Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಜಿಎಸ್‌ಟಿ ಇಳಿಕೆ ಅಭಿಯಾನ ಬಿಜೆಪಿಯ ನಾಟಕ;...

ಜಿಎಸ್‌ಟಿ ಇಳಿಕೆ ಅಭಿಯಾನ ಬಿಜೆಪಿಯ ನಾಟಕ; 8 ವರ್ಷಗಳಲ್ಲಿ ಕೊಳ್ಳೆಹೊಡೆದ ಹಣ ಎಲ್ಲಿದೆ: ಮಂಜುನಾಥ ಭಂಡಾರಿ ಪ್ರಶ್ನೆ

ವಾರ್ತಾಭಾರತಿವಾರ್ತಾಭಾರತಿ25 Sept 2025 2:43 PM IST
share
ಜಿಎಸ್‌ಟಿ ಇಳಿಕೆ ಅಭಿಯಾನ ಬಿಜೆಪಿಯ ನಾಟಕ; 8 ವರ್ಷಗಳಲ್ಲಿ ಕೊಳ್ಳೆಹೊಡೆದ ಹಣ ಎಲ್ಲಿದೆ: ಮಂಜುನಾಥ ಭಂಡಾರಿ ಪ್ರಶ್ನೆ

ಮಂಗಳೂರು, ಸೆ.25: ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಎಂಟು ವರ್ಷಗಳ ಹಿಂದೆ ಜಾರಿಗೆ ತಂದಿದ್ದ ಅವೈಜ್ಞಾನಿಕ ಜಿಎಸ್‌ಟಿಯನ್ನು ಇದೀಗ ಇಳಿಕೆ ಮಾಡಿರುವ ಬಗ್ಗೆ ಅಭಿಯಾನ ನಡೆಸುತ್ತಿರುವುದು ಬಿಜೆಪಿಯ ಬಿಹಾರ ಚುನಾವಣೆಗಾಗಿನ ಗಿಮಿಕ್ ಎಂದು ವಿಧಾನ ಪರಿಷತ್ ಸದಸ್ಯ ಡಾ. ಮಂಜುನಾಥ ಭಂಡಾರಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಗುರುವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕಳೆದ 8 ವರ್ಷಗಳ ಅವಧಿಯಲ್ಲಿ ಭಾರೀ ಪ್ರಮಾಣದ ಜಿಎಸ್‌ಟಿ ಮೂಲಕ ದೇಶದ ಶೇ. 70ರಷ್ಟು ಬಡವರಿಂದ ಜಿಎಸ್‌ಟಿ ಹೆಸರಿನಲ್ಲಿ ಕೊಳ್ಳೆ ಹೊಡೆದಿರುವ ಹಣವನ್ನು ಏನು ಮಾಡಲಾಗಿದೆ ? ಅವೈಜ್ಞಾನಿಕ ಜಿಎಸ್‌ಟಿ ಜಾರಿಗೆ ಆ ಸಂದರ್ಭ ಸಲಹೆ ನೀಡಿದ್ದು ಯಾರು ಎಂದು ಪ್ರಶ್ನಿಸಿದರು.

2017ರಲ್ಲಿ ಜಿಎಸ್‌ಟಿ ಜಾರಿಗೊಳಿಸಿದಾಗ ಇಡೀ ವಿಶ್ವದಲ್ಲಿಯೇ ಇಂತಹ ಜಿಎಸ್‌ಟಿಯನ್ನು ನಾವುಜಾರಿಗೆ ತಂದಿದ್ದು ಎಂದು ಸಂಭ್ರಮಿಸಿದವರು ಇಂದು ಇಳಿಕೆಗೂ ಅಭಿಯಾನ ನಡೆಸುತ್ತಿರುವುದು ನಾಟಕ ಎಂಬುದು ಸ್ಪಷ್ಟವಾಗುತ್ತಿದೆ. ಆರ್ಥಿಕ ತಜ್ಞ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ತಮ್ಮ ಅವಧಿಯಲ್ಲಿ ಸರಳೀಕೃತ ಜಿಎಸ್‌ಟಿ ತರಬೇಕು ಎಂದಾಗ ಅದನ್ನು ಬಿಜೆಪಿ ವಿರೋಧಿಸಿತ್ತು. 2014ರ ಚುನಾವಣೆಯಲ್ಲಿ ಬಿಜೆಪಿಯ ಪ್ರಣಾಳಿಕೆಯಲ್ಲಿಯೂ ಬಿಜೆಪಿ ಜಿಎಸ್‌ಟಿಯನ್ನು ಸಂಪೂರ್ಣವಾಗಿ ವಿರೋಧಿಸಿತ್ತು. ಬಳಿಕ 2017ರಲ್ಲಿ ಜಿಎಸ್‌ಟಿ ಜಾರಿಗೆ ಬಂದಾಗ ಕಾಂಗ್ರೆಸ್ ಇದು ಆರ್ಥಿಕ ತಜ್ಞ ಮನಮೋಹನ್ ಸಿಂಗ್ ಅವರು ಉದ್ದೇಶಿಸಿದ್ದ ಜಿಎಸ್‌ಟಿ ಅಲ್ಲ. ಇದು ಬಡವರ ಮೇಲಿನ ಪ್ರಹಾರ. ಗಬ್ಬರ್ ಸಿಂಗ್ ಟ್ಯಾಕ್ಸ್ ಎಂಬುದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಕಳೆದ ಎಂಟು ವರ್ಷಗಳಿಂದ ರಾಷ್ಟ್ರದ ಉದ್ದಗಲದ್ಲಿ ಹೇಳುತ್ತಾ ಬಂದರು. ವಿಶ್ವದ ವಿಶ್ವವಿದ್ಯಾನಿಲಯಗಳಲ್ಲಿ ಇದರ ಬಗ್ಗೆ ವಿಶ್ಲೇಷಿಸಿದಾಗ ಅವರನ್ನು ಭಾರತ ವಿರೋಧಿ ಎನ್ನಲಾಯಿತು. ಆದರೆ ಇದೀಗ ಇಳಿಕೆ ಮಾಡಿ ಸಂಭ್ರಮಿಸುವ ಬಿಜೆಪಿಗೆ ಇದು ನಾಚಿಕೆಗೇಡವಲ್ಲವೇ, ಈ ಬಗ್ಗೆ ಬಿಜೆಪಿಯವರು ಆತ್ಮವಿಮರ್ಶೆ ಮಾಡಿಕೊಳ್ಳಲಿ ಎಂದವರು ಹೇಳಿದರು.

ನನ್ನ ಕಾಲೇಜಿನ ಹಾಸ್ಟೆಲ್‌ಗಾಗಿ ಜಿಎಸ್‌ಟಿಯಡಿ 2 ಕೋಟಿ ರೂ. ಪಾವತಿಸಲಾಗಿದೆ. ಈಗ ಅದನ್ನು ಕೇಂದ್ರ ಸರಕಾರ ನಮಗೆ ಮರು ಪಾವತಿಸಲಿದೆಯೇ ಎಂದು ಪ್ರಶ್ನಿಸಿದ ಅವರು, ಮೇಕ್ ಇನ್ ಇಂಡಿಯಾ ಹೆಸರಿನಲ್ಲಿ ನಡೆಸಲಾಗುವ ಇಲೆಕ್ಟ್ರಾನಿಕ್ಸ್ ಸೇರಿದಂತೆ ಇತರ ಕಂಪನಿಗಳು ಶೇ. 80ರಷ್ಟು ಕಚ್ಚಾ ವಸ್ತುಗಳನ್ನು ಚೀನಾದಿಂದ ಆಮದು ಮಾಡಿಕೊಳ್ಳುತ್ತಿವೆ. ಹಾಗಾದರೆ 12 ವರ್ಷಗಳಲ್ಲಿ ಮೇಕ್ ಇನ್ ಇಂಡಿಯಾದಡಿ ಮಾಡಿದ್ದು ಏನು ಎಂಬ ಬಗ್ಗೆ ಉತ್ತರ ಸಿಗಬೇಕಾಗಿದೆ ಎಂದರು.

ಜಿಎಸ್‌ಟಿ ಇಳಿಕೆ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಸರಕಾರದ ತೆರಿಗೆ ಎಂದು ಜಿಎಸ್‌ಟಿಯ ಇಳಿಕೆ ಬಗ್ಗೆ ಬಿಜೆಪಿಯ ಅಂಧ ಭಕ್ತರು ಪ್ರಚಾರ ಮಾಡುತ್ತಿದ್ದಾರೆ. ಇದಕ್ಕೇ ನಾವು ವಾಟ್ಸಾಪ್ ಯುನಿವರ್ಸಿಟಿಯ ಅಂಧಭಕ್ತರು ಎನ್ನುವುದು. 2017ರಲ್ಲಿ ಯಾರ ಸರಕಾರ ಜಿಎಸ್‌ಟಿ ಜಾರಿಗೆ ತಂದಿದ್ದು ಎಂಬುದೇ ಅವರಿಗೆ ಅರಿವಿಲ್ಲ ಎಂದವರು ಹೇಳಿದರು.

ಕಟೀಲು ದುರ್ಗಾಪರಮೇಶ್ವರಿ ಕ್ಷೇತ್ರದಲ್ಲಿ ಸೇವಾದರ ಏರಿಕೆ ಬಗ್ಗೆ ಮುಖ್ಯಮಂತ್ರಿ ಸಿದ್ಧರಾಮಯ್ಯರನ್ನು ಟ್ಯಾಗ್ ಮಾಡಿ ಅಪಪ್ರಚಾರ ಮಾಡಲಾಗುತ್ತಿದೆ. ಆದರೆ ಈ ಸೇವಾದರ ಏರಿಕೆಗೂ ಸರಕಾರಕ್ಕೂ ಯಾವುದೇ ಸಂಬಂಧವಿಲ್ಲ. ಆಡಳಿತ ಮಂಡಳಿ 14 ವರ್ಷಗಳ ಬಳಿಕ ಹೆಚ್ಚಳ ಮಾಡಿರುವುದಾಗಿ ಹೇಳಿದೆ. ಮತಗಳ್ಳತನದ ಕಾಂಗ್ರೆಸ್ ಅಭಿಯಾನದ ಬಗ್ಗೆಯೂ ಸ್ವಾಯತ್ತ ಸಂಸ್ಥೆಯಾದ ಚುನಾವಣಾ ಆಯೋಗ ಕಾಂಗ್ರೆಸ್‌ನಿಂದ ದಾಖಲೆ ಕೇಳುತ್ತದೆ. ಆದರೆ ಬಿಜೆಪಿಯ ಜನಪ್ರತಿನಿಧಿಯೇ ಈ ಬಗ್ಗೆ ಆರೋಪ ಮಾಡಿರುವಾಗ ಅವರಿಂದ ದಾಖಲೆ ಕೇಳುತ್ತಿಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸ್ವಾಯತ್ತ ಸಂಸ್ಥೆಗಳನ್ನು ತಮ್ಮ ಅಧೀನದಲ್ಲಿರಿಸಿ ಆಡಳಿತ ನಡೆಸುವ ಬಿಜೆಪಿಯ ಕುರಿತಂತೆ ಸಾರ್ವಜನಿಕರು ಎಚ್ಚೆತ್ತುಕೊಳ್ಳಬೇಕು. ಅಪ್ರಚಾಚರಗಳ ಬಗ್ಗೆ ಗಮನ ಹರಿಸಬೇಕು. ಪ್ರಜಾಪ್ರಭುತ್ವವನ್ನು ಉಳಿಸಿಕೊಳ್ಳಬೇಕು ಎಂದು ಅವರು ಹೇಳಿದರು.

ಗೋಷ್ಟಿಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಮಹಿಳಾ ಘಟಕದ ನಗರ ವಿಭಾಗದ ಅಧ್ಯಕ್ಷೆ ಅಪ್ಪಿ, ಮುಖಂಡರಾದ ಸುಭಾಷ್ ಕೊಲ್ನಾಡ್, ಶಾಹುಲ್ ಹಮೀದ್, ಸುಹಾನ್ ಆಳ್ವ, ಎಂ.ಎಸ್. ಮುಹಮ್ಮದ್, ನವಾಝ್, ಚಿತ್ತರಂಜನ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X