Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮೂಡುಬಿದಿರೆಯಲ್ಲಿ ನಿರ್ಮಾಣಗೊಳ್ಳಲಿರುವ...

ಮೂಡುಬಿದಿರೆಯಲ್ಲಿ ನಿರ್ಮಾಣಗೊಳ್ಳಲಿರುವ ಯುದ್ಧ ಸ್ಮಾರಕಕ್ಕೆ ರಾಜ್ಯಪಾಲ ಜಸ್ಟಿಸ್ ಅಬ್ದುಲ್ ನಝೀರ್ ಶಿಲಾನ್ಯಾಸ

ವಾರ್ತಾಭಾರತಿವಾರ್ತಾಭಾರತಿ31 Jan 2026 2:34 PM IST
share
ಮೂಡುಬಿದಿರೆಯಲ್ಲಿ ನಿರ್ಮಾಣಗೊಳ್ಳಲಿರುವ ಯುದ್ಧ ಸ್ಮಾರಕಕ್ಕೆ ರಾಜ್ಯಪಾಲ ಜಸ್ಟಿಸ್ ಅಬ್ದುಲ್ ನಝೀರ್ ಶಿಲಾನ್ಯಾಸ

ಮೂಡುಬಿದಿರೆ: ಮಾಜಿ ಸೈನಿಕರ ವೇದಿಕೆ ಮೂಡುಬಿದಿರೆ ತಾಲೂಕು ವತಿಯಿಂದ ಕಡಲಕೆರೆ ಬಳಿ ನೂತನವಾಗಿ ನಿರ್ಮಾಣಗೊಳ್ಳಲಿರುವ ಯುದ್ಧ ಸ್ಮಾರಕಕ್ಕೆ ಆಂಧ್ರಪ್ರದೇಶದ ರಾಜ್ಯಪಾಲ ಜಸ್ಟಿಸ್ ಅಬ್ದುಲ್ ನಝೀರ್ ಅವರು ಶುಕ್ರವಾರ ಸಂಜೆ ಶಿಲಾನ್ಯಾಸ ನೆರವೇರಿಸಿದರು.

ಶಿಲಾನ್ಯಾಸ ಕಾರ್ಯಕ್ರಮದ ನಂತರ ಮಾತನಾಡಿದ ರಾಜ್ಯಪಾಲರು, ಯುದ್ಧ ಸ್ಮಾರಕವು ಹುತಾತ್ಮ ಯೋಧರ ತ್ಯಾಗ–ಬಲಿದಾನ ಮತ್ತು ದೇಶಪ್ರೇಮದ ಪ್ರತೀಕವಾಗಿದೆ. ನಮ್ಮ ನೆಮ್ಮದಿಯ ಬದುಕಿಗಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟಿರುವ ಸೈನಿಕರಿಗೆ ಸಮಾಜ ಸದಾ ಬೆಂಬಲ ನೀಡಬೇಕು. ಮೂಡುಬಿದಿರೆಯಲ್ಲಿ ನಿರ್ಮಾಣಗೊಳ್ಳುತ್ತಿರುವ ಈ ಯುದ್ಧ ಸ್ಮಾರಕಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕೆಂದು ಕರೆ ನೀಡಿದರು.

ಕರಾವಳಿ ಭಾಗದಿಂದ ಭಾರತೀಯ ಸೈನ್ಯಕ್ಕೆ ಸೇರುವ ಯುವಕರ ಸಂಖ್ಯೆ ಇತ್ತೀಚೆಗೆ ಕಡಿಮೆಯಾಗುತ್ತಿರುವುದು ಕಳವಳಕಾರಿ ಸಂಗತಿ. ಈ ಭಾಗದ ಯುವಜನರಲ್ಲಿ ದೇಶಸೇವೆಯ ಮನೋಭಾವವನ್ನು ಬೆಳೆಸಿ, ಸೈನ್ಯಕ್ಕೆ ಸೇರುವಂತೆ ಪ್ರೇರೇಪಿಸುವ ಅಗತ್ಯವಿದೆ ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಅದಾನಿ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ಕಿಶೋರ್ ಆಳ್ವ ಅವರು ಯುದ್ಧ ಸ್ಮಾರಕದ ನೀಲಿನಕ್ಷೆ ಹಾಗೂ ಸ್ಟಾಂಪ್‌ಗಳನ್ನು ಬಿಡುಗಡೆಗೊಳಿಸಿದರು. ತಹಸೀಲ್ದಾರ್ ಶ್ರೀಧರ ಮುಂದಲಮುನಿ ಹಾಗೂ ಪುರಸಭೆಯ ಮುಖ್ಯಾಧಿಕಾರಿ ಇಂದು ಎಂ. ಅವರು ಯುದ್ಧ ಸ್ಮಾರಕಕ್ಕೆ ಸಂಬಂಧಿಸಿದ ದಾಖಲೆಗಳನ್ನು ಮಾಜಿ ಸೈನಿಕರ ಸಂಘಕ್ಕೆ ಹಸ್ತಾಂತರಿಸಿದರು.

ಕಾರ್ಯಕ್ರಮದಲ್ಲಿ ಮಾಜಿ ಸಚಿವ ಅಭಯಚಂದ್ರ ಜೈನ್, ಮಾಜಿ ವಿಧಾನಪರಿಷತ್ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ಆಳ್ವ, ಉದ್ಯಮಿಗಳಾದ ಶ್ರೀಪತಿ ಭಟ್ ಹಾಗೂ ಮುನಿಯಾಲು ಉದಯ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.

ಮಾಜಿ ಸೈನಿಕರ ಸಂಘದ ಅಧ್ಯಕ್ಷ ವಿಜಯ್ ಫೆರ್ನಾಂಡಿಸ್ ಅವರು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿ, ಕಾರ್ಕಳ–ಮೂಡುಬಿದಿರೆ ವ್ಯಾಪ್ತಿಯನ್ನು ಒಳಗೊಂಡ ಸಂಘದಲ್ಲಿ 100ಕ್ಕೂ ಅಧಿಕ ಮಾಜಿ ಸೈನಿಕರು ಸದಸ್ಯರಾಗಿದ್ದು, ಸೈನಿಕರ ನಡುವೆ ಏಕತೆ ಮತ್ತು ಗೌರವವನ್ನು ಬೆಳೆಸುವಲ್ಲಿ ಈ ಯುದ್ಧ ಸ್ಮಾರಕ ಮಹತ್ವದ ಪಾತ್ರ ವಹಿಸಲಿದೆ ಎಂದು ತಿಳಿಸಿದರು.

ಕಾರ್ಯಕ್ರಮವನ್ನು ಉಪನ್ಯಾಸಕ ವೇಣುಗೋಪಾಲ್ ಶೆಟ್ಟಿ ನಿರೂಪಿಸಿದರು.

ಸಭಾ ಕಾರ್ಯಕ್ರಮಕ್ಕೂ ಮುನ್ನ ಅಲಂಗಾರು ಚರ್ಚಿನ ಧರ್ಮಗುರು ಫಾ. ಮೆಲ್ವಿನ್ ನೊರೊನ್ಹಾ ಹಾಗೂ ಪುತ್ತಿಗೆ ನೂರಾನಿ ಮಸೀದಿಯ ಧರ್ಮಗುರು ಮೌಲಾನಾ ಝಿಯಾವುಲ್ಲ್ ಹಕ್ ಆಶೀರ್ವಚನ ನೀಡಿದರು.

ಅಲಂಗಾರು ಮಹಾಲಿಂಗೇಶ್ವರ ದೇವಸ್ಥಾನದ ಅರ್ಚಕ ಸುಬ್ರಹ್ಮಣ್ಯ ಭಟ್ ಅವರು ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X