ಹರೇಕಳ ಶ್ರೀ ರಾಮಕೃಷ್ಣ ಅನುದಾನಿತ ಪ್ರೌಢಶಾಲೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ

ಕೊಣಾಜೆ: ಈ ದಿನವು ನಮ್ಮ ದೇಶದ ಏಕತೆ ಮತ್ತು ಭ್ರಾತೃತ್ವವನ್ನು ಎತ್ತಿ ಹಿಡಿಯುವ ದಿನವಾಗಿದೆ. ಮುಖ್ಯವಾಗಿ ಈ ಸಂದರ್ಭದಲ್ಲಿ ನಾವು ನಮ್ಮ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗವನ್ನು ನೆನಪಿಟ್ಟುಕೊಳ್ಳಬೇಕು ಮತ್ತು ಅವರ ಆಶಯಗಳನ್ನು ಈಡೇರಿಸಲು ಶ್ರಮಿಸಬೇಕು ಎಂದು ಪಾವೂರು ಹರೇಕಳ ತ್ರಿಶಕ್ತಿ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಕೆ ಎನ್ ಆಳ್ವ ಹೇಳಿದರು.
ಇವರು ಹರೇಕಳ ಶ್ರೀ ರಾಮಕೃಷ್ಣ ಅನುದಾನಿತ ಪ್ರೌಢಶಾಲೆ ಮತ್ತು ಪಾವೂರು ಹರೇಕಳ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವತಿಯಿಂದ ನಡೆದ 79ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ನಡೆದ ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿದರು.
ಶಾಲಾ ಆಡಳಿತ ಮಂಡಳಿಯ ಪ್ರಧಾನ ಕಾರ್ಯದರ್ಶಿ ರಾಜಕುಮಾರ್ ಶೆಟ್ಟಿ ಮಂಚವುದಡಿ, ಆಂಗ್ಲ ಮಾಧ್ಯಮ ಶಾಲೆಯ ಸಂಚಾಲಕರು ದುರ್ಗಾಪ್ರಸಾದ್ ರೈ ಕಲ್ಲಾಯಿ, ಸಮಾಜ ಸೇವಕರಾದ ನರಸಿಂಹ ನಾಯ್ಕ್ ಪಂಜಿಲಗುರಿ,ಮುಂತಾದವರು ಉಪಸ್ಥಿತರಿದ್ದರು.
ಅಧ್ಯಕ್ಷತೆಯನ್ನು ಶಾಲಾ ಸಂಚಾಲಕರು ಕಡೆಂಜ ಸೋಮಶೇಖರ್ ಚೌಟ ವಹಿಸಿದ್ದರು. ಈ ಸಂದರ್ಭದಲ್ಲಿ ಮಕ್ಕಳಿಂದ ಭಾಷಣ ಸ್ಪರ್ಧೆ, ದೇಶಭಕ್ತಿ ಸ್ಪರ್ಧೆ ಹಮ್ಮಿಕೊಂಡು ವಿಜೇತರಿಗೆ ಬಹುಮಾನ ನೀಡಿ ಗೌರವಿಸಲಾಯಿತು.
ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರು ರಾಧಾಕೃಷ್ಣ ರೈ, ರಾಮಕೃಷ್ಣ ಪ್ರೌಢಶಾಲೆ ಮುಖ್ಯ ಶಿಕ್ಷಕಿ ಮೋಹಿನಿ ಅವರು ಸ್ವಾಗತಿಸಿದರು. ಶಿಕ್ಷಕ ಶಿವಕುಮಾರ್ ವಂದಿಸಿದರು. ದೈಹಿಕ ಶಿಕ್ಷಣ ಶಿಕ್ಷಕರಾದ ತ್ಯಾಗಮ್ ಹರೇಕಳ ಮತ್ತು ಶಿಕ್ಷಕರಾದ ರವಿಶಂಕರ್ ನಿರೂಪಿಸಿದರು.
ಜಂಟಿ ವಿದ್ಯಾ ಸಂಸ್ಥೆಗಳ ಶಿಕ್ಷಕರು, ಸಿಬ್ಬಂದಿ, ಮಕ್ಕಳು ಉಪಸ್ಥಿತರಿದ್ದರು.







