Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು: ಜಿಲ್ಲಾ ಕೇಂದ್ರ ಗ್ರಂಥಾಲಯದ...

ಮಂಗಳೂರು: ಜಿಲ್ಲಾ ಕೇಂದ್ರ ಗ್ರಂಥಾಲಯದ ಕೇಂದ್ರ ಕಚೇರಿಯ ನೂತನ ಕಟ್ಟಡ ಉದ್ಘಾಟನೆ

ಸ್ಪರ್ಧಾತ್ಮಕ ಪರೀಕ್ಷೆಯ ತಯಾರಿ ನಡೆಸುವವರಿಗೆ ಸೌಲಭ್ಯ: ದಿನೇಶ್ ಗುಂಡೂರಾವ್

ವಾರ್ತಾಭಾರತಿವಾರ್ತಾಭಾರತಿ18 Feb 2025 12:01 AM IST
share
ಮಂಗಳೂರು: ಜಿಲ್ಲಾ ಕೇಂದ್ರ ಗ್ರಂಥಾಲಯದ ಕೇಂದ್ರ ಕಚೇರಿಯ ನೂತನ ಕಟ್ಟಡ ಉದ್ಘಾಟನೆ

ಮಂಗಳೂರು: ಗ್ರಂಥಾಲಯಗಳು ಆಧುನಿಕ ವ್ಯವಸ್ಥೆಯತ್ತ ಸಾಗುತ್ತಿದ್ದು, ಯೆಯ್ಯಾಡಿಯ ಜಿಲ್ಲಾ ಕೇಂದ್ರ ಗ್ರಂಥಾಲಯದ ಕಟ್ಟಡದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುವವರಿಗೆ ಉತ್ತಮ ಸೌಲಭ್ಯವನ್ನು ಇಲ್ಲಿ ಕಲ್ಪಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ನಗರದ ಯೆಯ್ಯಾಡಿಯಲ್ಲಿ ಸಾರ್ವಜನಿಕ ಗ್ರಂಥಾಲಯ ಇಲಾಖೆಯ ದ.ಕ. ಜಿಲ್ಲಾ ಕೇಂದ್ರ ಗ್ರಂಥಾಲಯದ ಕೇಂದ್ರ ಕಚೇರಿ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದರು.

ಓದಿಗೆ ವಯಸ್ಸಿನ ಮಿತಿ ಇಲ್ಲ. ಓದುವ ಹವ್ಯಾಸ ನಮ್ಮಲ್ಲಿ ಜಾಸ್ತಿಯಾಗಬೇಕು. ಅದರಲ್ಲೂ ಯುವಜನರು ಈ ನಿಟ್ಟಿನಲ್ಲಿ ಗಮನ ಹರಿಸಬೇಕು ಎಂದ ಅವರು ಪತ್ರಿಕೆ, ಮ್ಯಾಗಝಿನ್, ಕತೆ, ಕಾದಂಬರಿಗಳ ಓದುವುದರಿಂದ ನಮಗೆ ಹೆಚ್ಚಿನ ಜ್ಞಾನ ಸಿಗುತ್ತದೆ. ಇವತ್ತು ಸಾಮಾಜಿಕ ಮಾಧ್ಯಮಗಳ ಬಳಕೆ ನಮ್ಮಲ್ಲಿ ಜಾಸ್ತಿಯಾಗಿದೆ. ಇದರಿಂದ ಏನು ಪ್ರಯೋಜನ ಇಲ್ಲ ಎಂದರು.

ಮಂಗಳೂರು ನಗರ ದಕ್ಷಿಣ ಕ್ಷೇತ್ರದ ಶಾಸಕ ಡಿ.ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸಿದ್ದರು.

ವಿಧಾನ ಪರಿಷತ್ ಸದಸ್ಯ ಐವನ್ ಡಿ ಸೋಜ, ಮಹಾನಗರಪಾಲಿಕೆಯ ಸದಸ್ಯರಾದ ಶಶಿಕಲಾ ಕಾವ, ಎ.ಸಿ. ವಿನಯ್‌ರಾಜ್ , ಗೇರು ನಿಗಮದ ಅಧ್ಯಕ್ಷೆ ಮಮತಾ ಡಿಎಸ್ ಗಟ್ಟಿ, ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಆಯುಕ್ತ ಜಯವಿಭವ ಸ್ವಾಮಿ , ಜಿಲ್ಲಾ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ ಗಾಯತ್ರಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಉದ್ಘಾಟನೆ ಮಾತ್ರವಲ್ಲ ಶಿಲಾನ್ಯಾಸ ಭಾಗ್ಯವೂ ಐವನ್‌ ರಿಗೆ ಸಿಗಲಿ ಎಂದ ವೇದವ್ಯಾಸ ಕಾಮತ್

ಜಿಲ್ಲಾ ಕೇಂದ್ರ ಗ್ರಂಥಾಲಯದ ಕೇಂದ್ರ ಕಚೇರಿಯ ಕಟ್ಟಡಕ್ಕೆ ಶಿಲಾನ್ಯಾಸ ಅವಕಾಶ ನನಗೆ ಲಭಿಸಿತ್ತು. ಇದೀಗ ಕಾಮಗಾರಿ ಪೂರ್ಣಗೊಂಡು ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ಭಾಗ್ಯವೂ ಲಭಿಸಿದೆ. ವಿಧಾನ ಪರಿಷತ್ ಸದಸ್ಯ ಐವನ್ ಡಿ ಸೋಜ ಅವರಿಗೆ ಹಲವು ಕಾಮಗಾರಿಗಳ ಉದ್ಘಾಟನಾ ಭಾಗ್ಯದೊಂದಿಗೆ ಶಿಲಾನ್ಯಾಸ ಅವಕಾಶವೂ ಲಭಿಸಲಿ ಎಂದು ಶಾಸಕ ವೇದವ್ಯಾಸ ಕಾಮತ್ ಅವರು ಸೋಮವಾರ ಕುಟುಕಿದ ಪ್ರಸಂಗವೂ ನಡೆಯಿತು.

ಇತ್ತೀಚೆಗೆ ಜಿಲ್ಲಾ ಉಸ್ತುವಾರಿ ಸಚಿವರನ್ನು ಕಡೆಗಣಿಸಿ ಮಂಗಳಾದೇವಿಯಲ್ಲಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಕಟ್ಟಡ , ಪಶುಚಿಕಿತ್ಸಾ ಕೇಂದ್ರದ ನೂತನ ಕಟ್ಟಡ ಸೇರಿದಂತೆ ವಿವಿಧ ಕಾಮಗಾರಿಗಳ ಉದ್ಘಾಟನೆಯನ್ನು ಶಾಸಕ ಡಿ. ವೇದವ್ಯಾಸ ಕಾಮತ್ ಮತ್ತು ಬಿಜೆಪಿಯ ಜನಪ್ರತಿನಿಧಿಗಳು ನೆರವೇರಿಸಿದ್ದರು.

ಇದರ ಬೆನ್ನಲ್ಲೆ ಸಚಿವ ದಿನೇಶ್ ಗುಂಡೂರಾವ್ ಅವರು ಮತ್ತೆ ಅದೇ ಕಾರ್ಯಕ್ರಮಗಳ ಉದ್ಘಾಟನೆ ನೆರವೇರಿಸಿದ್ದರು. ಅದೇ ಕಾರ್ಯಕ್ರಮದಲ್ಲಿ ಸಚಿವ ದಿನೇಶ್ ಗುಂಡೂರಾವ್ ಮತ್ತು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಅವರು ಬಿಜೆಪಿ ಜನಪ್ರತಿನಿಧಿಗಳ ನಡೆಯನ್ನು ಟೀಕಿಸಿದ್ದರು.

ಇಂದು ಮತ್ತೆ ಮೂವರು ವೇದಿಕೆಯಲ್ಲಿ ಒಂದಾದರು. ಇದೇ ವೇಳೆ ವೇದವ್ಯಾಸ ಕಾಮತ್ ಪರೋಕ್ಷವಾಗಿ ಐವನ್‌ ರನ್ನು ಕುಟುಕಿದರು.





share
ವಾರ್ತಾಭಾರತಿ
ವಾರ್ತಾಭಾರತಿ
Next Story
X