ಮುಕ್ಕ ಶ್ರೀನಿವಾಸ ಆಸ್ಪತ್ರೆಯಲ್ಲಿ ಸುಟ್ಟ ಗಾಯಗಳ ಚಿಕಿತ್ಸಾ ಘಟಕ ಉದ್ಘಾಟನೆ

ಮಂಗಳೂರು: ಮುಕ್ಕದಲ್ಲಿರುವ ಶ್ರೀನಿವಾಸ ಆಸ್ಪತ್ರೆಯಲ್ಲಿ ಸುಟ್ಟಗಾಯಗಳ ಚಿಕಿತ್ಸಾ ಘಟಕ ಶನಿವಾರ ಆರಂಭಗೊಂಡಿತು.
ಮುಖ್ಯ ಅತಿಥಿ ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್(ಎಂಆರ್‌ಪಿಎಲ್) ವ್ಯವಸ್ಥಾಪಕ ನಿರ್ದೇಶಕ ಸಂಜಯ್ ವರ್ಮ ಸುಟ್ಟಗಾಯಗಳ ಘಟಕದ ಸ್ಥಾಪನೆಯನ್ನು ಶ್ಲಾಘಿಸಿದರು. ಶ್ರೀನಿವಾಸ ವಿಶ್ವವಿದ್ಯಾಲಯದ ಸಹ-ಕುಲಾಧಿಪತಿ ಡಾ.ಎ. ಶ್ರೀನಿವಾಸ್ ರಾವ್ ಮಾತನಾಡಿ ಶ್ರೀನಿವಾಸ ಆಸ್ಪತ್ರೆಯ ತಜ್ಞ ವೈದ್ಯಕೀಯ ಸಿಬ್ಬಂದಿಯ ಶ್ರಮವನ್ನು ಶ್ಲಾಘಿಸಿದರು.
ಶ್ರೀನಿವಾಸ ವಿಶ್ವವಿದ್ಯಾಲಯದ ಕುಲಾಧಿಪತಿ ಮತ್ತು ಎ. ಶಾಮರಾವ್ ಪ್ರತಿಷ್ಠಾನದ ಅಧ್ಯಕ್ಷ ಡಾ.ಸಿ.ಎ.ಎ. ರಾಘವೇಂದ್ರ ರಾವ್ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಶ್ರೀನಿವಾಸ ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ಡಾ. ಅನಿಲ್ ಕುಮಾರ್, ಡಾ. ಡೇವಿಡ್ ಡಿ.ಎಂ ರೊಸಾರಿಯೊ, ಸಿಮ್ಸ್ ಮತ್ತು ಆರ್ಸಿ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ, ಡಾ. ಉದಯ ಕುಮಾರ್ ರಾವ್, ಸಿಮ್ಸ್ ಮತ್ತು ಆರ್ಸಿ ಡೀನ್, ಡಾ. ಅನಿತಾ ಸೆಕ್ವೇರಾ ಮೆಡಿಸಿನ್ ವಿಭಾಗದ ಮುಖ್ಯಸ್ಥೆ, ಫ್ರೀಡಾ ಡಿಸೋಜ, ಶ್ರೀನಿವಾಸ ಆಸ್ಪತ್ರೆಯ ವ್ಯವಸ್ಥಾಪಕಿ ಮತ್ತಿತರರು ಉಪಸ್ಥಿತರಿದ್ದರು. ಅದ್ವಿತಿ ಕೊಟ್ಟಾರಿ ಕಾರ್ಯಕ್ರಮ ನಿರೂಪಿಸಿದರು.





