Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಗುಂಡ್ಯ: ಕಸ್ತೂರಿ ರಂಗನ್ ವರದಿ ವಿರುದ್ಧ...

ಗುಂಡ್ಯ: ಕಸ್ತೂರಿ ರಂಗನ್ ವರದಿ ವಿರುದ್ಧ ಪ್ರತಿಭಟನೆ, ರಾಷ್ಟ್ರೀಯ ಹೆದ್ದಾರಿ ತಡೆ

ವಾರ್ತಾಭಾರತಿವಾರ್ತಾಭಾರತಿ15 Nov 2024 3:44 PM IST
share
ಗುಂಡ್ಯ: ಕಸ್ತೂರಿ ರಂಗನ್ ವರದಿ ವಿರುದ್ಧ ಪ್ರತಿಭಟನೆ, ರಾಷ್ಟ್ರೀಯ ಹೆದ್ದಾರಿ ತಡೆ

ಕಡಬ, ನ.15. ಕಸ್ತೂರಿ ರಂಗನ್ ವರದಿ ವಿರುದ್ದ ಶಿರಾಡಿ ಗ್ರಾಮದ ಗುಂಡ್ಯದಲ್ಲಿ ಶುಕ್ರವಾರ ಬೃಹತ್ ಪ್ರತಿಭಟನಾ ಸಭೆ ನಡೆಯತು. ಈ ವೇಳೆ ಮನವಿ ಸ್ವೀಕರಿಸಲು ಪುತ್ತೂರು ಸಹಾಯಕ ಆಯುಕ್ತರು ಆಗಮಿಸಬೇಕೆಂದು ಪಟ್ಟು ಹಿಡಿದ ಪ್ರತಿಭಟನಾಕಾರರು ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ರಸ್ತೆ ತಡೆ ನಡೆಸಿದರು.

ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಮಲೆನಾಡು ಜನಹಿತ ರಕ್ಷಣಾ ವೇದಿಕೆ ಸಂಚಾಲಕ ಕಿಶೋರ್ ಶಿರಾಡಿ, ರೈತರೆಂದರೆ ಹೆಬ್ಬೆಟ್ಟಲ್ಲ ನೆನಪಿರಲಿ, ವಿವಿಧ ಕ್ಷೇತ್ರಗಳಲ್ಲಿ ವಿದ್ಯಾಭ್ಯಾಸ ಪಡೆದ ವಿದ್ಯಾವಂತರು ಇದ್ದಾರೆ. ನಾವು ಪ್ರತಿಭಟನೆಗೆ ಮಾನಸಿಕವಾಗಿ ಸಿದ್ದರಾಗಿಯೇ ಬಂದಿದ್ದೇವೆ, ಯಾವುದೇ ಕೇಸಿಗೆ ನಾವು ಹೆದರುವುದಿಲ್ಲ. ಇಲ್ಲಿನ ಭ್ರಷ್ಟ ಅಧಿಕಾರಿಗಳಿಗೆ ಮನವಿ ಕೊಡುವುದಿಲ್ಲ, ಅಕ್ರಮ-ಸಕ್ರಮಕ್ಕೆ ಹಣ ಪಡೆದ ಬಗ್ಗೆ ವೀಡಿಯೋ ಸಹಿತ ಸಾಕ್ಷಿ ಇದೆ, ಕಂದಾಯ ಇಲಾಖೆಯವರು ಅಕ್ರಮ ಮಾಡಿರುವುದಕ್ಕೆ ದಾಖಲೆ ಇದೆ. ಕಂದಾಯ ಮತ್ತು ಅರಣ್ಯ ಇಲಾಖೆಯ ವಿರುದ್ಧವೂ ಹೋರಾಟ ಮಾಡಲಾಗುವುದು ಎಂದರು.

ನಮ್ಮ ಬೇಡಿಕೆಯನ್ನು ಪರಿಗಣಿಸದಿದ್ದಲ್ಲಿ ಅಗತ್ಯ ಬಂದರೆ ಬೆಂಗಳೂರು ಚಲೋ ಗೆ ಸಿದ್ದರಿದ್ದೇವೆ ಎಂದ ಕಿಶೋರ್ ಶಿರಾಡಿ. ಕೇಂದ್ರ ಮತ್ತು ರಾಜ್ಯ ಸರ್ಕಾರದ ನಾಯಕರು ಮುಂದೆ ನಿಂತು ಈ ಸಮಸ್ಯೆ ಬಗೆಹರಿಸಬೇಕು ಎಂದು ಒತ್ತಾಯಿಸಿದರು.

ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಸಭೆಯನ್ನು ಉದ್ಘಾಟಿಸಿದರು. ಸ್ವಾತಂತ್ರ್ಯ ಹೋರಾಟಗಾರ ಸುಭಾಷ್ ಚಂದ್ರ ಬೋಸ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು. ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಸಕಲೇಶಪುರ ಶಾಸಕ ಸಿಮೆಂಟ್ ಮಂಜು, ಮಾಜಿ ಶಾಸಕ ಸಂಜೀವ ಮಠಂದೂರು, ಧರ್ಮಗುರುಗಳಾದ ರೆ.ಫಾ.ಆದರ್ಶ ಜೋಸೆಫ್, ರೆ.ಫಾ.ಸಿಬಿ, ಜಿಪಂ ಮಾಜಿ ಸದಸ್ಯರಾದ ಕೃಷ್ಣ ಶೆಟ್ಟಿ ಕಡಬ, ಪಿ.ಪಿ. ವರ್ಗೀಸ್, ಸರ್ವೋತ್ತಮ ಗೌಡ, ಆಶಾ ತಿಮ್ಮಪ್ಪ ಗೌಡ, ಹರೀಶ್ ಕಂಜಿಪಿಲಿ, ವೆಂಕಟ್ ದಂಬೆಕೋಡಿ, ಪ್ರಮುಖರಾದ ಎ.ವಿ. ತೀರ್ಥರಾಮ, ವೆಂಕಪ್ಪ ಗೌಡ ಸುಳ್ಯ, ವೆಂಕಟ್ ವಳಲಂಬೆ, ಸುಧೀರ್ ಕುಮಾರ್ ಶೆಟ್ಟಿ, ಮುಹಮ್ಮದ್ ಅಲಿ ಹೊಸಮಠ ಮತ್ತಿತರರು ವೇದಿಕೆಯಲ್ಲಿದ್ದರು.

ಸಯ್ಯದ್ ಮೀರಾ ಸಾಹೇಬ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಡಬ, ಸುಳ್ಯ, ಬೆಳ್ತಂಗಡಿ ತಾಲೂಕಿನ ಕಸ್ತೂರಿ ರಂಗನ್ ವರದಿ ಬಾಧಿತ ಗ್ರಾಮಗಳ ಸಾವಿರಾರು ಗ್ರಾಮಸ್ಥರು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X