Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಾನಸ ಪುನರ್ವಸತಿ ವಿಶೇಷ ಶಾಲೆಗೆ ದಿನಸಿ...

ಮಾನಸ ಪುನರ್ವಸತಿ ವಿಶೇಷ ಶಾಲೆಗೆ ದಿನಸಿ ವಸ್ತುಗಳ ಹಸ್ತಾಂತರ

ವಾರ್ತಾಭಾರತಿವಾರ್ತಾಭಾರತಿ10 Sept 2024 10:53 PM IST
share
ಮಾನಸ ಪುನರ್ವಸತಿ ವಿಶೇಷ ಶಾಲೆಗೆ ದಿನಸಿ ವಸ್ತುಗಳ ಹಸ್ತಾಂತರ

ಕಾರ್ಕಳ : ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಲಿಮಿಟೆಡ್ ಎರಡನೇ ವರ್ಷಕ್ಕೆ ಪಾದಾರ್ಪಣೆಗೊಂಡ ಹಿನ್ನೆಲೆಯಲ್ಲಿ ಶಿರ್ವ ಪಾಂಬೂರಿನ ಮಾನಸ ವಿಶೇಷ ಮಕ್ಕಳ ಶಾಲೆಗೆ ದಿನಸಿ ಸಾಮಗ್ರಿಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಸಂಸ್ಥಾಪಕರು ಮತ್ತು ವ್ಯವಸ್ಥಾಪಕ ನಿರ್ದೇಶಕರಾದ ಜೀವನ್ ಡಿಸೋಜ ರವರು ಮಾನಸ ಶಾಲೆಯ ಅಧ್ಯಕ್ಷರಿಗೆ ದಿನಸಿ ವಸ್ತುಗಳನ್ನು ಹಸ್ತಾಂತರಿಸಿ, ಇಂತಹ ಸಾಮಾಜಿಕ ಕಾರ್ಯಕ್ರಮ ಹಮ್ಮಿ ಕೊಳ್ಳಲು ಮೂಲ ಪ್ರೇರಣೆ ಮತ್ತು ಮುಖ್ಯ ಉದ್ದೇಶ ದಿ. ಫಾ. ವಲೇರಿಯನ್ ಮೆಂಡೋನ್ಸಾ. ಸಂಸ್ಥೆಯ ಉದ್ಘಾಟನಾ ಸಮಾರಂಭದಲ್ಲಿ ಸಮಾಜಮುಖಿ ಚಿಂತನೆ ಮತ್ತು ಕಾರ್ಯಕ್ರಮದ ಬಗ್ಗೆ ತಿಳಿ ಹೇಳಿ ನಮ್ಮನ್ನು ಪ್ರೇರೇಪಿಸಿದ್ದರು. ಇವರ ಆಗಲುವಿಕೆ ನನಗೆ ತುಂಬಲಾಗದ ನಷ್ಟವನ್ನು ಮಾಡಿದೆ. ಅದರ ಸಲುವಾಗಿ ಈ ಕಾರ್ಯಕ್ರಮದ ಎಲ್ಲ ಶ್ರೇಯಸ್ಸು ದಿ. ಫಾ. ವಲೇರಿಯನ್ ಮೆಂಡೋನ್ಕಾ ಇವರಿಗೆ ಅರ್ಪಿಸುತ್ತೆನೆ. ಅವರಿಗೆ ಗೌರವ ಸಮರ್ಪಣೆಯಿಂದ ನಾವು ಇಂದು ಈ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ ಎಂದು ತಿಳಿಸಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಸ್ಥಳೀಯ ಹೋಲಿ ಕ್ರಾಸ್ ದೇವಾಲಯ ಪಾಂಬೂರು ಇಲ್ಲಿಯ ಪ್ರಧಾನ ಧರ್ಮ ಗುರು ಗಳಾದ ಫಾ. ಹೆನ್ರಿ ಮಸ್ಕರೇನ್ಹಸ್ ಇವರು ಮಾತನಾಡಿ, ಸಂಸ್ಥೆಯು ಮೊದಲ ವರ್ಷದಲ್ಲಿ ಸಾಮಾಜಿಕ ಸೇವೆಗೆ ಸಿದ್ಧರಾ ಗಿರುವುದು ಸಂತಸದ ಸಂಗತಿ ಮತ್ತು ಇಂತಹ ದೇವರ ಮಕ್ಕಳ ಕಲ್ಯಾಣ ಅಭಿವೃದ್ಧಿಯಿಂದ ಸಂಸ್ಥೆಗೆ ಓಳಿತಾಗಲಿ ಎಂದು ಶುಭ ಹಾರೈಸಿದರು.

ರೋಟರಿ ಕ್ಲಬ್ ಕಾರವಾರ ಅಧ್ಯಕ್ಷ ಶೈಲೇಶ್ ಆರ್ ಹಳ್ದಿಪುರ, ಸಾಮಾಜಿಕ ಕಾರ್ಯಕರ್ತ ಸ್ಟೀವನ್ ಕುಲಾಸೊ ಮಾತ ನಾಡಿ, ಸಂಸ್ಥೆಯು ವಿಶೇಷ ಮಕ್ಕಳ ಕಲ್ಯಾಣದ ಬಗ್ಗೆ ಕಾಳಜಿ ವಹಿಸಿರುವುದು ನಿಜಕ್ಕೂ ಮೆಚ್ಚುವಂಥದ್ದು ಎಂದು ಶುಭ ಹಾರೈಸಿದರು.

ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯ ಗ್ರಾಹಕರದ ಫೆಲಿಕ್ಸ್ ಫೆರ್ನಾಂಡಿಸ್, ಮೇರಿ ಡಿ ಸೋಜಾ ಮತ್ತು ಸೀಮಾ ಎಸ್ ಹಳ್ದಿಪುರ, ಡಾ. ಎಡ್ವರ್ಡ್ ಲೋಬೊ, ಮುಖ್ಯ ಶಿಕ್ಷಕಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಮಾನಸ ವಿಶೇಷ ಮಕ್ಕಳ ಶಾಲೆಯ ಸಂಸ್ಥಾಪಕರು ಮತ್ತು ಅಧ್ಯಕ್ಷರಾದ ಹೆನ್ರಿ ಮಿನೇಜಸ್ ಸ್ವಾಗತಿಸಿದರೆ, ಶಿಕ್ಷಕಿ ರೀಮಾ ಡಿ ಸೋಜ ಕಾರ್ಯಕ್ರಮ ನಿರೂಪಿಸಿದರು. ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಲಿ ನ ಶಾಖಾ ವ್ಯವಸ್ಥಾಪಕರಾದ ಫೆಲ್ಸಿ ಡಿ ಸೋಜ ವಂದಿಸಿದರು. ಈ ಸಂಧರ್ಭದಲ್ಲಿ ಸಂಸ್ಥೆಯ ಲೆಕ್ಕ ವ್ಯವಸ್ಥಾಪಕರಾದ ಕುಮಾರ್ ಎಚ್ ಎನ್, ಕಿರಿಯ ಸಹಾಯಕರಾದ ದೀಕ್ಷಿತ್ ನಾಯ್ಕ್, ಪರಿಚಾರಕರಾದ ವಿವಿಯನ್ ಮರ್ವಿನ್ ನೊರೋನ್ಹ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X