Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ರಾಜ್ಯಾದ್ಯಂತ ಕಂಬಳ ನಡೆಸಲು ಹಸಿರು...

ರಾಜ್ಯಾದ್ಯಂತ ಕಂಬಳ ನಡೆಸಲು ಹಸಿರು ನಿಶಾನೆ: ಬೆಳಪು ದೇವಿಪ್ರಸಾದ್ ಶೆಟ್ಟಿ

ವಾರ್ತಾಭಾರತಿವಾರ್ತಾಭಾರತಿ5 Jan 2026 8:38 PM IST
share
ರಾಜ್ಯಾದ್ಯಂತ ಕಂಬಳ ನಡೆಸಲು ಹಸಿರು ನಿಶಾನೆ: ಬೆಳಪು ದೇವಿಪ್ರಸಾದ್ ಶೆಟ್ಟಿ

ಮಂಗಳೂರು, ಜ.5: ರಾಜ್ಯ ಸರಕಾರವು ಕಂಬಳಕ್ಕೆ ಕ್ರೀಡಾ ಸ್ಥಾನಮಾನ ನೀಡಿದೆ. ಹೈಕೋರ್ಟ್ ಕೂಡಾ ರಾಜ್ಯಾದ್ಯಂತ ಕಂಬಳ ನಡೆಸಲು ಹಸಿರು ನಿಶಾನೆ ನೀಡಿದೆ. ಹಾಗಾಗಿ ಮುಂದಿನ ಋತುವಿನಿಂದ ರಾಜ್ಯಾದ್ಯಂತ ಕಂಬಳ ಆಯೋಜಿಸಲು ಅವಕಾಶ ಸಿಗಲಿದೆ ಎಂದು ರಾಜ್ಯ ಕಂಬಳ ಅ ಸೋಸಿಯೇಶನ್ ಅಧ್ಯಕ್ಷ ಬೆಳಪು ದೇವಿಪ್ರಸಾದ್ ಶೆಟ್ಟಿ ಹೇಳಿದರು.

ಕಂಬಳ ಅಸೋಸಿಯೇಶನ್ ಮತ್ತು ದ.ಕ.ಜಿಲ್ಲಾ ಕಂಬಳ ಸಮಿತಿಯ ವತಿಯಿಂದ ನಗರದ ಖಾಸಗಿ ಹೊಟೇಲ್ ಸಭಾಂಗಣದಲ್ಲಿ ಸೋಮವಾರ ನಡೆದ ಕಂಬಳ ಸಮಿತಿ, ಕಂಬಳ ವ್ಯವಸ್ಥಾಪಕರು, ಕಂಬಳ ಸಂಘಟಕರು, ಕೋಣಗಳ ಯಜಮಾನರುಗಳ ಸಮಾಲೋಚನಾ ಸಭೆಯಲ್ಲಿ ಅವರು ಮಾತನಾಡಿದರು.

ಈ ಹಿಂದೆ ಬೆಂಗಳೂರಿನಲ್ಲಿ ಕಂಬಳ ಆಯೋಜಿಸಿದಾಗ ಮೈಸೂರು, ಶಿವಮೊಗ್ಗದಲ್ಲಿ ಕಂಬಳ ನಡೆಸಬೇಕು ಎಂಬ ಬೇಡಿಕೆಯಿತ್ತು. ಇದೀಗ ಎಲ್ಲ ಅಡೆತಡೆಗಳು ದೂರವಾಗಿದೆ. ರಾಜ್ಯಾದ್ಯಂತ ಕಂಬಳ ನಡೆಸಬಹುದಾಗಿದೆ. ಪಿಲಿಕುಳ ಕಂಬಳದ ಬಗ್ಗೆ ಶೀಘ್ರದಲ್ಲೇ ಹೈಕೋರ್ಟ್ ತೀರ್ಪು ನೀಡಲಿದೆ ಎಂದ ದೇವಿಪ್ರಸಾದ್ ಶೆಟ್ಟಿ ಕಂಬಳ ಕ್ರೀಡೆಯಲ್ಲಿ ಸಣ್ಣಪುಟ್ಟ ವ್ಯತ್ಯಾಸಗಳು ಬಂದಾಗ ಎಲ್ಲರೂ ಒಂದೇ ಕುಟುಂಬ ಎಂಬ ಭಾವನೆಯಲ್ಲಿ ಸರಿ ಮಾಡಿಕೊಳ್ಳುತ್ತೇವೆ. ಕಂಬಳದ ಇತಿಹಾಸದಲ್ಲಿ ಇದೇನು ಹೊಸತಲ್ಲ. ಆದರೆ ಸಾಮಾಜಿಕ ಜಾಲತಾಣದಲ್ಲಿ ಇದನ್ನೇ ವೈಭವೀಕರಿಸಲಾ ಗುತ್ತಿದೆ. ಮಂಗಳೂರು ಕಂಬಳದಲ್ಲಿ ಇಂತಹದೇ ಘಟನೆ ನಡೆದಿದ್ದು, ಅದನ್ನು ನಾವು ಮಾತುಕತೆ ಮೂಲಕ ಬಗೆಹರಿಸಿದ್ದೇವೆ ಎಂದರು.

ಮುಂದಿನ ದಿನಗಳಲ್ಲಿ ಕಂಬಳದಲ್ಲಿ ಶಿಸ್ತುಪಾಲನೆ ಮಾಡಲು ಸೂಚನೆ ನೀಡಲಾಗಿದೆ, ವೈಯಕ್ತಿಕ ನಿಂದನೆ, ಟೀಕೆ, ಘೋಷಣೆಗಳಿಗೆ ಮುಂದಿನ ಕಂಬಳಗಳಲ್ಲಿ ಅವಕಾಶವಿಲ್ಲ. ಪಶು ಸಂಗೋಪನೆ ಅಧಿಕಾರಿಗಳು ಕಂಬಳದ ಬಗ್ಗೆ ವಹಿಸಲಿದ್ದಾರೆ. ಈ ಬಾರಿ 25 ಕಂಬಳಕ್ಕೆ ತಲಾ 5 ಲಕ್ಷ ರೂ. ಅನುದಾನ ನೀಡುವುದಾಗಿ ಸರಕಾರ ಭರವಸೆ ನೀಡಿದೆ. ಶೀಘ್ರದಲ್ಲೇ ಕಂಬಳ ಓಟಗಾರರ ಸಹಿತ ಎಲ್ಲರಿಗೂ ಕಾರ್ಮಿಕ ಕಾರ್ಡ್ ನೀಡಲಾಗುವುದು. ಕಂಬಳ ಅಸೋಸಿಯೇಶನ್‌ನಿಂದ ಮುಂದಿನ ದಿನಗಳಲ್ಲಿ ರಾಜ್ಯೋತ್ಸವ ಪ್ರಶಸ್ತಿ, ಕ್ರೀಡಾ ರತ್ನ ಪ್ರಶಸ್ತಿ ಶಿಫಾರಸು ಮಾಡಲಾಗುವುದು ಎಂದರು.

ಸಭೆಯಲ್ಲಿ ಕಂಬಳ ಅಸೋಸಿಯೇಶನ್ ಕಾರ್ಯದರ್ಶಿ ವಿಜಯ್ ಕುಮಾರ್ ಕಂಗಿನಮನೆ, ಕಾರ್ಯಕಾರಿ ಸಮಿತಿ ಸದಸ್ಯರಾದ ಬಾರಕೂರು ಶಾಂತರಾಮ ಶೆಟ್ಟಿ, ಶ್ರೀಕಾಂತ್ ಭಟ್ ನಂದಳಿಕೆ, ರೋಹಿತ್ ಹೆಗ್ಡೆ ಎರ್ಮಾಳ್, ಶಿಸ್ತುಪಾಲನಾ ಸಮಿತಿ ಅಧ್ಯಕ್ಷ ಭಾಸ್ಕರ್ ಕೋಟ್ಯಾನ್, ಕಂಬಳ ಸಮಿತಿ ಮಾಜಿ ಅಧ್ಯಕ್ಷ ಪಿ.ಆರ್.ಶೆಟ್ಟಿ, ಸಾಂಪ್ರದಾಯಿಕ ಕಂಬಳ ಸಮಿತಿ ಅಧ್ಯಕ್ಷ ಮಂಜು ಪೂಜಾರಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X