Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ರಾಜ್ಯದಲ್ಲಿ ಸರಕಾರ ಕೋಮಾ ಸ್ಥಿತಿಗೆ:...

ರಾಜ್ಯದಲ್ಲಿ ಸರಕಾರ ಕೋಮಾ ಸ್ಥಿತಿಗೆ: ಪ್ರತಾಪಸಿಂಹ ನಾಯಕ್ ಆರೋಪ

ವಾರ್ತಾಭಾರತಿವಾರ್ತಾಭಾರತಿ28 Aug 2024 11:13 PM IST
share
ರಾಜ್ಯದಲ್ಲಿ ಸರಕಾರ ಕೋಮಾ ಸ್ಥಿತಿಗೆ: ಪ್ರತಾಪಸಿಂಹ ನಾಯಕ್ ಆರೋಪ

ಮಂಗಳೂರು, ಜು.28: ರಾಜ್ಯದಲ್ಲಿ ಆಡಳಿತ, ಜನಪರ ಕಾರ್ಯಕ್ರಮಗಳು, ಅಭಿವೃದ್ಧಿ ಸಂಪೂರ್ಣವಾಗಿ ಸ್ಥಗಿತಗೊಂಡಿದ್ದು, ಸರಕಾರ ನಿಷ್ಕ್ರಿಯವಾಗಿ ಕೋಮಾ ಸ್ಥಿತಿಗೆ ತಲುಪಿದೆ. ಅವೈಜ್ಞಾನಿಕ ಪಂಚಗ್ಯಾರಂಟಿಗಳ ಹೊರೆ ತಾಳಲಾರದೆ ಬೆಲೆ ಏರಿಕೆ, ತೆರಿಗೆಯ ಬರೆಯನ್ನು ಸರಕಾರ ಜನರ ಮೇಲೆ ಹಾಕುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಆರೋಪಿಸಿದ್ದಾರೆ.

ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾನೂನು ಪರಿಸ್ಥಿತಿ ಸಂಪೂರ್ಣ ಹದಗೆಟ್ಟಿದ್ದು, ಜೈಲುಗಳು ರೆಸಾರ್ಟ್‌ಗಳಾಗಿ ಬದಲಾಗಿದೆ. ಮಹಿಳೆಯರಿಗೆ ಸುರಕ್ಷತೆ ಇಲ್ಲವಾಗಿದೆ. ಮೂರು ತಿಂಗಳಿಂದ ಗೌರವಧನವೇ ಸಿಕಿಲ್ಲ. ಸರಕಾರದಿಂದಲೇ 110 ಕೋ.ರೂ. ನೀರಿನ ಬಿಲ್ ಬಾಕಿಯಿದ್ದು, ಸಾರಿಗೆ ನಿಗಮದಿಂದ 4.5 ಸಾವಿರ ಕೋ.ರೂ. ಕೆಎಸ್ಸಾರ್ಟಿಸಿಗೆ ಬಾಕಿ ಇದೆ. ಪಾಲಿಕೆ ಅನುದಾನಕ್ಕೆ ಕತ್ತರಿ ಹಾಕಲಾಗಿದೆ. ಬರ-ಪ್ರವಾಸ ಸಂತ್ರಸ್ತರಿಗೆ ಪರಿಹಾರ ಇನ್ನೂ ತಲುಪಿಲ್ಲ ಎಂದರು.

ಈ ನಡುವೆ ರಾಜ್ಯ, ಜಿಲ್ಲೆ, ತಾಲೂಕು ಮಟ್ಟದಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿ ರಚಿಸಲಾಗಿದ್ದು, ರಾಜ್ಯಾಧ್ಯಕ್ಷ- ಉಪಾಧ್ಯಕ್ಷರಿಗೆ ಕ್ಯಾಬಿನೆಟ್ ದರ್ಜೆ ಸ್ಥಾನಮಾನ ನೀಡಲಾಗಿದೆ. ಜಿಲ್ಲಾಮಟ್ಟದಲ್ಲಿ ಅಧ್ಯಕ್ಷರಿಗೆ 40 ಸಾವಿರೂ. ರೂ., ತಾಲೂಕು ಅಧ್ಯಕ್ಷರಿಗೆ 25 ಸಾವಿರ ರೂ., ಸದಸ್ಯರಿಗೆ ಇಂತಿಷ್ಟು ಗೌರವಧನ ನಿಗದಿಪಡಿಸಲಾಗಿದ್ದು, ಆ ಮೂಲಕ ಕಾಂಗ್ರೆಸ್ ಕಾರ್ಯಕರ್ತರನ್ನು ಸಾಕುವ ಕೆಲಸ ಸರಕಾರ ಮಾಡುತ್ತಿದೆ. ಸರಕಾರಿ ವ್ಯವಸ್ಥೆಯಲ್ಲಿ ಜಿ.ಪಂ., ತಾ.ಪಂ., ಗ್ರಾಪಂ ಎಂದು ಅನುಷ್ಠಾನಗೊಳಿಸಲು ಬೇಕಾದ ಸ್ಥಳೀಯ ಸಂಸ್ಥೆಗಳಿವೆ. ಹಾಗಿರುವಾಗ ಜನರ ತೆರಿಗೆ ದುಡ್ಡಿನಲ್ಲಿ ಪಕ್ಷದ ಕಾರ್ಯಕರ್ತರಿಗೆ ವ್ಯವಸ್ಥೆ ಮಾಡುವ ಅಗತ್ಯವಿದೆಯೇ ಎಂದು ಪ್ರಶ್ನಿಸಿದರು.

ಒಂದರ ಹಿಂದೆ ಒಂದರಂತೆ ರಾಜ್ಯ ಸರಕಾರದ ಹಗರಣಗಳ ಬೆಳಕಿಗೆ ಬರುತ್ತಿದ್ದು, ಮುಖ್ಯಮಂತ್ರಿಗಳು ಮುಡಾ ಹಗರಣ ವಿಚಾರವಾಗಿ ತಮ್ಮ ಕುರ್ಚಿ ಉಳಿಸಿಕೊಳ್ಳುವಲ್ಲಿ ತಲ್ಲೀನರಾಗಿದ್ದಾರೆ. ಈ ಹಗರಣ ಈಗ ನಿರ್ಣಾಯಕ ಹಂತಕ್ಕೆ ಬಂದಿದ್ದು, ಮುಖ್ಯಮಂತ್ರಿ ಸ್ಥಾನದ ಅಸ್ಥಿರತೆ ಅವರ ನಡವಳಿಕೆಯಿಂದ ವ್ಯಕ್ತವಾಗುತ್ತಿದೆ. ಸಚಿವರು, ಶಾಸಕರು ಸಿಎಂಗೆ ಬೆಂಬಲ ನೀಡುವ ಹೆಸರಿನಲ್ಲಿ ನಾಟಕವಾಡುತ್ತಿದ್ದಾರೆ. ಮುಂದಿನ ಸಿಎಂ ಯಾರಾಗಬೇಕು ಎನ್ನುವ ಪ್ರಯತ್ನ ತೆರೆಯ ಹಿಂದೆ ನಡಯುತ್ತಿದೆ ಎಂದು ಆರೋಪಿಸಿದರು.

ಜಿಲ್ಲಾ ಉಪಾಧ್ಯಕ್ಷ ಪ್ರಸನ್ನ ಕುಮಾರ್, ಖಜಾಂಚಿ ಸಂಜಯ್ ಪ್ರಭು, ಮುಖಂಡರಾದ ವಿಕಾಸ್ ಪುತ್ತೂರು, ದೇವದಾಸ್ ಶೆಟ್ಟಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X