ಗುರುವಾಯನಕೆರೆ: 'ಸರಕಾರದ ನಡೆ ಕಾರ್ಯಕರ್ತರ ಕಡೆ' ಸಮಾವೇಶದ ಬ್ಯಾನರ್ ಗಳಿಗೆ ಹಾನಿ

ಬೆಳ್ತಂಗಡಿ: ಗುರುವಾಯನಕೆರೆಯ ಶಕ್ತಿನಗರದಲ್ಲಿ ಇಂದು(ಎ.20) ನಡೆಯಲಿರುವ 'ಸರಕಾರದ ನಡೆ ಕಾರ್ಯಕರ್ತರ ಕಡೆ' ಎಂಬ ಕಾಂಗ್ರೆಸ್ ಪಕ್ಷದ ಶಕ್ತಿ ಪ್ರದರ್ಶನ ಸಮಾವೇಶಕ್ಕೆ ಸಂಬಂಧಿಸಿ ಹಾಕಲಾಗಿದ್ದ ಹತ್ತಾರು ಬ್ಯಾನರ್ ಗಳನ್ನು ಕಿಡಿಗೇಡಿಗಳು ಹರಿದು ಹಾಕಿರುವ ಘಟನೆ ಶನಿವಾರ ರಾತ್ರಿಯ ವೇಳೆ ಸಂಭವಿಸಿದೆ.
ಸಮಾವೇಶದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ , ಸಚಿವರಾದ ಚಲುವರಾಯಸ್ವಾಮಿ, ದಿನೇಶ್ ಗುಂಡೂರಾವ್ ಸೇರಿದಂತೆ ರಾಜ್ಯ ಮಟ್ಟದ ಹಲವಾರು ನಾಯಕರು ಭಾಗವಹಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಕಳೆದ ಕೆಲ ದಿನಗಳಿಂದ ತಾಲುಕಿನಾದ್ಯಂತ ವ್ಯಾಪಕ ಪ್ರಮಾಣದ ಪ್ರಚಾರ ಬ್ಯಾನರ್ , ಪಕ್ಷದ ಧ್ವಜಗಳು ಸೇರಿದಂತೆ ಬಂಟಿಂಗ್ಸ್ ಗಳನ್ನು ಅಳವಡಿಸಲಾಗಿತ್ತು.
ಶನಿವಾರ ರಾತ್ರಿ ಗುರುವಾಯನಕೆರೆ ಪ್ರದೇಶದಲ್ಲಿ ಅಳವಡಿಸಲಾಗಿದ್ದ ಹತ್ತಾರು ಬ್ಯಾನರ್ ಗಳನ್ನು ಕಿಡಿಗೇಡಿಗಳು ಹರಿದು ಹಾಕಿರುವುದು ಕಂಡು ಬಂದಿದೆ.
Next Story







