Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬಜೆಟ್‌ನಲ್ಲಿ ದ.ಕ. ಜಿಲ್ಲೆಗೆ ಅನ್ಯಾಯ:...

ಬಜೆಟ್‌ನಲ್ಲಿ ದ.ಕ. ಜಿಲ್ಲೆಗೆ ಅನ್ಯಾಯ: ಸತೀಶ್ ಕುಂಪಲ

ಅಲ್ಪಸಂಖ್ಯಾತರ ಓಲೈಕೆ ಆರೋಪಿಸಿ ಬಿಜೆಪಿ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ8 March 2025 2:37 PM IST
share
ಬಜೆಟ್‌ನಲ್ಲಿ ದ.ಕ. ಜಿಲ್ಲೆಗೆ ಅನ್ಯಾಯ: ಸತೀಶ್ ಕುಂಪಲ

ಮಂಗಳೂರು, ಮಾ.8: ನಮ್ಮ ತೆರಿಗೆ, ನಮ್ಮ ಹಕ್ಕು ಎಂದು ಎಂದು ಡಂಗುರ ಸಾರಿದ ಸಿಎಂ ಸಿದ್ದರಾಮಯ್ಯ ಅವರು ಈಗ ಬಜೆಟ್‌ನಲ್ಲಿ ದ.ಕ. ಜಿಲ್ಲೆಗೆ ಅನ್ಯಾಯ ಮಾಡಿದ್ದಾರೆ. ಹಿಂದುಗಳ ತೆರಿಗೆ, ಮುಸ್ಲಿಮರ ಹಕ್ಕು ಎನ್ನುವಂತಾಗಿದೆ. ಇದರಿಂದ ಬಹುಸಂಖ್ಯಾತ ಹಿಂದುಗಳಿಗೆ ಅನ್ಯಾಯ ಮಾಡಿದ್ದಾರೆ. ಎಂದು ದ.ಕ.ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಆರೋಪಿಸಿದ್ದಾರೆ.

ರಾಜ್ಯ ಸರ್ಕಾರದ ಬಜೆಟ್‌ನಲ್ಲಿ ನಿರ್ಲಕ್ಷ್ಯ, ಅಲ್ಪಸಂಖ್ಯಾತರ ಓಲೈಕೆ ಮಾಡುತ್ತಿದೆ ಎಂದು ಆರೋಪಿಸಿ ದ.ಕ. ಬಿಜೆಪಿ ವತಿಯಿಂದ ಮಂಗಳೂರಿನ ಜಿಲ್ಲಾ ಬಿಜೆಪಿ ಕಚೇರಿ ಎದುರು ಶನಿವಾರ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

ಪುತ್ತೂರು ಸರ್ಕಾರಿ ಆಸ್ಪತ್ರೆಯನ್ನು 100 ಹಾಸಿಗೆ ಮೇಲ್ದರ್ಜೆಗೆ ಏರಿಸಿದರೂ ಮೆಡಿಕಲ್ ಕಾಲೇಜು ಸ್ಥಾಪನೆಗೆ ಅನುದಾನ ತೋರಿಸಿಲ್ಲ. ಮೀನುಗಾರಿಕೆ ಅಭಿವೃದ್ಧಿಗೆ ಹೊಸ ಯೋಜನೆ ಇಲ್ಲ. ಬದಲು ಖಬರಸ್ಥಾನಕ್ಕೆ ಅನುದಾನ ಘೋಷಿಸಲಾಗಿದೆ. ಎಸ್‌ಸಿ ಎಸ್‌ಟಿಗಳಿಗೆ ಅಗತ್ಯ ಅನುದಾನ ಮೀಸಲಿರಿಸಿಲ್ಲ. 1 ಸಾವಿರ ಕೋಟಿ ರು.ಗಳನ್ನು ಅಲ್ಪಸಂಖ್ಯಾತರ ಅಭಿವೃದ್ಧಿಗೆ ನೀಡಲಾಗಿದೆ. ಸದೃಢ ಸರ್ಕಾರ ಎಂದು ಹೇಳಿದರೂ ಭರವಸೆ ಮಾತ್ರ, ಅನುಷ್ಠಾನ ವಿಫಲ. ಇದು ಜನವಿರೋಧಿ ಸರ್ಕಾರವಾಗಿದೆ ಎಂದರು.

ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಡಾ. ಮಂಜುಳಾ ರಾವ್ ಮಾತನಾಡಿ, ಮಹಿಳೆಯ ಅಭಿವೃದ್ಧಿ ಮಾಡುತ್ತೇವೆ ಎಂದು ಹೇಳಿ ಆಡಳಿತಕ್ಕೆ ಬಂದ ರಾಜ್ಯ ಸರ್ಕಾರ ಮಹಿಳೆಯರಿಗೆ ಶೂನ್ಯ ಬಜೆಟ್ ಕೊಟ್ಟಿದೆ. ಮಹಿಳೆಯರನ್ನು ತುಳಿಯುವ ಕೆಲಸ ಮಾಡಿದೆ. ನಿಗದಿತ ದಿನಾಂಕದಂದು ಮಹಿಳೆಯರ ಖಾತೆಗೆ 2 ಸಾವಿರ ರು. ಪಾವತಿಸುತ್ತಿಲ್ಲ. ಎರಡ್ಮೂರು ತಿಂಗಳಿಗೊಮ್ಮೆ ಪಾವತಿಸುತ್ತಿದ್ದಾರೆ. ಸರ್ಕಾರದ ಈ ಗ್ಯಾರಂಟಿಗಳನ್ನು ನಂಬುವಷ್ಟು ಮಹಿಳೆಯರು ಮೂರ್ಖರಲ್ಲ. ಮಹಿಳೆಯರು ಮನಸ್ಸು ಮಾಡಿದರೆ ಸಿಎಂ ಗದ್ದುಗೆಯಿಂದ ಇಳಿಯಲೇ ಬೇಕು. ಸಿಎಂ ಗದ್ದುಗೆಯಿಂದ ಇಳಿದ ದಿನವೇ ನಮಗೆ ಮಹಿಳಾ ದಿನಾಚರಣೆ ಎಂದರು.

ಮುಖಂಡರಾದ ಪ್ರೇಮಾನಂದ ಶೆಟ್ಟಿ, ಸುಧೀರ್ ಶೆಟ್ಟಿ ಕಣ್ಣೂರು, ಯತೀಶ್ ಆರ್ವಾರ್, ರವಿಶಂಕರ್ ಮಿಜಾರ್, ರವೀಂದ್ರ ಶೆಟ್ಟಿ ಉಳಿದೊಟ್ಟು, ರಮೇಶ ಕಂಡೆಟ್ಟು, ರಾಕೇಶ್ ರೈ, ಶಾಂತಿಪ್ರಸಾದ್ ಹೆಗ್ಡೆ, ಪೂರ್ಣಿಮಾ, ಕವಿತಾ ಸನಿಲ್, ಮನೋಜ್ ಕುಮಾರ್, ದಿವಾಕರ ಪಾಂಡೇಶ್ವರ, ವಸಂತ ಪೂಜಾರಿ ಮತ್ತಿತರರಿದ್ದರು.

ಬಳಿಕ ಬಿಜೆಪಿ ಕಚೇರಿಯಿಂದ ನವಭಾರತ ವೃತ್ತದ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ಪಿವಿಎಸ್ ಜಂಕ್ಷನ್‌ಗೆ ಸಾಗಿ, ಅಲ್ಲಿಂದ ವಾಪಸ್ ಪಕ್ಷದ ಕಚೇರಿಗೆ ಆಗಮಿಸಿ ಕೊನೆಗೊಳಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X