪಾಲನಾ ಸಂಸ್ಥೆ ನೋಂದಣಿ ಕಡ್ಡಾಯ:

ಮಕ್ಕಳಿಗೆ ವಾಸ್ತವ್ಯ ಮತ್ತು ಪಾಲನೆ ಮಾಡುವ ಯಾವುದೇ ಸಂಸ್ಥೆಗಳು ಜಿಲ್ಲಾ ಮಕ್ಕಳ ರಕ್ಷಣಾ ಘಟಕದಲ್ಲಿ ನೋಂದಣಿ ಮಾಡುವುದು ಕಡ್ಡಾಯವಾಗಿದೆ. ಶಿಕ್ಷಣಕ್ಕಾಗಿ ಮಕ್ಕಳನ್ನು ಸೇರಿಸುವ ಮಕ್ಕಳ ಪಾಲನಾ ಸಂಸ್ಥೆಗಳೂ ಇದರ ವ್ಯಾಪ್ತಿಗೆ ಬರುತ್ತವೆ. ಜಿಲ್ಲೆಯಲ್ಲಿ 75 ಮಕ್ಕಳ ಪಾಲನಾ ಸಂಸ್ಥೆಗಳಿದ್ದು, ಇದರಲ್ಲಿ 2362 ಮಕ್ಕಳಿದ್ದಾರೆ ಎಂದು ತಿಳಿಸಿದರು.

ಪೋಕ್ಸೋ ಪ್ರಕರಣಗಳಲ್ಲಿ ಸಂತ್ರಸ್ತರಿಗೆ ತ್ವರಿತವಾಗಿ ನ್ಯಾಯ ಸಿಗುವಂತಾಗಲು ಕ್ರಮ ಕೈಗೊಳ್ಳಬೇಕು. ನಗರದ ಜನಸಂದಣಿ ಪ್ರದೇಶಗಳಲ್ಲಿ ಮಕ್ಕಳನ್ನು ಬಳಸಿ ಭಿಕ್ಷಾಟನೆ ನಡೆಸಲಾಗುತ್ತಿದೆ. ಕಾರ್ಯಾಚರಣೆ ಮೂಲಕ ಇದನ್ನು ತಡೆಗಟ್ಟುವಂತೆ ಡಿಸಿ ಪೊಲೀಸ್ ಇಲಾಖೆಗೆ ಸೂಚನೆ ನೀಡಿದರು.

ತಾಲೂಕು ಮಟ್ಟದ ಮಕ್ಕಳ ರಕ್ಷಣಾ ಸಮಿತಿ ಸಭೆಗಳನ್ನು ಪ್ರತೀ 3 ತಿಂಗಳಿಗೊಮ್ಮೆ ಕಡ್ಡಾಯವಾಗಿ ನಡೆಸಬೇಕು. ಗ್ರಾಪಂ ಮಟ್ಟದ ಮಹಿಳೆಯರ ಮತ್ತು ಮಕ್ಕಳ ರಕ್ಷಣಾ ಕಾವಲು ಸಮಿತಿ ಸಭೆಗಳನ್ನು ಪ್ರತೀ ತಿಂಗಳ ಮೊದಲ ವಾರದಲ್ಲಿ ನಡೆಸಲು ಡಿಸಿ ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, ನ್ಯಾಯಾಧೀಶೆ ಶೋಭಾ, ಜಿಪಂ ಸಿಇಒ ಡಾ.ಆನಂದ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಉಸ್ಮಾನ್, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ರೆನ್ನಿ ಡಿಸೋಜ, ಡಾ. ಹಿಲ್ಡಾ ರಾಯಪ್ಪನ್ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X