ದ್ವೇಷ ಭಾಷಣ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿಗೆ ಜಾಮೀನು ರಹಿತ ವಾರಂಟ್

ಬೆಳ್ತಂಗಡಿ: ಖಾಸಗಿ ಕಾರ್ಯಕ್ರಮದಲ್ಲಿ ದ್ವೇಷ ಭಾಷಣ ಮಾಡಿದ್ದ ಬಗ್ಗೆ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಬೆಳ್ತಂಗಡಿ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆಗೆ ನಿರಂತರ ಗೈರುಹಾಜರಾಗಿರುವ ಹಿನ್ನೆಲೆಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಬೆಳ್ತಂಗಡಿ ನ್ಯಾಯಾಲಯ ಜಾಮೀನು ರಹಿತ ವಾರಂಟ್ ಹೊರಡಿಸಿದೆ.
ಇಂದಬೆಟ್ಟುವಿನಲ್ಲಿ ನಡೆದ ಖಾಸಗಿ ಕಾರ್ಯಕ್ರಮದಲ್ಲಿ ಜಾತಿಯ ಬಗ್ಗೆ ದ್ವೇಷ ಭಾಷಣ ಮಾಡಿದ ವಿಚಾರವಾಗಿ ಬೆಳ್ತಂಗಡಿ ಠಾಣೆಯಲ್ಲಿ ಕಿಶೋರ್ ಕುಮಾರ್ ಎಂಬವರು ದಾಖಲಿಸಿದ್ದ ದೂರಿನಂತೆ ಪ್ರಕರಣ ದಾಖಲಿಸಲಾಗಿತ್ತು. ಬೆಳ್ತಂಗಡಿ ಪೊಲೀಸರು ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದು ಪ್ರಕರಣದ ವಿಚಾರಣೆ ನಡೆಯುತ್ತಿದೆ. ವಿಚಾರಣೆಗೆ ಪದೇ ಪದೇ ನ್ಯಾಯಾಲಯಕ್ಕೆ ಗೈರಾಗುತ್ತಿರುವ ಹಿನ್ನೆಲೆಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿಗೆ ಡಿ.24ರಂದು ಬೆಳ್ತಂಗಡಿ ನ್ಯಾಯಾಲಯ ಬಂಧನದ ವಾರಂಟ್ ಜಾರಿ ಮಾಡಿದೆ.
ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಗಡಿಪಾರು ಮಾಡಿ ಪುತ್ತೂರು ಎ.ಸಿ. ಆದೇಶ ಹೊರಡಿಸಿದ್ದರು.
ಇದೀಗ ಅವರ ವಿರುದ್ಧ ಮತ್ತೆ ವಾರೆಂಟ್ ಜಾರಿಯಾಗಿದೆ.





