Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ‘ಗೋಬ್ಯಾಕ್’ ಅನ್ನಿಸಿಕೊಳ್ಳುವ ಪರಿಸ್ಥಿತಿ...

‘ಗೋಬ್ಯಾಕ್’ ಅನ್ನಿಸಿಕೊಳ್ಳುವ ಪರಿಸ್ಥಿತಿ ನನಗೆ ಬಂದಿಲ್ಲ: ರಘುಪತಿ ಭಟ್

ವಾರ್ತಾಭಾರತಿವಾರ್ತಾಭಾರತಿ1 Jun 2024 3:43 PM IST
share
‘ಗೋಬ್ಯಾಕ್’ ಅನ್ನಿಸಿಕೊಳ್ಳುವ ಪರಿಸ್ಥಿತಿ ನನಗೆ ಬಂದಿಲ್ಲ: ರಘುಪತಿ ಭಟ್

ಮಂಗಳೂರು, ಜೂ.1: ನನ್ನನ್ನು ಕ್ಷೇತ್ರದಲ್ಲಿ ಮತದಾರರು ನಿರ್ಲಕ್ಷ್ಯ ಮಾಡಿಲ್ಲ. ಒಂದು ಚುನಾವಣೆಯನ್ನೂ ಸೋತಿಲ್ಲ. ಕಾರ್ಯಕರ್ತರು ನನ್ನನ್ನು ವಿರೋಧಿಸಿ ಗೋಬ್ಯಾಕ್ ಅಂದಿಲ್ಲ. ನಮ್ಮಲ್ಲಿ ಗೋಬ್ಯಾಕ್ ಅಂದವರಿಗೇ ಬೇರೆ ಕ್ಷೇತ್ರದಲ್ಲಿ ಟಿಕೆಟ್ ನೀಡಲಾಗಿದೆ. ನನಗೆ ಅಂತಹ ಪರಿಸ್ಥಿತಿ ಬಂದಿಲ್ಲ ಎಂದು ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ರಘುಪತಿ ಭಟ್ ಬಿಜೆಪಿ ನಾಯಕರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನಗರದ ಪ್ರೆಸ್‌ಕ್ಲಬ್‌ನಲ್ಲಿ ಶನಿವಾರ ಸುದ್ದಿಗೋಷ್ಟಿಯ ಸಂದರ್ಭ, ಕೆಲವರಿಗೆ ಅಧಿಕಾರ ಇಲ್ಲದೆ ಇರಲು ಆಗದು ಎಂಬ ಬಿ.ಎಲ್. ಸಂತೋಷ್ ಅವರ ಹೇಳಿಕೆ ಕುರಿತಂತೆ ಸುದ್ದಿಗಾರರ ಪ್ರಶ್ನೆಗೆ ಈ ಪ್ರತಿಕ್ರಿಯೆ ನೀಡಿದರು.

ಅವರು ಈ ಮಾತನ್ನು ಎಲ್ಲರನ್ನೂ ಉದ್ದೇಶಿಸಿ ಹೇಳಿರಬಹುದು. 70 ವರ್ಷ ಮೇಲ್ಪಟ್ಟವರು, ಸೋತವರನ್ನೂ ಲೋಕಸಭೆಗೆ ನಿಲ್ಲಿಸಲಾಗಿದೆ. ತಾನು ಮುಖ್ಯಮಂತ್ರಿಯಾಗಬೇಕು, ತನ್ನ ಪುತ್ರ ಅಧ್ಯಕ್ಷನಾಗಬೇಕು ಎಂಬ ನಾಯಕರಿಗೂ ಹೇಳಿರಬಹುದು. ನಾನು ಈ ಸ್ಪರ್ಧೆ ಮಾಡಲು ಕಾರಣ ನಾನು ಸಕ್ರಿಯವಾಗಿ ಜನಪ್ರತಿನಿಧಿಯಾಗಿದ್ದವನು. ಚುನಾವಣಾ ರಾಜಕೀಯದಿಂದ ಹಿಂದೆ ಸರಿಯುವ ವಯಸ್ಸು ನನ್ನದಲ್ಲ. ವಿಧಾನ ಪರಿಷತ್ ಪಕ್ಷದಲ್ಲಿ ಅವಕಾಶ ವಂಚಿತರಿಗೆ ನೀಡುವ ಸ್ಥಾನಮಾನ. ನಾನು ಈ ಚುನಾವಣೆಯಲ್ಲಿ ಸ್ಪರ್ಧಿಸದಿದ್ದರೆ ಮತ್ತೆ ಚುನಾವಣಾ ರಾಜಕೀಯದಲ್ಲಿ ಇರಲು ಸಾಧ್ಯವಾಗದು. ಕೇವಲ ಕಾರ್ಯಕರ್ತನಾಗಿ ಇರಬೇಕಾಗುತ್ತದೆ. ವಿಧಾನಸಭೆಗೆ ಇನ್ನು ನಾಲ್ಕು ವರ್ಷ ಕಾಯುವುದಾದರೆ ಅಲ್ಲಿ ನಾನೇ ಗೆಲ್ಲಿಸಿದ ಶಾಸಕರಿದ್ದು, ಮತ್ತೆ ಸ್ಪರ್ಧಿಸಲು ಆಗದು. ಲೋಕಸಭೆಯಲ್ಲಿ ನಮ್ಮದು ಸಣ್ಣ ಮತದಾರರ ಜಾತಿ ಎನ್ನುವ ಕಾರಣಕ್ಕೆ ಸ್ಪರ್ಧೆ ಸಾಧ್ಯವಿಲ್ಲ. ವಿಧಾನ ಪರಿಷತ್‌ನಿಂದಲೂ ನೀಡುವ ಸಾಧ್ಯತೆ ಇಲ್ಲ.ಹಾಗಾಗಿ ಪದವೀಧರ ಮತದಾರರನ್ನು ವಿಶ್ವಾಸದಲ್ಲಿಟ್ಟು ಸ್ಪರ್ಧಿಸುತ್ತಿದ್ದೇನೆ ಎಂದರು.

ಹಿರಿಯ ಕಾರ್ಯಕರ್ತನಿಗೆ ಟಿಕೆಟ್ ತಪ್ಪುವುದು ಟಿವಿಯಲ್ಲಿ ಪ್ರಕಟವಾದಾಗ ತಿಳಿಯುವುದಲ್ಲ. ನಾಯಕರು ಕರೆದು ಈ ರೀತಿಯ ಸಾಮಾಜಿಕ ನ್ಯಾಯಕ್ಕಾಗಿ ನೀಡಲಾಗುವುದಿಲ್ಲ ಎಂಬುದನ್ನು ಮನವರಿಕೆ ಮಾಡುವ ವ್ಯವಸ್ಥೆ ಆಗಬೇಕು. ಕೊನೆಯವರೆಗೂ ಟಿಕೆಟ್ ಕೊಡುವುದಾಗಿ ಹೇಳಿ ತಪ್ಪಿಸುವುದು ಸರಿಯಲ್ಲ. ಚುನಾವಣೆಯಲ್ಲಿ ಅಭ್ಯರ್ಥಿಗಳನ್ನು ಆಯ್ಕೆ ಮಾಡುವಾಗ ಪಕ್ಷದ ಮಾನದಂಡಗಳನ್ನು ಅವರು ಆತ್ಮವಿಮರ್ಶೆ ಮಾಡಬೇಕಾಗಿದೆ ಎಂದು ಮಾತಿನ ಮೂಲಕ ಕುಟುಕಿದರು.

ಸುಮಾರು 25 ಲಕ್ಷ ಪದವೀಧರರು ಪ್ರತಿನಿಧಿಸುವ ಕ್ಷೇತ್ರದಲ್ಲಿ ಮತದಾರರ ಸಂಖ್ಯೆ 85000 ಮಾತ್ರ ಆಗಿದ್ದು, ಈ ವ್ಯವಸ್ಥೆಯನ್ನು ಬದಲಿಸಬೇಕಾಗಿದೆ. ಮುಂದೆ ಗೆದ್ದು ಬಂದಾಗ ಈ ಬಗ್ಗೆ ಪರಿಷತ್‌ನಲ್ಲಿ ಧ್ವನಿ ಎತ್ತಲಿದ್ದೇನೆ ಎಂದು ಅವರು ಹೇಳಿದರು.

ಒಮ್ಮೆ ಪದವಿ ದೊರಕಿದ ಬಳಿಕ ಶಾಶ್ವವಾಗಿರುತ್ತದೆ. ಹಾಗಿರುವಾಗ ಆರು ವರ್ಷಗಳಿಗೊಮ್ಮೆ ನೋಂದಣಿ ಮಾಡಿಕೊಳ್ಳುವ ವ್ಯವಸ್ಥೆ ಅನಗತ್ಯ. ಇಂತಹ ವ್ಯವಸ್ಥೆಗಳಿಂದಾಗಿ ಸೀಮಿತ ಮತದಾರರ ನಡುವೆ ಮಾತ್ರವೇ ಸ್ಪರ್ಧೆಗೆ ಸಾಧ್ಯವಾಗುತ್ತಿದ್ದು, ಈ ವ್ಯವಸ್ಥೆಯನ್ನು ಬದಲಿಸಬೇಕಿದೆ ಎಂದು ಅವರು ಹೇಳಿದರು.

ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಹಿಂದೆ ಪಕ್ಷದ ಆಧಾರದಲ್ಲಿ ಗೆಲುವು ಸಾಧಿಸಲಾಗುತ್ತಿತ್ತು. ಆದರೆ ಈ ಬಾರಿ ಗೆಲುವಿಗೆ ವ್ಯಕ್ತಿಗಳ ಸಾಧನೆಯೇ ಪ್ರಮುಖವಾಗಲಿದೆ ಎಂದವರು ಹೇಳಿದರು.

ಪದವೀಧರ ಮತದಾರರು ಪ್ರಬುದ್ಧರಾಗಿದ್ದು, ಅವರು ಎಲ್ಲಾ ವಿಚಾರ ತಿಳಿದು ಮತದಾನ ಮಾಡುವ ವಿಶ್ವಾಸವಿದೆ. ಐದೂವರೆ ಜಿಲ್ಲೆಗಳ ವ್ಯಾಪ್ತಿಯನ್ನು ಹೊಂದಿರುವ ನೈರುತ್ಯ ಕ್ಷೇತ್ರದ ವಿವಿಧ ಕಡೆ ಭೇಟಿ ನೀಡಿ ಮತಯಾಚನೆಯ ವೇಳೆ ಮತದಾರರಿಗೆ ನನ್ನನ್ನು ಪರಿಚಯಿಸುವ ಅಗತ್ಯ ಬಂದಿಲ್ಲ. ಶಾಸಕನಾಗಿ ನಾನು ಮಾಡಿದ ಸಾಧನೆಗಳೇ ಮತದಾರರ ಗಮನದಲ್ಲಿದೆ. ಮಾತ್ರವಲ್ಲದೆ ಸಾಧನೆಯ ಪಟ್ಟಿಯನ್ನು ಮತದಾರರಿಗೆ ಅಂಚೆ ಮೂಲಕ ಕಳುಹಿಸುವ ಕಾರ್ಯವನ್ನೂ ಮಾಡಿದ್ದೇನೆ. ಸಮಯದ ಅಭಾವದಿಂದ ಕೆಲವೆಡೆ ಭೇಟಿ ನೀಡಲು ಆಗಿಲ್ಲ. ಗೆದ್ದ ಮೇಲೆ ಮತದಾರರ ಜತೆ ನಿಕಟ ಸಂಪರ್ಕ ಇರಿಸಿಕೊಂಡು ಕಾರ್ಯ ನಿರ್ವಹಿಸುವ ಭರವಸೆ ನೀಡುವುದಾಗಿ ಅವರು ಹೇಳಿದರು.

ಕರಾವಳಿಯ ಪ್ರತಿಯೊಂದು ಸಮಸ್ಯೆಗಳ ಅರಿವಿದೆ. ಮಲೆನಾಡಿನ ಸ್ಥಳೀಯ ಸಮಸ್ಯೆಗಳ ಬಗ್ಗೆ ಅಧ್ಯಯನ ಮಾಡಿಕೊಂಡು ಅಲ್ಲಿನ ಜನರ ಧ್ವನಿಯಾಗಿ ಇರಲಿದ್ದೇನೆ. ಇದಲ್ಲದೆ ಪದವೀಧರರ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಅಂಕಿಅಂಶ ಆಧಾರಿತ ಜಾಲವೊಂದನ್ನು ರಚಿಸಿ ಚರ್ಚೆ ಮಾಡುವ ನಿಟ್ಟಿನಲ್ಲಿ ಆಲೋಚನೆ ಮಾಡಿದ್ದೇನೆ. ಸರಕಾರಿ ಉದ್ಯೋಗಕಕ್ಕೆ ಸೇರಲು ಬಯಸುವ ಪದವೀಧರರಿಗೆ ಜಿಲ್ಲಾ ಕೇಂದ್ರಗಳಲ್ಲಿ ತರಬೇತಿ ವ್ಯವಸ್ಥೆ ರೂಪಿಸುವ ನಿಟ್ಟಿನಲ್ಲಿಯೂ ಕ್ರಮ ವಹಿಸುವುದಾಗಿ ಅವರು ರಘುಪತಿ ಭಟ್ ಭರವಸೆ ನೀಡಿದರು.

ಸುದ್ದಿಗೋಷ್ಟಿಯಲ್ಲಿ ಅಶ್ವಿನ್ ಕುಮಾರ್, ನವೀನ್‌ಚಂದ್ರ, ಸೂರಜ್, ರಾಘವೇಂದ್ರ, ಕೃಷ್ಣ ಶೆಣೈ, ಸಂತೋಷ್ ರಾವ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X